ಇಂದು ಬ್ಯಾಂಕ್ ನೌಕರರಿಂದ ಧರಣಿ

Updated on: 


ಬಳ್ಳಾರಿ: ಪ್ರೇರಕ ಬ್ಯಾಂಕ್ ಉದ್ಯೋಗಿಗಳಿಗೆ ದೊರೆಯುತ್ತಿರುವ ಸೌಲಭ್ಯ, ಮತ್ತಿತರೆ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಎಐಆರ್‌ಆರ್‌ಬಿಇಎ ಸಂಯೋಜನೆ ಹೊಂದಿರುವ ಪ್ರಗತಿ ಗ್ರಾಮೀಣ ಬ್ಯಾಂಕ್ ನೌಕರರ ಮತ್ತು ಅಧಿಕಾರಿಗಳ ಸಂಘದಿಂದ ಜ. 30ರಂದು ನಗರದ ಪ್ರಗತಿ ಗ್ರಾಮೀಣ ಬ್ಯಾಂಕ್ ಮುಖ್ಯ ಶಾಖೆ ಎದುರು ಧರಣಿ ಹಮ್ಮಿಕೊಳ್ಳಲಾಗಿದೆ. 2012 ಡಿ. 30ರಂದು ಕೈಗೊಂಡಿದ್ದ ಕ್ರಮಗಳಂತೆ ರಾಷ್ಟ್ರೀಕೃತ ವಾಣಿಜ್ಯ ಬ್ಯಾಂಕ್‌ಗಳ ನೌಕರರಿಗೆ ದೊರೆಯುತ್ತಿರುವ ಸೌಲಭ್ಯಗಳನ್ನು ಗ್ರಾಮೀಣ ಬ್ಯಾಂಕ್ ನೌಕರರಿಗೂ ವಿಸ್ತರಿಸಬೇಕು,  ಇತರೆ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಸಂಘದ ಸಂಚಾಲಕ ಗಣಪತಿ ಹೆಗಡೆ ತಿಳಿಸಿದ್ದಾರೆ.
ನಾಳೆ ಫ್ರೀಡಂ ಪಾರ್ಕ್‌ನಲ್ಲಿ ಧರಣಿ
ಬಳ್ಳಾರಿ: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಆಗ್ರಹಿಸಿ ಜ. 31ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಂಡಿರುವ ಪ್ರತಿಭಟನಾ ಧರಣಿಯಲ್ಲಿ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಸನಾಥಬಂಧು ಪಕ್ಷದ ಸಂಸ್ಥಾಪಕ ಉದಯ ಅಗಸನೂರು ಮನವಿ ಮಾಡಿದ್ದಾರೆ. ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜು. 12ರಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಪ್ರತಿ ಗುರುವಾರ ಧರಣಿ ನಡೆಸಿ, ಆಯಾ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ರವಾನಿಸಲಾಗಿದೆ. ಬೆಂಗಳೂರಿನಲ್ಲಿ ಜ. 31ರಂದು ಧರಣಿ ನಡೆಸಲಾಗುತ್ತದೆ ಎಂದರು. ಗುರುವಾರ ಬೆಳಗ್ಗೆ 11 ಗಂಟೆಗೆ ಪ್ರಾರಂಭವಾಗುವ ಧರಣಿ ಸಂಜೆ 4 ಗಂಟೆಗೆ ಮುಕ್ತಾಯಗೊಂಡು ಶೆಟ್ಟರ್‌ಗೆ ಮನವಿ ಪತ್ರ ನೀಡಲಾಗುತ್ತದೆ ಎಂದು ತಿಳಿಸಿದರು.
ವ್ಯಕ್ತಿ ಆತ್ಮಹತ್ಯೆ
ಹೂವಿನಹಡಗಲಿ: ತಾಲೂಕಿನ ಇಟ್ಟಿಗಿ-ಮೊರಿಗೇರಿ ಮಧ್ಯ ರಸ್ತೆ ಬದಿಯಲ್ಲಿ 55 ವರ್ಷ ವಯಸ್ಸಿನ ಅನಾಮಧೇಯ ವಯೋವೃದ್ಧನೊಬ್ಬ ಬೇವಿನ ಮರಕ್ಕೆ ನೇಣು ಹಾಕಿಕೊಂಡಿರುವ ಘಟನೆ ಸೋಮವಾರ ಸಂಜೆ ಇಟ್ಟಿಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪತ್ತೆಯಾಗಿದೆ.  ವಯೋವೃದ್ಧನು ಬಿಳಿ ಬಣ್ಣದ ಪಂಚೆಯಿಂದಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆದರೆ, ಈತನ ಸಾವಿನ ಬಗ್ಗೆ ಸಂಶಯ ಕಂಡು ಬಂದಿರುತ್ತದೆ ಎಂದು ಪೊಲೀಸರು ತಿಳಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com