ಬಳ್ಳಾರಿ

ಬಿಎಸ್ಸಾರ್ ಕಾರ್ಯಕರ್ತರಿಗೆ ಗುರುತಿನ ಚೀಟಿ, ಸಿಮ್ ವಿತರಣೆ

Published On :




ಕನ್ನಡಪ್ರಭ ವಾರ್ತೆ, ಸಂಡೂರು, ಜ. 31
ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಬಿಎಸ್‌ಆರ್ ಕಾಂಗ್ರೆಸ್ ಸಂಸ್ಥಾಪಕ ಶ್ರೀರಾಮಲು ಅಭಿಮಾನಿಗಳಾದ ಸಂಡೂರು ಪಟ್ಟಣದ ಎಸ್‌ಟಿಡಿ ಗ್ರೂಪ್‌ನವರು ತಾಲೂಕಿನ ಪಕ್ಷದ ಕಾರ್ಯಕರ್ತರಿಗೆ ಗುರುತಿನ ಚೀಟಿ, ಸಿಮ್ ಕಾರ್ಡ್‌ಗಳನ್ನು ಉಚಿತವಾಗಿ ವಿತರಿಸಿದ್ದಾರೆ. ಈ ಮೂಲಕ ಪಕ್ಷಕ್ಕೆ ಹೆಚ್ಚಿನ ಕಾರ್ಯಕರ್ತರನ್ನು ಸೆಳೆಯುವ ಯತ್ನದ ಜತೆಗೆ ಸಂಘಟನೆಗೆ ಭರ್ಜರಿ ತಯಾರಿ ನಡೆಸಿದ್ದಾರೆ.
ಒಂದು ಸಾವಿರ ಸಿಮ್ ಕಾರ್ಡ್: ಬಿಎಸ್‌ಆರ್ ಕಾಂಗ್ರೆಸ್ ಪಕ್ಷವನ್ನು ಬೂತ್ ಮಟ್ಟದಲ್ಲಿ ಬಲಪಡಿಸುವ ಕಾರ್ಯಕ್ರಮಗಳ ಕುರಿತು ಗುರುವಾರ ತಮ್ಮ ಕಚೇರಿಯಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿದ ಬಿಎಸ್‌ಆರ್ ಕಾಂಗ್ರೆಸ್ ಮುಖಂಡ ಈ. (ಎಸ್‌ಟಿಡಿ) ಮಂಜುನಾಥ್, ಈಗಾಗಲೇ ತಾಲೂಕಿನ ಪ್ರತಿ ಬೂತ್ ಮಟ್ಟದಲ್ಲಿ 25ರಿಂದ 30 ಸದಸ್ಯರನ್ನು ಒಳಗೊಂಡ ಸಮಿತಿ ರಚಿಸಲಾಗಿದೆ. ಜನರ ಸಮಸ್ಯೆಗಳಿಗೆ ಸ್ಪಂದಿಸಲು ಸುಮಾರು 25 ಗ್ರಾಮಗಳಲ್ಲಿ ಪಕ್ಷದ ಕಚೇರಿ ತೆರೆಯಲಾಗಿದೆ. ಪಕ್ಷದ ಕಾರ್ಯಕರ್ತರಿಗೆ ಎಸ್‌ಟಿಡಿ ಗ್ರೂಪ್ ವತಿಯಿಂದ ಸುಮಾರು ಎರಡು ಸಾವಿರ ಗುರುತಿನ ಚೀಟಿಗಳನ್ನು ನೀಡಲಾಗಿದೆ. ಅಲ್ಲದೆ ಸುಮಾರು ಒಂದು ಸಾವಿರ ಕಾರ್ಯಕರ್ತರಿಗೆ ಐಡಿಯ ಸಿಮ್ ಕಾರ್ಡ್ ನೀಡಲಾಗಿದೆ ಎಂದು ತಿಳಿಸಿದರು.
ಶ್ರೀರಾಮುಲು ಅವರೇ ಸಂಡೂರು ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂದು ತಾಲೂಕಿನ ಪ್ರತಿಯೊಂದು ಗ್ರಾಮದ ವಿದ್ಯಾವಂತರು, ಯುವಕರು ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ. ಹೀಗಾಗಿ ತಾವೂ ಶ್ರೀರಾಮುಲು ಅವರನ್ನು ಬಿಎಸ್‌ಆರ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಂಡೂರು ಕ್ಷೇತ್ರದಿಂದ ಸ್ಪರ್ಧಿಸುವಂತೆ ಕೋರಿರುವುದಾಗಿ ತಿಳಿಸಿದರು.
ಬಿಎಸ್‌ಆರ್ ಕಾಂಗ್ರೆಸ್ ಮುಖಂಡರಾದ ಧನುಂಜಯ, ಹನುಮಂತ ಉಪಸ್ಥಿತರಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.