ಅರ್ಜಿ ಆಹ್ವಾನ
ಬಳ್ಳಾರಿ: ಸಮಾಜ ಕಲ್ಯಾಣ ಇಲಾಖೆಯು ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ ಬಯಸುವ ಪರಿಶಿಷ್ಟ ಜಾತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿದಾರರು 5 ತರಗತಿಯಲ್ಲಿ ಶೇ. 60ಕ್ಕಿಂತ ಹೆಚ್ಚು ಅಂಕ ಪಡೆದಿರಬೇಕು. ಆಸಕ್ತರು ಆಯಾ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ ಅರ್ಜಿ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಜು. 18ರೊಳಗಾಗಿ ಸಂಬಂಧಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖಾ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ-08392-267932ಗೆ ಸಂಪರ್ಕಿಸಬೇಕೆಂದು ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಎನ್. ರಾಜಪ್ಪ ತಿಳಿಸಿದ್ದಾರೆ.
ವೆ.ಮೂ. ಚಿದಾನಂದಯ್ಯ ತಾತ ಲಿಂಗೈಕ್ಯ
ಕುರುಗೋಡು: ಇಲ್ಲಿಗೆ ಸಮೀಪದ ಕ್ಯಾದಿಗೆಹಾಳು ಗ್ರಾಮದ ಬೃಹನ್ಮಠದ ವೆ.ಮೂ. ಚಿದಾನಂದಯ್ಯ ತಾತನವರು (50) ಸೋಮವಾರ ಬೆಳಗಿನಜಾವ ಲಿಂಗೈಕ್ಯರಾಗಿದ್ದಾರೆ.
ಮೃತರಿಗೆ ಪತ್ನಿ, ಇಬ್ಬರು ಪುತ್ರರು, ಮೂವರು ಪುತ್ರಿಯರು ಇದ್ದಾರೆ. ಕ್ಯಾದಿಗೆಹಾಳು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಚಿದಾನಂದ ತಾತ ಎಂದೇ ಚಿರಪರಿಚಿತರಾಗಿದ್ದ ಅವರು, ಜೋತಿಷ್ಯ, ವಾಸ್ತು, ಪೌರೋಹಿತ್ಯ, ಪುರಾಣ ಪಠಣದ ನೈಪುಣ್ಯತೆ ಹೊಂದಿದ್ದರು.
ಸರಳ ಜೀವನ ಶೈಲಿಯಿಂದ ದೊಡ್ಡ ಭಕ್ತ ಸಮೂಹವನ್ನೇ ಇವರು ಹೊಂದಿದ್ದರು. ಎಮ್ಮಿಗನೂರಿನ ಹಂಪಿ ಸಾವಿರ ದೇವರು ಗುರುಮಹಾಂತರ ಮಠದ ವಾಮದೇವ ಶಿವಾಚಾರ್ಯರು, ಸಿದ್ದರಾಂಪುರ ಜಂಗಮಕ್ಷೇತ್ರದ ಕದಳೀವನ ಚಿದಾನಂದ ಸ್ವಾಮೀಜಿ, ಹೆಬ್ಬಾಳ ಮಠದ ಶಿವಪ್ರಕಾಶ ಶರಣರು, ತೆಕ್ಕಲಕೋಟೆಯ ಕಂಬಾಳಿಮಠದ ವೀರಭದ್ರ ಶಿವಾಚಾರ್ಯರು, ಬುಕ್ಕಸಾಗರದ ಕರಿಸಿದ್ದೇಶ್ವರ ವಿಶ್ವರಾಧ್ಯ ಸ್ವಾಮೀಜಿ, ಕುರುಗೋಡಿನ ಹಾವಿಗೆ ಮಠದ ರಾಘವಾಂಕ ಶಿವಾಚಾರ್ಯರು, ಶಾನವಾಸಪುರ ದಾರಾಕಾಶ್ರಮದ ಮಲ್ಲಿಕಾರ್ಜುನ ಸ್ವಾಮೀಜಿ ಸೇರಿದಂತೆ ಜನಪ್ರತಿನಿಧಿಗಳು, ವಿವಿಧ ಪಕ್ಷಗಳ ಮುಖಂಡರು, ಜಿಲ್ಲೆಯ ಅನೇಕ ಹಳ್ಳಿಗಳಿಂದ ಆಗಮಿಸಿದ ಭಕ್ತರು ಸ್ವಾಮೀಜಿಯ ಅಂತಿಮ ದರ್ಶನ ಪಡೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

