ಸುದ್ದಿ ಸಂಕ್ಷೇಪ
ಇಂದು ಆರೋಗ್ಯ ತಪಾಸಣಾ ಶಿಬಿರ
ಬಳ್ಳಾರಿ: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ವಿಮ್ಸ್ ಹಾಗೂ ನವಜೀವನ ಸಂಸ್ಥೆ ಇವರ ಸಹಯೋಗದಲ್ಲಿ ನಗರದಲ್ಲಿರುವ ಬಾಲಕಾರ್ಮಿಕರ ವಿಶೇಷ ವಸತಿ ಶಾಲೆಯ ಮಕ್ಕಳಿಗಾಗಿ ಜುಲೈ 6ರಂದು ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ. ಆರೋಗ್ಯ ತಪಾಸಣಾ ಶಿಬಿರವು ಓಪಿಡಿಯ ಚರ್ಚ್ ಬಳಿಯಿರುವ ನವಜೀವನ ಸಂಸ್ಥೆಯಲ್ಲಿ ಜು. 6ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ ಎಂದು ರೆಡ್‌ಕ್ರಾಸ್ ಸಂಸ್ಥೆಯ ಡಾ. ನಾಗರಾಜ್ ರಾವ್ ತಿಳಿಸಿದ್ದಾರೆ.
ಸಿರುಗುಪ್ಪ: ಇಂದು
ವಸತಿಗೃಹ ಉದ್ಘಾಟನೆ
ಸಿರುಗುಪ್ಪ: ಪಟ್ಟಣದಲ್ಲಿ ನ್ಯಾಯಾಧೀಶರ ವಸತಿ ಗೃಹ ಶಂಕುಸ್ಥಾಪನೆ ಹಾಗೂ ಮಹಿಳೆಯರಿಗಾಗಿ ಕಾನೂನು ಸಾಕ್ಷರತಾ ಕಾರ್ಯಾಗಾರ ಜು. 6ರಂದು ಜರುಗಲಿದೆ. ಪಟ್ಟಣದ ಕಮ್ಮವಾರಿ ಕಲ್ಯಾಣ ಮಂಟಪದಲ್ಲಿ ಅಂದು ಮಧ್ಯಾಹ್ನ 3ಕ್ಕೆ ಕಾರ್ಯಾಗಾರವನ್ನು ಹೈಕೋರ್ಟ್ ನ್ಯಾಯಾಧೀಶ ಕೆ. ಶ್ರೀಧರರಾವ್ ಉದ್ಘಾಟಿಸಲಿದ್ದಾರೆ. ಜಿಲ್ಲಾ ಸತ್ರ ನ್ಯಾಯಾಧೀಶ ಡಿ. ವಿಶ್ವೇಶ್ವರ ಭಟ್ ಆಧ್ಯಕ್ಷತೆ ವಹಿಸಲಿದ್ದಾರೆ. ಸಂಜೆ 5ಕ್ಕೆ ಅಭಯಾಂಜನೇಯ ದೇವಸ್ಥಾನದ ಬಳಿ ನ್ಯಾಯಧೀಶರ ವಸತಿ ಗೃಹ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ ಜರುಗಲಿದೆ. ಕಾರ್ಯಕ್ರಮದಲ್ಲಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅಶೋಕ್ ನಿಜಗಣ್ಣನವರ, ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶೆ ಎಂ.ಎಚ್. ಶಾಂತಾ, ಕೊಪ್ಪಳ ಸಂಸದ ಶಿವರಾಮಗೌಡ, ವಿಧಾನಪರಿಷತ್ ಸದಸ್ಯ ಮೃತ್ಯುಂಜಯ ಜಿನಗಾ, ರಾಜ್ಯ ವಕೀಲ ಪರಿಷತ್ ಸದಸ್ಯ ಅನಿಲ್‌ಕುಮಾರ್, ಸಂಧ್ಯಾ ಮಾದನೂರು, ರಾಜ್ಯ ವಕೀಲರ ಸಂಘದ ಮಾಜಿ ಅಧ್ಯಕ್ಷ ಹುಡೇದ ಬಸವರಾಜ, ಬಳ್ಳಾರಿಯ ನ್ಯಾಯಾಧೀಶೆ ಎಸ್.ಎಂ. ವಿಜಯಲಕ್ಷ್ಮೀ ಮೈದೂರು, ತಾಲೂಕು ವಕೀಲರ ಸಂಘದ ಅಧ್ಯಕ್ಷ ಕೆ. ವೀರೇಶಗೌಡ, ಕಾರ್ಯದರ್ಶಿ ಯು. ವೆಂಕೋಬ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ಜಿಪಂ, ತಾಪಂ, ಗ್ರಾಪಂ, ಮಹಿಳಾ ಸದಸ್ಯರು ಭಾಗವಹಿಸಲಿದ್ದಾರೆ ಎಂದು ನ್ಯಾಯಧೀಶ ಲಕ್ಷ್ಮಿಕಾಂತ್ ಜಾನಕಿರಾಮ ಮಿಸ್ಕಿನ್ ತಿಳಿಸಿದರು.
ಬಳ್ಳಾರಿ: ಇಂದು
ವಿದ್ಯುತ್ ವ್ಯತ್ಯಯ
ಬಳ್ಳಾರಿ: ಜೆಸ್ಕಾಂ ನಗರ ಉಪವಿಭಾಗ- 1ರಲ್ಲಿ ಬರುವ ಮಿಲ್ಲರ್‌ಪೇಟೆ ಪ್ರದೇಶದಲ್ಲಿ ವಿದ್ಯುತ್ ವಾಹಕವನ್ನು ಬದಲಾಯಿಸುವ ಕಾರ್ಯ ಕೈಗೊಳ್ಳುವುದರಿಂದ ಜು. 6ರಂದು ಪೊಲೀಸ್ ಕ್ವಾರ್ಟರ್ಸ್, ಮಿಲ್ಲರ್‌ಪೇಟೆ, ಕಣೇಕಲ್ ಬಸ್ ನಿಲ್ದಾಣ, ಜಂಡ ಕಟ್ಟೆ, ಕೊಲಿಮಿ ಚೌಕ್ ಹಾಗೂ ಮತ್ತಿತರ ಪ್ರದೇಶಗಳಲ್ಲಿ ಬೆಳಗ್ಗೆ 9.30ರಿಂದ ಸಂಜೆ 6ರವರೆಗೆ ವಿದ್ಯುತ್ ಕಡಿತವುಂಟಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಜೆಸ್ಕಾಂ ನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ವೀರಾಂಜನೇಯ ರಾವ್ ಪ್ರಕಟಣೆಯಲ್ಲಿ ಕೋರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

