22ಕ್ಕೆ ಸರ್ಕಾರಿ ನೌಕರರ ಸಂಘದ ಚುನಾವಣೆ
ಕೂಡ್ಲಿಗಿ: ತಾಲೂಕು ಸರ್ಕಾರಿ ನೌಕರರ ಸಂಘದ ವಿವಿಧ ಇಲಾಖೆಗಳ ಕಾರ್ಯಕಾರಿ ಸಮಿತಿ ಆಯ್ಕೆಗೆ ಜು. 22ರಂದು ಬೆಳಗ್ಗೆ 11ರಿಂದ ಸಂಜೆ 4ರ ವರೆಗೆ ಪಟ್ಟಣದ ಬಿಬಿ ತಾಂಡಾ ರಸ್ತೆಯಲ್ಲಿರುವ ಸಾಮರ್ಥ್ಯ ಸೌಧದಲ್ಲಿ ಚುನಾವಣೆ ನಡೆಯಲಿದೆ ಎಂದು ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ಮಾರೇಶ್ ತಿಳಿಸಿದ್ದಾರೆ. ರಾಜ್ಯಾಧ್ಯಕ್ಷರ ಆದೇಶದನ್ವಯ ಚುನಾವಣಾ ವೇಳಾಪಟ್ಟಿ ಸಿದ್ಧಗೊಂಡಿದ್ದು, 2013-18ರ ಅವಧಿಗೆ ಚುನಾವಣೆ ಪ್ರಕ್ರಿಯೆ ಆರಂಭಗೊಂಡಿದೆ. ಜು. 11ರಿಂದ 15ರ ವರೆಗೆ ನಾಮಪತ್ರ ವಿತರಣೆ. ಜು. 15ರ ಸಂಜೆ 5ಕ್ಕೆ ನಾಮಪತ್ರ ಸಲ್ಲಿಸಲು ಕಡೇದಿನ. ನಂತರ ನಾಮಪತ್ರಗಳ ಪರಿಶೀಲನೆ, ಅರ್ಹ ಅಭ್ಯರ್ಥಿಗಳ ಪ್ರಕಟಣೆಯಾಗಲಿದೆ. ಜು. 16ಕ್ಕೆ ನಾಮಪತ್ರ ವಾಪಾಸಾತಿ. ಜು. 22ರಂದು ಚುನಾವಣೆ ಹಾಗೂ ಮತ ಎಣಿಕೆ ನಡೆಯಲಿದೆ ಎಂದರು. ನಾಮಪತ್ರಗಳನ್ನು ತಾಲೂಕು ಯೋಜನಾ ಸಂಘದ ಕಚೇರಿಯಲ್ಲಿ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ 9972534936ಗೆ ಸಂಪರ್ಕಿಸಬಹದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

