ಬಳ್ಳಾರಿ

ಸ್ವಸಹಾಯ ಸಂಘಗಳ ರಚನಾ ಸಭೆ

Published On :

ಹಗರಿಬೊಮ್ಮನಹಳ್ಳಿ: ಹಗರಿಬೊಮ್ಮನಹಳ್ಳಿ ತಾಲೂಕಿನ ಬಾಚಿಗೊಂಡನಹಳ್ಳಿ ಗ್ರಾಮದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ಗ್ರಾಮ ಪಂಚಾಯಿತಿ ಮಟ್ಟದ ಯುವಜನ ಪ್ರಗತಿ ಬಂಧು ಮತ್ತು ಮಹಿಳೆಯರ ಸ್ವಸಹಾಯ ಸಂಘಗಳ ರಚನಾ ಸಭೆ ನಡೆಯಿತು.
 ಯೋಜನೆಯ ಕೊಪ್ಪಳ ವಿಭಾಗದ ಪ್ರಾದೇಶಿಕ ನಿರ್ದೇಶಕ ಬೂದಪ್ಪಗೌಡ ಸಭೆ ಉದ್ಘಾಟಿಸಿ, ರಾಜ್ಯದ 16 ಜಿಲ್ಲೆಗಳಲ್ಲಿ ಯೋಜನೆ ಕಾರ್ಯಕ್ಷೇತ್ರ ಹೊಂದಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಗುಡಿ ಕೈಗಾರಿಕೆ ಅಭಿವೃದ್ಧಿಪಡಿಸಲು ಅರ್ಥಿಕ ಮತ್ತು ಸೂಕ್ತ ತರಬೇತಿ ನೀಡುವ ಮೂಲಕ ನಾಗರೀಕರಲ್ಲಿ ಸ್ವಯಂ ಉದ್ಯೋಗದ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಇದರ ಸದುಪಯೋಗವನ್ನು ಗ್ರಾಮಸ್ಥರು ಪಡೆಯಬೇಕು ಎಂದರು. ಗುಡಿ ಕೈಗಾರಿಕೆ ಬಗ್ಗೆ ಸೂಕ್ತ ತರಬೇತಿ ಪಡೆದುಕೊಂಡರೆ ನೀವಿರುವ ಸ್ಥಳದಲ್ಲಿಯೇ ದುಡಿಯುವ ಕೈಗಳಿಗೆ ನಿರಂತರ ಕೆಲಸ ಸಿಗಲಿದೆ. ಇದರಿಂದ ನಿರುದ್ಯೋಗದ ಸಮಸ್ಯೆ ನಿವಾರಣೆಯ ಜತೆಗೆ ನಿಮ್ಮ ಅರ್ಥಿಕ ಬದುಕು ಇನ್ನಷ್ಟು ಗಟ್ಟಿಗೊಳ್ಳಲಿದೆ ಎಂದರು. ಹುರುಕಡ್ಲಿ ಶಿವಕುಮಾರ, ಯೋಜನೆಯ ಲೆಕ್ಕಪರಿಶೋಧಕ ಸತೀಶ, ಗ್ರಾಮದ ಐವತ್ತಕ್ಕೂ ಅಧಿಕ ಮಹಿಳೆಯರು ಸಭೆಯಲ್ಲಿ ಭಾಗವಹಿಸಿದ್ದರು. ಟಿ. ಭಾಸ್ಕರ ಸ್ವಾಗತಿಸಿದರು. ವೀರಣ್ಣ ಕಲ್ಮನಿ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.