ಬಳ್ಳಾರಿ

ಇಂದು ವಿವೇಕಾನಂದ ರಥಯಾತ್ರೆ ಆಗಮನ

Published On :

ಹೂವಿನಹಡಗಲಿ: ಶ್ರೀರಾಮಕೃಷ್ಣಾಶ್ರಮ ಹಾಗೂ ಶ್ರೀರಾಮಕೃಷ್ಣ ಮಿಷನ್ ವತಿಯಿಂದ ಆಯೋಜಿಸಿರುವ ಶ್ರೀ ವಿವೇಕಾನಂದ ರಥಯಾತ್ರೆ ಜು. 11ರಂದು ಹೂವಿನಹಡಗಲಿಗೆ ಆಗಮಿಸಲಿದೆ ಎಂದು ಜಿಬಿಆರ್ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಐಗೋಳ್ ಚಿದಾನಂದ, ಪ್ರಾಚಾರ್ಯ ಡಾ. ಆರ್. ಮರೇಗೌಡ, ಎ.ಎಂ. ರಾಜಶೇಖರಯ್ಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಂಜೆ 4 ಗಂಟೆಗೆ ಪಟ್ಟಣದ ಸೋಗಿ ವೃತ್ತದಲ್ಲಿ ರಥವನ್ನು ಸ್ವಾಗತಿಸಲು ವ್ಯವಸ್ಥೆ ಮಾಡಲಾಗಿದೆ. ಅಲ್ಲಿಂದ ಬಸ್ ನಿಲ್ದಾಣದ ಮೂಲಕ ಅಂಬೇಡ್ಕರ್ ವೃತ್ತ, ಶಾಸ್ತ್ರಿ ವೃತ್ತ ಬಳಸಿಕೊಂಡು ಜಿಬಿಆರ್ ಕಾಲೇಜುವರೆಗೆ ರಥಯಾತ್ರೆ ಜರುಗಲಿದೆ. ಅನಂತರ ಕಾಲೇಜಿನ ಆವರಣದಲ್ಲಿ ಧರ್ಮ ಜಾಗೃತಿ ಸಭೆ ನಡೆಯಲಿದೆ ರಥಯಾತ್ರೆ, ಧರ್ಮಜಾಗೃತಿ ಸಭೆಯಲ್ಲಿ ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ನಾಳೆ ಉದ್ಯೋಗ ಮೇಳ
ಬಳ್ಳಾರಿ: ಕೌಶಲ್ಯ ಆಯೋಗ, ಉದ್ಯೋಗ ಮತ್ತು ತರಬೇತಿ ಇಲಾಖೆ, ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮ ನಿಯಮಿತ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಜು. 12ರಂದು ಬೆಳಗ್ಗೆ 10ರಿಂದ 2 ಗಂಟೆವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ಹಟ್ಟೆಪ್ಪ ತಿಳಿಸಿದ್ದಾರೆ. ಮೇಳದಲ್ಲಿ ಬೆಲ್ಲದ್ ಮೋಟಾರ್ಸ್, ಶ್ರೀವೆನ್ ಇನ್ಫೋಕಾಂ, ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್ ಮತ್ತಿತರ ಉದ್ಯೋಗದಾತರು ಪಾಲ್ಗೊಳ್ಳಲಿದ್ದಾರೆ. ಆಸಕ್ತರು ತಮ್ಮ ವಿದ್ಯಾರ್ಹತೆ ಪ್ರಮಾಣ ಪತ್ರ ಹಾಗೂ ಸ್ವವಿವರದೊಂದಿಗೆ ಮೇಳದಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ 9844444958, 9036422052ನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.