ಬಳ್ಳಾರಿ

ಜಿಂದಾಲ್ ನೆರವಿನಿಂದ ಕ್ರೀಡಾಂಗಣ ಅಭಿವೃದ್ಧಿ: ರವೀಂದ್ರ

Published On :

ಹೂವಿನಹಡಗಲಿ: ಜಿಲ್ಲೆಯ ಉಕ್ಕು ಉತ್ಪಾದನಾ ಕಂಪನಿ ಜಿಂದಾಲ್ ನೆರವು ಪಡೆದು ಇಲ್ಲಿನ ತಾಲೂಕು ಕ್ರೀಡಾಂಗಣವನ್ನು ಮಾದರಿಯ ಕ್ರೀಡಾಂಗಣವನ್ನಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಹರಪ್ಪನಹಳ್ಳಿ ಶಾಸಕ ಎಂ.ಪಿ. ರವೀಂದ್ರ ಭರವಸೆ ನೀಡಿದರು.
ಬುಧವಾರ ಮಾಜಿ ಉಪ ಮುಖ್ಯಮಂತ್ರಿ ಎಂ.ಪಿ. ಪ್ರಕಾಶ ಅವರ 74ನೇ ಜನ್ಮ ದಿನಾಚರಣೆ ಅಂಗವಾಗಿ ಇಲ್ಲಿನ ವಂಶಿ ಕ್ರಿಕೆಟರ್ಸ್ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿ, ಜಿಂದಾಲ್ ಉಕ್ಕು ಉತ್ಪಾದನಾ ಕಂಪನಿಯ ಸಹಕಾರ ಪಡೆದು ಕ್ರೀಡಾಂಗಣದ ಸಂಪೂರ್ಣ ಅಭಿವೃದ್ಧಿಯ ಜತೆಗೆ ಸ್ಕೇಟಿಂಗ್ ಪ್ಲಾಟ್ ಫಾರಂ, ಸಣ್ಣ ಮಕ್ಕಳಿಗೆ ಆಟವಾಡಲು ಪ್ರತ್ಯೇಕ ಮೈದಾನ ವ್ಯವಸ್ಥೆ ಮಾಡುವ ಚಿಂತನೆ ಇದೆ ಎಂದು ಹೇಳಿದರು.
ರಾಜ್ಯ ಮಟ್ಟದ ತಂಡಗಳನ್ನು ಪ್ರತಿನಿಧಿಸುವ ಅರ್ಹತೆ ಇರುವ ಇಲ್ಲಿನ ಗ್ರಾಮೀಣ ಕ್ರೀಡಾ ಪ್ರತಿಭೆಗಳಿಗೆ ಎಲ್ಲ ರೀತಿಯ ಅಗತ್ಯವಿರುವ ಸಹಕಾರ ನೀಡಲು ತಾವು ಸಿದ್ಧ. ವಿವಿಧ ಕ್ರೀಡೆ ಮತ್ತು ಗ್ರಾಮೀಣ ಕ್ರೀಡೆಗಳಲ್ಲಿ ವಿಶೇಷ ತರಬೇತಿ ಪಡೆದು ಮಲ್ಲಿಗೆ ನಾಡು ಹೂವಿನಹಡಗಲಿ ಕ್ರೀಡಾಪಟುಗಳಿಗೆ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಕೀರ್ತಿ ತರುವಂತಗಾಲಿ ಎಂದು ಶುಭ ಹಾರೈಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ. ಪರಮೇಶ್ವರಪ್ಪ ಮಾತನಾಡಿ, ಮಾಜಿ ಉಪ ಮುಖ್ಯಮಂತ್ರಿ ಎಂ.ಪಿ. ಪ್ರಕಾಶರ ಎಲ್ಲ ಆಸಕ್ತಿಗಳನ್ನು ಮೈಗೂಡಿಸಿಕೊಂಡಿರುವ ಯುವ ಉತ್ಸಾಹಿ ರಾಜಕಾರಣಿ ಎಂ.ಪಿ. ರವೀಂದ್ರ ರಾಜ್ಯ ಮಟ್ಟದಲ್ಲಿ ಎತ್ತರಕ್ಕೆ ಬೆಳೆದು ಕ್ಷೇತ್ರದ ಅಭಿವೃದ್ಧಿ ಮತ್ತು ನಾಡಿನ ಭೂಪಟದಲ್ಲಿ ಹೂವಿನಹಡಗಲಿ ಹೆಸರು ಚಿರಸ್ಥಾಯಿಯಾಗಿ ಉಳಿಯುವಂತೆ ಮಾಡಬೇಕು ಎಂದರು.
ಎಪಿಎಂಸಿ ಮಾಜಿ ಅಧ್ಯಕ್ಷ ಪಿ. ವಿಜಯಕುಮಾರ್, ಅಟವಾಳಗಿ ಪ್ರಕಾಶ್, ಪುರಸಭೆ ಸದಸ್ಯ ಕೋಡಿಹಳ್ಳಿ ಕೊಟ್ರೇಶ್, ವರ್ತಕರಾದ ಎಸ್.ಎಂ. ಪದ್ಮನಾಭ ಶೆಟ್ಟಿ, ಮಹಾಬಲೇಶ್ವರ, ಪತ್ರಕರ್ತರ ಸಂಘದ ಅಧ್ಯಕ್ಷ ಎಲ್. ಅಕ್ಬರ್, ಯುವ ಕಾಂಗ್ರೆಸ್ ಅಧ್ಯಕ್ಷ ಬಾಹುಬಲಿ ಪಾಟೀಲ್, ಸೋಮಶೇಖರ್ ಸೇರಿದಂತೆ ವಂಶಿ ಕ್ರಿಕೆಟರ್ಸ್ ಪದಾಧಿಕಾರಿಗಳು ಇತರರು ಇದ್ದರು. ಎಂ. ಜಗದೀಶ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.