ಸ್ವದೇಶಿ ವಸ್ತುಗಳನ್ನೇ ಹೆಚ್ಚಾಗಿ ಬಳಸಿ
ಕನ್ನಡಪ್ರಭ ವಾರ್ತೆ, ಹೊಸಪೇಟೆ, ಜು. 12
ಪ್ರತಿಯೊಬ್ಬರೂ ನಿತ್ಯ ಜೀವನದಲ್ಲಿ ಸ್ವದೇಶಿ ವಸ್ತುಗಳನ್ನೇ ಹೆಚ್ಚಾಗಿ ಬಳಸುವ ಮೂಲಕ ಆರೋಗ್ಯ ಕಾಪಾಡಿಕೊಂಡು ಆರೋಗ್ಯವಂತ ಸಮಾಜ ನಿರ್ಮಿಸಲು ಮುಂದಾಗಬೇಕು ಎಂದು ಪತಂಜಲಿ ಯೋಗ ಸಮಿತಿ ಸದಸ್ಯ ಉದಯ ಶಂಕರ್ ಹೇಳಿದರು.
ಗುರುವಾರ ಪತಂಜಲಿ ಯೋಗ ಸಮಿತಿ ಹಾಗೂ ಯುವ ಭಾರತ್ ನೇತೃತ್ವದಲ್ಲಿ ನಗರದ ನಗರೇಶ್ವರ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು. ಇತ್ತೀಚಿಗೆ ಎಲ್ಲ ಕ್ಷೇತ್ರಗಳಲ್ಲಿ ಭ್ರಷ್ಟಾಚಾರ, ದೌರ್ಜನ್ಯ, ದಬ್ಬಾಳಿಕೆಗಳು ಅಧಿಕವಾಗಿ ನಡೆಯುತ್ತಿದ್ದು, ದೇಶದಲ್ಲಿ ಭ್ರಷ್ಟಾಚಾರ ನಿರ್ಮೂಲನೆಗೆ ಯುವ ಜನತೆ ಎಚ್ಚೆತ್ತು ಸಂಘಟನೆಯಾಗಿ ಹೋರಾಟದ ಮಾರ್ಗದ ಮೂಲಕ ಪಣತೊಡಬೇಕು. ಹರಿದ್ವಾರದ ಪತಂಜಲಿ ಯೋಗ ಸಮಿತಿ ಕೇಂದ್ರೀಯ ಮಹಿಳಾ ಪ್ರಭಾರಿ ಡಾ. ಸುಮನ್ ಆರ್ಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಅತ್ಯಾಚಾರ, ದೌರ್ಜನ್ಯಗಳಲ್ಲಿ ಭಾಗಿಯಾಗುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಸರ್ಕಾರ ಮಂದಾಗಬೇಕು. ಈ ಬಗ್ಗೆ ಎಲ್ಲ ಮಹಿಳೆಯರು ಜಾಗೃತರಾಗಿರಬೇಕು. ಮಹಿಳೆಯರು ಎಲ್ಲ ಸಮಸ್ಯೆಗಳನ್ನು ಧೈರ್ಯದಿಂದ ಎದುರಿಸಬೇಕು ಎಂದರು.
ಬೆಂಗಳೂರಿನ ಸ್ವಾಮಿ ಜ್ಞಾನೇಶ್ವರಾನಂದಜೀ, ಪತಂಜಲಿ ಯೋಗ ಸಮಿತಿಯ ಕೇಂದ್ರೀಯ ಪ್ರಭಾರಿ ಭವರಲಾಲ್ ಆರ್ಯ, ಬಾಲಚಂದ್ರ ಶರ್ಮ, ಯುವ ಭಾರತ್ ರಾಜ್ಯ ಪ್ರಭಾರಿ ಎಂ. ಭಾಸ್ಕರ್, ಸಿಂಧನೂರು ಪತಂಜಲಿ ಯೋಗ ಸಮಿತಿಯ ಮಂಡಲ ಪ್ರಭಾರಿ ದಾಕ್ಷಾಯಿಣಿ, ಜಿಲ್ಲಾ ಪ್ರಭಾರಿ ಮಲ್ಲಿಕಾರ್ಜುನ, ಭಾರತ್ ಜಿಲ್ಲಾ ಪ್ರಭಾರಿ ಕಿರಣಕುಮಾರ್, ಬಳ್ಳಾರಿಯ ನಟರಾಜ್, ಗದಗನ ಪ್ರಕಾಶ್, ಬಿಜಾಪುರದ ಅಮೋಘ ಸಿದ್ ಭಾಗವಹಿಸಿದ್ದರು. ಯುವ ಭಾರತ್ ರಾಜ್ಯ ಸಮ್ಮೇಳನದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

