ರು. 3 ಕೋಟಿ ವೆಚ್ಚದ ಐಟಿಐ ಕಾಲೇಜು
ಕನ್ನಡಪ್ರಭ ವಾರ್ತೆ, ಕೂಡ್ಲಿಗಿ, ಜು. 12
ರಾಜ್ಯದ ಸರ್ಕಾರಿ ಐಟಿಐ ಕಾಲೇಜುಗಳಲ್ಲಿ ಎಲ್ಲಿಯೂ ಇಲ್ಲದ ಸುಸಜ್ಜಿತ ಕಟ್ಟಡ ಹಾಗೂ ವಾತಾವರಣ ಪಟ್ಟಣದ ಐಟಿಐ ಕಾಲೇಜಿನಲ್ಲಿ ಕಾಣುತ್ತಿದೆ. ಶಾಸಕ ನಾಗೇಂದ್ರ ಅವರ ಪರಿಶ್ರಮದಿಂದ ಇಂತಹ ಅಪರೂಪದ ರು. 3 ಕೋಟಿ ವೆಚ್ಚದ ಕಟ್ಟಡ ನಿರ್ಮಾಣವಾಗಿದೆ ಎಂದು ನಾಗೇಂದ್ರ ಸೇವಾ ಬಳಗದ ಅಧ್ಯಕ್ಷ ಬಂಗಾರಿ ಹನುಮಂತು ಎಂದರು.
ಅವರು ಗುರುವಾರ ಪಟ್ಟಣದ ಸರ್ಕಾರಿ ಐಟಿಐ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಚಿತವಾಗಿ ಕಂಪ್ಯೂಟರ್, ಪ್ರಿಂಟರ್ ಹಾಗೂ ಇತರೆ ಸಾಮಗ್ರಿಗಳನ್ನು ವಿತರಿಸಿ ನಂತರ ಮಾತನಾಡಿ, ಯುವಕರು ಇಂದು ಸಮಾಜಮುಖಿ ಕಾರ್ಯಗಳಿಂದ ವಿಮುಖರಾಗುತ್ತಿದ್ದು, ಸಹಬಾಳ್ವೆ, ಸಂಯಮ ಕಳೆದುಕೊಳ್ಳುತ್ತಿದ್ದಾರೆ. ಹೀಗಾಗಿ ಸ್ವಾಸ್ಥ್ಯ ಸಮಾಜ ನಿರ್ಮಾಣವಾಗದೇ ಎಲ್ಲೆಲ್ಲೂ ಅರಾಜಕತೆ ತಾಂಡವಾಡುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಪಟ್ಟಣದ ಸರ್ಕಾರಿ ಐಟಿಐ ಕಾಲೇಜು ಕಟ್ಟಡ ಸದ್ಯದಲ್ಲಿಯೇ ಉದ್ಘಾಟನೆಯಾಗಲಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಕಟ್ಟಡದಲ್ಲಿ ಈಗಾಗಲೇ ತರಗತಿಗಳನ್ನು ನಡೆಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಶಾಸಕ ನಾಗೇಂದ್ರ ಅವರು ವೈವಿಧ್ಯಮಯ ತಾಂತ್ರಿಕ ಕೋರ್ಸ್ಗಳನ್ನು ತೆರೆಯಲಿದ್ದು, ಹಿಂದುಳಿದ ತಾಲೂಕಿನ ನಿರುದ್ಯೋಗಿ ಯುವಕರಿಗೆ ಆಸರೆ ನೀಡಲು ಅನುಕೂಲವಾಗುತ್ತದೆ ಎಂದು ಹೇಳಿದರು. ಈ ಸಂದರ್ಭಧಲ್ಲಿ ಸರ್ಕಾರಿ ಐಟಿಐ ಕಾಲೇಜು ಅಭಿವೃದ್ಧಿ ಸಮಿತಿ ಅದ್ಯಕ್ಷ ಸಾಯಿ ರಮೇಶ್, ಪ್ರಾಚಾರ್ಯ ಮನೋಹರ ಬಾಬು, ಕಾರ್ಯಕಾರಿ ಸಮಿತಿ ಸದಸ್ಯ ವಿರೂಪಾಕ್ಷಪ್ಪ, ಎಸ್. ಪಾಟೀಲ್, ಜೆಸ್ಕಾಂ ಅಧಿಕಾರಿ ರಾಘವೇಂದ್ರ, ಉಪನ್ಯಾಸಕ ನಾಗೇಂದ್ರಪ್ಪ, ಅನಿಲ್ಕುಮಾರ, ಗುರುಬಸವರಾಜ, ರಾಘು, ಪುರುಷೋತ್ತಮ, ವಿಶ್ವನಾಥ, ವಿಜಯಕುಮಾರ, ವೀರಭದ್ರಿ, ಚೌಡಪ್ಪ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

