ಬಳ್ಳಾರಿ

ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ: ಸ್ವಾಗತ

Published On :

ಬಳ್ಳಾರಿ: ಕರ್ನಾಟಕ ಸರ್ಕಾರದ 2013-14ರ ಆಯವ್ಯಯ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಶಾ ಕಾರ್ಯಕರ್ತೆಯರಿಗೆ ಕೇಂದ್ರ ಸರ್ಕಾರದ ಜತೆಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ಪ್ರೋತ್ಸಾಹ ಧನ ಘೋಷಿಸಿರುವುದನ್ನು ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಸ್ವಾಗತಿಸುತ್ತದೆ ಎಂದು ಸಂಘದ ರಾಜ್ಯ ಕಾರ್ಯದರ್ಶಿ ಡಿ. ನಾಗಲಕ್ಷ್ಮಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ವಿವಿಧ ರಾಜ್ಯಗಳಲ್ಲಿ ವೇತನ ನಿಗದಿ ಮಾಡಿದಂತೆ, ವಿವಿಧ ಸಮಿತಿಗಳ ಶಿಫಾರಸ್ಸು ಮತ್ತು ಪ್ರಸ್ತಾವನೆಗಳನ್ನು ಪರಿಶೀಲಿಸಿ ಸರ್ಕಾರದಿಂದ ಆಶಾ ಕಾರ್ಯಕರ್ತೆಯರಿಗೆ ಜೀವನ ಯೋಗ್ಯ ಮಾಸಿಕ ನಿಗದಿತ ಗೌರವಧನ, ವೇತನ ನಿಗದಿ ಮಾಡಿ ಜೀವನ ಭದ್ರತೆ ಒದಗಿಸಬೇಕಾಗಿದೆ. ರಾಜ್ಯ ಸರ್ಕಾರವು ಇನ್ನು ಮುಂದೆ ಇಂತಹ ನಿರ್ಧಾರಗಳನ್ನು ತೆಗೆದುಕೊಂಡು ಆಶಾ ಕಾರ್ಯಕರ್ತೆಯರನ್ನು ಪ್ರೋತ್ಸಾಹಿಸಲು ರಾಜ್ಯ ಸರ್ಕಾರಕ್ಕೆ ಸಂಘವು ಕೋರುತ್ತದೆ ಎಂದು ಡಿ. ನಾಗಲಕ್ಷ್ಮಿ ತಿಳಿಸಿದ್ದಾರೆ.
ಲಾರಿ ಡಿಕ್ಕಿ: ಚಾಲಕಗೆ ಗಾಯ
ಬಳ್ಳಾರಿ: ಆಟೋಕ್ಕೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಗಾಯಗೊಂಡಿರುವ ಘಟನೆ ನಗರದ ಮೋತಿ ವೃತ್ತದ ಸಮೀಪದಲ್ಲಿ ನಡೆದಿದೆ. ಗೌತಮ ನಗರದ ನಿವಾಸಿ ಆಟೋ ಚಾಲಕ ಶೇಖರ ನಾಯ್ಕ (30) ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ಘಟನೆಗೆ ಲಾರಿ ಚಾಲಕನ ನಿರ್ಲಕ್ಷ್ಯವೇ ಕಾರಣವಾಗಿದೆ. ಲಾರಿಚಾಲಕ ಪರಾರಿಯಾಗಿದ್ದು, ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.