ಸೂರಿಗೆ ಆಗ್ರಹಿಸಿ ಪ್ರತಿಭಟನೆ
ಬಳ್ಳಾರಿ: ನಗರದಲ್ಲಿ ಹಲವು ವರ್ಷಗಳಿಂದ ವಾಸವಾಗಿರುವ ನಿವೇಶನ ರಹಿತರಿಗೆ ನಿವೇಶನ ನೀಡಬೇಕು. ವಸತಿ ರಹಿತರಿಗೆ ವಸತಿ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿ, ಅಖಿಲ ಭಾರತ ಯುವಜನ ಫೆಡರೇಷನ್ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ನೂರಾರು ವಸತಿರಹಿತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ನಗರದ ಕನಕದುರ್ಗಮ್ಮ ದೇವಸ್ಥಾನದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿದ ಪ್ರತಿಭಟನಾಕಾರರು ರಾಯಲ್ ವೃತ್ತದ ಮೂಲಕ ಮಹಾನಗರ ಪಾಲಿಕೆ ಬಳಿ ಜಮಾಯಿಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ನಂತರ ತಮ್ಮ ಬೇಡಿಕೆಗಳ ಮನವಿಯನ್ನು ಮಹಾನಗರ ಪಾಲಿಕೆಯ ಆಯುಕ್ತರಿಗೆ ಸಲ್ಲಿಸಿದರು.
ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದ ಎಐವೈಎಫ್ನ ಜಿಲ್ಲಾಧ್ಯಕ್ಷ ಸಂಗನಕಲ್ಲು ಸಿ.ಕಟ್ಟೆಬಸಪ್ಪ, ಬಳ್ಳಾರಿ ನಗರದಲ್ಲಿ ಹಲವು ವರ್ಷಗಳಿಂದ ಅನೇಕ ಬಡಜನರು ನಿವೇಶನ ವಿಲ್ಲದೇ ವಾಸಮಾಡುತ್ತಿದ್ದಾರೆ. ಆದರೆ ಸರ್ಕಾರ ಮಾತ್ರ ಬಡವರಿಗೆ ಇದುವರೆಗೂ ನಿವೇಶನವಾಗಲಿ-ವಸತಿಯಾಗಲಿ ಒದಗಿಸದೇ ಇರುವುದು ಶೋಚನೀಯ ಸಂಗತಿಯಾಗಿದ್ದು, ಕೂಡಲೇ ನಗರದ 400ಕ್ಕೂ ಹೆಚ್ಚು ಕುಟುಂಬಗಳಿಗೆ ನಿವೇಶನ ಮತ್ತು ವಸತಿ ಸೌಲಭ್ಯವನ್ನು ಕಲ್ಪಿಸಿಕೊಡಬೇಕು ಎಂದು ಆಗ್ರಹಿಸಿದರು.
ನಗರದ ತಾಳೂರು ರಸ್ತೆ ಸೇರಿದಂತೆ ಇತರ ಭಾಗಗಳಲ್ಲಿನ ಕಾಲುವೆ ಪಕ್ಕದಲ್ಲಿನ ಸರ್ಕಾರದ ಜಾಗದಲ್ಲಿ ವಾಸವಾಗಿರುವವರಿಗೆ ಹಕ್ಕುಪತ್ರಗಳನ್ನು ನೀಡಬೇಕು. ವಸತಿರಹಿತರಿಗೆ ನಿವೇಶನ, ಮನೆಗಳನ್ನು ವಿತರಿಸಬೇಕು. ಮಹಿಳೆಯರಿಗೆ ಶೌಚಾಲಯ ಒದಗಿಸಬೇಕು ಹಾಗೂ ಅತಿ ಹಿಂದುಳಿದ ಪ್ರದೇಶಗಳಿಗೆ ಕುಡಿವ ನೀರು, ಬೀದಿ ದೀಪ, ಚರಂಡಿ ಸೇರಿದಂತೆ ಇತರ ಸೌಲಭ್ಯಗಳನ್ನು ಒದಗಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಸಮಿತಿ ಮುಖಂಡರಾದ ಹೊನ್ನಳ್ಳಿ ಈಶ್ವರ್, ರವಿಕುಮಾರ್, ಅಂಜಿನಿ, ಗಿಡ್ಡ ಬಸವರಾಜ್, ಶಂಕರ್, ಕೃಷ್ಣಮೂರ್ತಿ, ಶಂಕರಗೌಡ, ಯರ್ರಿಸ್ವಾಮಿ ಇತರರಿದ್ದರು.
--
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

