ಬಳ್ಳಾರಿ

ಉದ್ಯೋಗ ನೀಡಲು ಆಗ್ರಹಿಸಿ ಪ್ರತಿಭಟನೆ

Published On :

ಹೊಸಪೇಟೆ: ಕಾರ್ಖಾನೆಗಾಗಿ ಭೂಮಿ ಕಳೆದುಕೊಂಡ ರೈತರ ಕುಟುಂಬಗಳಿಗೆ ಉದ್ಯೋಗ ನೀಡಬೇಕು, ಸ್ಥಳೀಯರಿಗೂ ಉದ್ಯೋಗಾವಕಾಶ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಘಟಕ, ಹೊಸಪೇಟೆ ನಗರ ಘಟಕ, ತಾಲೂಕು ಮಹಿಳಾ ಘಟಕ, ಮರಿಯಮ್ಮನಹಳ್ಳಿ ಹೋಬಳಿಯ ಘಟಕದ ಪದಾಧಿಕಾರಿಗಳು ಶನಿವಾರ ತಾಲೂಕಿನ ಡಣಾಪುರ ಸಮೀಪದಲ್ಲಿರುವ ಬಿಎಂಎಂ ಕಾರ್ಖಾನೆ ಎದುರು ಪ್ರತಿಭಟನೆ ನಡೆಸಿದರು.
ಪ್ರತಿಭಟನಾ ಸಭೆಯಲ್ಲಿ ಕರವೇ ತಾಲೂಕು ಅಧ್ಯಕ್ಷ ತಾರಿಹಳ್ಳಿ ಹನುಮಂತಪ್ಪ ಮಾತನಾಡಿ, ಬಿಎಂಎಂ ಕಾರ್ಖಾನೆಗಾಗಿ ಭೂಮಿ ನೀಡಿದ ರೈತರ ಕುಟುಂಬದವರಿಗೆ ಕಾರ್ಖಾನೆಯಲ್ಲಿ ಉದ್ಯೋಗ ನೀಡಬೇಕು. ಸ್ಥಳೀಯರಿಗೆ ಹೆಚ್ಚಿನ ಉದ್ಯೋಗ ಅವಕಾಶ ಕಲ್ಪಿಸಿಕೊಡಬೇಕು. ಡಾ. ಸರೋಜಿನಿ ಮಹಿಷಿಯವರ ವರದಿ ತಕ್ಷಣವೇ ಜಾರಿಗೆ ಬರಬೇಕು. ಸ್ಥಳೀಯರಿಗೆ ಗುತ್ತಿಗೆ ಕಾಮಗಾರಿಗಳನ್ನು ನೀಡಬೇಕು. ಕಾರ್ಖಾನೆಯ ಸುತ್ತಮುತ್ತಲಿನ ಗ್ರಾಮಗಳಲ್ಲಿ ಸುಮಾರು 2 ಲಕ್ಷ ಸಸಿಗಳನ್ನು ನೆಟ್ಟು ಬೆಳೆಸಬೇಕು ಎಂದು ಅವರು ಆಗ್ರಹಿಸಿದರು.
ಕಾರ್ಖಾನೆಯಿಂದ ಸಾಕಷ್ಟು ಧೂಳು ಹರಡುತ್ತಿದ್ದು, ಕಾರ್ಖಾನೆಯ ಚಿಮಣಿಯನ್ನು ಮೇಲಕ್ಕೇರಿಸಬೇಕು. ನಾನ್ ರಿಟರ್ನ್ವಾಲ್ ನೀರನ್ನು ನದಿಗೆ ಬಿಡದೆ ತಮ್ಮದೇ ಆದ ಪ್ರದೇಶದಲ್ಲಿ ನೀರು ಹರಿಸಿಕೊಳ್ಳಬೇಕು. ಕಾರ್ಖಾನೆಯಲ್ಲಿ ಕಾರ್ಮಿಕರಿಗೆ ಮೂಲ ಸೌಲಭ್ಯ ಕಲ್ಪಿಸಿಕೊಡಬೇಕು ಎನ್ನುವಂತಹ ವಿವಿಧ ಬೇಡಿಕೆಗಳನ್ನು ತಕ್ಷಣವೇ ಈಡೇರಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ನಡೆಸಲಾಗುತ್ತದೆ ಎಂದರು. ಕರವೇ ತಾಲೂಕು ಪ್ರಧಾನ ಕಾರ್ಯದರ್ಶಿ ಎನ್.ಎಚ್. ಶ್ರೀನಿವಾಸ್, ನಗರ ಘಟಕದ ಅಧ್ಯಕ್ಷ ಜೆ. ಸಲೀಂ, ಆರ್. ಮುಗಂ ರಾಜ, ರಾಮು, ರಾಮಚಂದ್ರಪ್ಪ, ಸುಂಕದ ಹನುಮಂತಪ್ಪ, ಹುಲಿಕುಂಟೆಪ್ಪ, ರಾಘು, ಹುಲುಗಪ್ಪ, ರಾಮಾಂಜಿನಿ, ನಾಗರಾಜ, ಭೀಮಪ್ಪ, ರಮೇಶ, ಮಹಿಳಾ ಘಟಕದ ಹೇಮಾವತಿ, ಲತಾ, ಲಕ್ಷ್ಮಿದೇವಿ, ಶಕುಂತಲಾ, ಶೈಲಜಾ, ಸುಮಾ, ಫಾತಿಮಾ ಸೇರಿದಂತೆ ಇತರರು ಪ್ರತಿಭಟನೆಯಲ್ಲಿದ್ದರು. ಬಿಎಂಎಂ ಕಾರ್ಖಾನೆಯ ಸಹಾಯಕ ಆಡಳಿತಾಧಿಕಾರಿ ಶ್ರೀನಿವಾಸ ಅವರಿಗೆ ವಿವಿಧ ಬೇಡಿಕೆಗಳ ಮನವಿ ಸಲ್ಲಿಸಿ ಒತ್ತಾಯಿಸಿದರು.
ಬಿಎಂಎಂ ಕಾರ್ಖಾನೆಗಾಗಿ ಭೂಮಿ ನೀಡಿದ ರೈತರ ಕುಟುಂಬದವರಿಗೆ ಕಾರ್ಖಾನೆಯಲ್ಲಿ ಉದ್ಯೋಗ ನೀಡಬೇಕು. ಸ್ಥಳೀಯರಿಗೆ ಹೆಚ್ಚಿನ ಉದ್ಯೋಗ ಅವಕಾಶ ಕಲ್ಪಿಸಿಕೊಡಬೇಕು. ಡಾ. ಸರೋಜಿನಿ ಮಹಿಷಿಯವರ ವರದಿ ತಕ್ಷಣವೇ ಜಾರಿಗೆ ಬರಬೇಕು. ಸ್ಥಳೀಯರಿಗೆ ಗುತ್ತಿಗೆ ಕಾಮಗಾರಿಗಳನ್ನು ನೀಡಬೇಕು.
- ತಾರಿಹಳ್ಳಿ ಹನುಮಂತಪ್ಪ
ಕರವೇ ಹೊಸಪೇಟೆ ತಾಲೂಕು ಅಧ್ಯಕ್ಷ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.