ಆ. 4ರಂದು ಜಿಲ್ಲಾಮಟ್ಟದ ಸಭೆ
ಬಳ್ಳಾರಿ: ಸರ್ಕಾರದ ಪ್ರಾಥಮಿಕ ಶಾಲೆಗಳಿಂದ ಪ್ರೌಢಶಾಲೆ ಸಹ ಶಿಕ್ಷಕರಾಗಿ ಬಡ್ತಿ ಹೊಂದಿರುವ ಶಿಕ್ಷಕರ ಜಿಲ್ಲಾ ಮಟ್ಟದ ಸಭೆಯನ್ನು ಆಗಸ್ಟ್ 4ರಂದು ಬಳ್ಳಾರಿಯಲ್ಲಿ ಕರೆಯಲಾಗಿದೆ ಎಂದು ಅಖಿಲ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲೆಯಿಂದ ಬಡ್ತಿ ಪಡೆದ ಪ್ರೌಢಶಾಲಾ ಶಿಕ್ಷಕರ ಸಂಘದ ಬಳ್ಳಾರಿ ಜಿಲ್ಲಾ ಸಂಚಾಲಕ ವಿ.ಟಿ ದಕ್ಷಿಣಾಮೂರ್ತಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಂಘದ ರಾಜ್ಯ ಘಟಕದ ಪದಾಧಿಕಾರಿಗಳು ಇತ್ತೀಚೆಗೆ ರಾಜ್ಯ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಅವರನ್ನು ಭೇಟಿ ಮಾಡಿ, ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಲಾಗಿದೆ. ಸೇವಾ ವೇತನ ಪರಿಗಣಿಸುವ ಬಗ್ಗೆ, ವರ್ಗಾವಣೆ, ಕಾಲಮಿತಿ ಬಡ್ತಿ ನೀಡುವ ಬಗ್ಗೆ, ಮನೆ ಬಾಡಿಗೆ ಭತ್ಯೆ ಹಾಗೂ ನಗರ ಪರಿಹಾರ ಭತ್ಯೆ ತಾರತಮ್ಯ ನಿವಾರಣೆ, ಬಡ್ತಿ ನೀತಿಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವ ಬಗ್ಗೆ ಹಾಗೂ ಶಿಕ್ಷಣ ಸಂಯೋಜಕ ಹುದ್ದೆಯ ಕುರಿತಂತೆ ಬೇಡಿಕೆಗಳ ಈಡೇರಿಕೆಗೆ ಕೋರಲಾಗಿದ್ದು, ಸಚಿವರು ಮನವಿಗೆ ಸ್ಪಂದಿಸಿ, ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದು ವಿ.ಟಿ ದಕ್ಷಿಣಾಮೂರ್ತಿ ಹೇಳಿದ್ದಾರೆ. ಮನವಿ ಸಲ್ಲಿಸಿದ ಬಳಿಕ ಬೆಂಗಳೂರಿನ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಘಟಕಗಳ ಬಗ್ಗೆ ಪುನರ್ ರಚನೆ ಬಗ್ಗೆ ನಿರ್ಣಯಿಸಲಾಗಿದ್ದು, ಅದರಲ್ಲಿ ಸಂಘದ ಜಿಲ್ಲಾ ಸಂಚಾಲಕರನ್ನಾಗಿ ವಿ.ಟಿ ದಕ್ಷಿಣಾಮೂರ್ತಿರನ್ನು ನೇಮಿಸಲಾಯಿತು. ಜತೆಗೆ ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಗಳ ಉಸ್ತುವಾರಿಯನ್ನು ವಹಿಸಲಾಯಿತು ಎಂದು ತಿಳಿಸಿದ್ದಾರೆ. ಆಗಸ್ಟ್ 4ರಂದು ನಡೆಯುವ ಜಿಲ್ಲಾ ಮಟ್ಟದ ಸಭೆಗೆ ಎಲ್ಲ ಸರ್ಕಾರಿ ಪ್ರಾಥಮಿಕ ಶಾಲೆಗಳಿಂದ ಪ್ರೌಢಾಶಾಲೆ ಸಹ ಶಿಕ್ಷಕರಾಗಿ ಬಡ್ತಿ ಹೊಂದಿರುವ ಶಿಕ್ಷಕರು ತಪ್ಪದೇ ಭಾಗವಹಿಸುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವಿ.ಟಿ. ದಕ್ಷಿಣಾಮೂರ್ತಿ ಮೊ.ಸಂ 9449278011ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

