ಬಳ್ಳಾರಿ

ಶಿಕ್ಷಣ ಇಲಾಖೆ ಅವೈಜ್ಞಾನಿಕ ನೀತಿ: ಪ್ರತಿಭಟನೆ

Published On :

ಕನ್ನಡಪ್ರಭ ವಾರ್ತೆ, ಹೊಸಪೇಟೆ, ಜು.23
ಡಿಪ್ಲೋಮಾ ವಿದ್ಯಾರ್ಥಿಗಳ ಸಮಸ್ಯೆಗಳ ಪರಿಹಾರಕ್ಕಾಗಿ ಒತ್ತಾಯಿಸಿ ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆಯ ಅವೈಜ್ಞಾನಿಕ ನೀತಿ ಖಂಡಿಸಿ ಎಸ್‌ಎಫ್‌ಐ ತಾಲೂಕು ಸಮಿತಿಯ ಪದಾಧಿಕಾರಿಗಳು ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಕಚೇರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಎಸ್‌ಎಫ್‌ಐ ತಾಲೂಕು ಅಧ್ಯಕ್ಷ ಟಿ. ಶರತ್‌ಕುಮಾರ್ ಮಾತನಾಡಿ, ತಾಂತ್ರಿಕ ಶಿಕ್ಷಣ ಮಂಡಳಿಯ ಕೆಲವು ಅವೈಜ್ಞಾನಿಕ ನೀತಿಗಳಿಂದ ಸಾವಿರಾರು ಡಿಪ್ಲೋಮಾ ವಿದ್ಯಾರ್ಥಿಗಳು ಅನುತ್ತೀರ್ಣರಾಗುತ್ತಿದ್ದಾರೆ. ಅವೈಜ್ಞಾನಿಕ ಹಾಗೂ ಕಠಿಣವಾದ ಹೊಸ ಪಠ್ಯಕ್ರಮವನ್ನು ಸರಳೀಕರಣಗೊಳಿಸಬೇಕು ಎಂದು ಒತ್ತಾಯಿಸಿದರು.  ಮೂರು ವರ್ಷದ ಡಿಪ್ಲೋಮಾ ಕೋರ್ಸ್‌ನ್ನು ಪದವಿ ರೀತಿಯಲ್ಲಿ ಸಂಪೂರ್ಣವಾಗಿ ಮೂರು ವರ್ಷ ಮುಂದಿನ ತರಗತಿಗಳಿಗೆ ಹಾಜರಾಗಲು (ಪ್ರವೇಶ ಪಡೆಯಲು), ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಬೇಕು. ಒಂದು ಸೆಮಿಸ್ಟರ್‌ನಲ್ಲಿ ಕನಿಷ್ಠ 4 ತಿಂಗಳು ಕಡ್ಡಾಯವಾಗಿ ತರಗತಿಗಳು ನಡೆಯುವಂತೆ ಕ್ರಮವಹಿಸಬೇಕು. ಪರೀಕ್ಷಾ, ಮರು ಮೌಲ್ಯಮಾಪನ, ಜೆರಾಕ್ಸ್ ಪ್ರತಿ ಇನ್ನಿತರ ಶುಲ್ಕಗಳನ್ನು ಕಡಿತಗೊಳಿಸಬೇಕು. ಪ್ರವೇಶ ಪ್ರಕ್ರಿಯೆ ಸಂದರ್ಭದಲ್ಲಿ ಸೀಟು ಹಂಚಿಕೆಯಲ್ಲಿ ನಡೆಯುವ ಭ್ರಷ್ಟಾಚಾರ ತಡೆಗಟ್ಟಬೇಕು ಎಂದು ಒತ್ತಾಯಿಸಿದರು.
ಎಸ್‌ಎಫ್‌ಐ ತಾಲೂಕು ಕಾರ್ಯದರ್ಶಿ ವೈ. ಪಂಪಾನಂದ ಮಾತನಾಡಿ, ಗ್ರಂಥಾಲಯ, ಪ್ರಯೋಗಾಲಯ, ಅರ್ಹ ಉಪನ್ಯಾಸಕರು ಸೇರಿದಂತೆ ಇತರೆ ಮೂಲ ಸೌಲಭ್ಯಗಳಿಂದ ವಂಚಿತರಾಗಿರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜುಗಳಿಗೆ ಅಗತ್ಯ ಮೂಲ ಸೌಲಭ್ಯ ಒದಗಿಸಬೇಕು. ಸೆಮಿಸ್ಟರ್ ತರಗತಿಗಳು ಮುಗಿಯುವ ಮುನ್ನವೇ ಪರೀಕ್ಷೆಗಳು ಪ್ರಾರಂಭವಾಗುವುದನ್ನು ನಿಲ್ಲಿಸಬೇಕು. ಪರೀಕ್ಷಾ ಮೌಲ್ಯಮಾಪನ ಸರಿಯಾಗಿ ನಡೆಸಬೇಕು. ಶೀಘ್ರವಾಗಿ ಮರುಮೌಲ್ಯಮಾಪನ ಫಲಿತಾಂಶ ಪ್ರಕಟಿಸಬೇಕು. ಏಕಕಾಲದಲ್ಲಿ 2-3 ಪರೀಕ್ಷೆಗಳನ್ನು ನಿಗದಿ ಮಾಡುವುದನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು. ಎಸ್‌ಎಫ್‌ಐ ಸ್ಥಳೀಯ ಮುಖಂಡರಾದ ಎಸ್.ವಿ. ವಿಜಯಲಕ್ಷ್ಮಿ, ನವಮಿಚಂದ್ರ, ಪುನೀತ್ ನಾಯ್ಕ, ವಿಶ್ವನಾಥ, ನಾಗಾರ್ಜುನ್, ರಾಘವೇಂದ್ರ, ವಿನಯ್, ಈಶ್ವರ್, ಅಣ್ಣಯ್ಯ  ಸೇರಿದಂತೆ ಇತರರು ಪ್ರತಿಭಟನೆಯಲ್ಲಿದ್ದರು.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.