ಬಳ್ಳಾರಿ

ಸಾಹಿತ್ಯದ ಮೂಲಕ ಜಾಗೃತಿಗೊಳಿಸುತ್ತಿದ್ದ ಬೀಚಿ: ಗುಂಡೂರಾವ್

Published On :

ಕನ್ನಡಪ್ರಭ ವಾರ್ತೆ, ಬಳ್ಳಾರಿ, ಜು. 23
ಮೂಢನಂಬಿಕೆಗಳನ್ನು ಕಟುವಾಗಿ ವಿರೋಧಿಸುತ್ತಿದ್ದ ಬೀಚಿ ಅವರು ತಮ್ಮ ಸಾಹಿತ್ಯದ ಮೂಲಕ ಜನರನ್ನು ಜಾಗೃತಗೊಳಿಸುವ ಪ್ರಯತ್ನ ಮಾಡಿದ್ದಾರೆ ಎಂದು ಬೆಂಗಳೂರಿನ ಹಾಸ್ಯ ಸಾಹಿತಿ ವೈ.ವಿ. ಗುಂಡೂರಾವ್ ಹೇಳಿದರು.
ಅವರು ಮಂಗಳವಾರ ಬಳ್ಳಾರಿಯ ಹೆಸರಾಂತ ಹಾಸ್ಯ ಸಾಹಿತಿ, ಹಾಸ್ಯ ಬ್ರಹ್ಮ ಬೀಚಿ ಅವರ ಶತಮಾನೋತ್ಸವ ಸಂದರ್ಭದಲ್ಲಿ ರಂಗತೋರಣ ಸಂಸ್ಥೆಯು ನಗರದಲ್ಲಿ ಹಮ್ಮಿಕೊಂಡಿರುವ ರಂಗಮುಂಗಾರು ಹಾಸ್ಯ ನಾಟಕೋತ್ಸವದ ಮೂರನೇ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಮನವರಿಕೆ: ಬೀಚಿ ಅವರು ತಮ್ಮ ಜೀವನದುದ್ದಕ್ಕೂ ದೇವರು, ಗುರುಗಳು, ಧಾರ್ಮಿಕ ಆಚಾರ, ವಿಚಾರಗಳನ್ನು ವಿರೋಧಿಸಿದ್ದರು. ಆದರೆ ಕೊನೆಯ ದಿನಗಳಲ್ಲಿ ದೇವರು ಇರುವುದನ್ನು ಮನವರಿಕೆ ಮಾಡಿಕೊಂಡಿದ್ದರು ಎಂಬುದು ಅವರ ಬಯೋಗ್ರಫಿಯಲ್ಲಿ ಬರೆದಿದ್ದಾರೆ ಎಂದು ತಿಳಿಸಿದರು. ಬೀಚಿ ಅವರು ಸ್ವತಃ ತಮ್ಮ ಜೀವನದ ಅನುಭವಗಳು, ತಾವು ಕಂಡಂತಹ ಸನ್ನಿವೇಶಗಳನ್ನು ಆಧರಿಸಿಯೇ ಜನರ ಮನಸ್ಸಿಗೆ ಹತ್ತಿರವಾದ ಅಂಶಗಳನ್ನು ಒಳಗೊಂಡು ಸಾಹಿತ್ಯವನ್ನು ರಚಿಸಿದ್ದಾರೆ. ಪ್ರತಿಯೊಬ್ಬರು ವಾಸ್ತವತೆಯಲ್ಲಿಯೇ ಬದುಕಬೇಕು ಎಂಬುದು ಅವರ ಕನಸಾಗಿತ್ತು ಎಂದರು. ಬೀಚಿ ಅವರು ಒಟ್ಟು 63 ಕೃತಿಗಳನ್ನು ರಚಿಸಿದ್ದು, ಅವುಗಳು ರಾಜ್ಯದ ಜನರ ಮೆಚ್ಚುಗೆಗೆ ಪಾತ್ರವಾಗಿವೆ. ಹಾಗೆ ಬೀಚಿರಿಗೆ ಹಾಸ್ಯ ಸಾಹಿತಿ ಎಂದು ಸಂಬೋಧಿಸುವುದು ಅವರಿಗೆ ಹಿಡಿಸುತ್ತಿದ್ದಿಲ್ಲ. ಅವರು ಹಾಸ್ಯದ ಮೂಲಕ ತಿಳಿಯಪಡಿಸುವ ವಿಷಯಗಳನ್ನು ಗಂಭೀರವಾಗಿ ಪರಿಗಣಿಸದಿರುವುದಕ್ಕೆ ಬೇಸರ ವ್ಯಕ್ತಪಡಿಸುತ್ತಿದ್ದರು ಎಂದು ಹೇಳಿದರು. ರಂಗತೋರಣ ಸಂಸ್ಥೆಯ ಕಾರ್ಯದರ್ಶಿ ಪ್ರಭುದೇವ ಕಪ್ಪಗಲ್, ಅಡವಿ ಸ್ವಾಮಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.