ಬಳ್ಳಾರಿ

ಶ್ರದ್ಧೆಯಿಂದ ಅಭ್ಯಸಿಸಿ ಉನ್ನತ ಸ್ಥಾನ ಗಳಿಸಿ

Published On :

ಬಳ್ಳಾರಿ: ವಿದ್ಯಾರ್ಥಿನಿಯರು ಆಸಕ್ತಿ ಹಾಗೂ ಶ್ರದ್ಧೆಯಿಂದ ಅಭ್ಯಸಿಸಿದಲ್ಲಿ ಉನ್ನತ ಸ್ಥಾನಮಾನ ಗಳಿಸಲು ಸಾಧ್ಯ ಎಂದು ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಸಹಪ್ರಾಧ್ಯಾಪಕಿ ರಶ್ಮಿ ತಿಳಿಸಿದರು.
   ಅವರು ನಗರದ ಅಲ್ಲಂ ಸುಮಂಗಳಮ್ಮ ಮಹಿಳಾ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ 2013-14ನೇ ಸಾಲಿನ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿದ್ಯಾರ್ಥಿನಿಯರು ಅಭ್ಯಾಸದ ಕಡೆ ಹೆಚ್ಚು ಒಲವನ್ನು ಹೊಂದಿರಬೇಕು. ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಅಭ್ಯಾಸ ಮಾಡಿದಲ್ಲಿ  ಐಎಎಸ್‌ನಂಥ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸಹ ಉತ್ತಿರ್ಣರಾಗಲು ಸಾಧ್ಯ. ಉನ್ನತ ಸ್ಥಾನಗಳಿಸಿ ಸಮಾಜ ಸೇವೆ ಮಾಡಲು ವಿದ್ಯಾರ್ಥಿನಿಯರು ಮುಂದೆ ಬರಬೇಕೆಂದು ಕರೆ ನೀಡಿದರು. ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷೆ ಕಾತ್ಯಾಯಿನಿ ಮರಿದೇವಯ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿನಿಯರ ಏಳಿಗೆಗಾಗಿ ನಮ್ಮ ಕಾಲೇಜು ಮತ್ತು ಸಂಸ್ಥೆ ಎಲ್ಲ ರೀತಿಯ ಸಹಾಯ, ಸಹಕಾರ ನೀಡಲಾಗುವುದು. ವಿದ್ಯಾರ್ಥಿನಿಯರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಕಾಲೇಜು ಪ್ರಾಚಾರ್ಯ ಡಾ.ಕೆ. ತೇಜಸ್‌ಮೂರ್ತಿ, ಪಿಯು ಕಾಲೇಜು ಪ್ರಾಚಾರ್ಯ ಎಸ್. ಆನಂದ್, ಉಪನ್ಯಾಸಕರಾದ ಜಿ.ಎಂ  ಶರಣಬಸವ, ಸೋಮಶೇಖರ್ ಹಾಗೂ ಇತರರು ಇದ್ದರು. ಲಕ್ಷ್ಮಿ ಸಂಗಡಿಗರು ಪ್ರಾರ್ಥಿಸಿದರು, ಎಸ್. ಸ್ವಾತಿ ನಿರೂಪಿಸಿದರು, ಸಾಬೀನಾ ಬಾನು ಸ್ವಾಗತಿಸಿದರು, ರಂಗವೇಣಿ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.