ಉಕ್ಕಿದ ತುಂಗಭದ್ರೆ: ಕಡಿತಗೊಂಡ ಸಂಚಾರ
ಹೂವಿನಹಡಗಲಿ: ಇಲ್ಲಿ ಮಳೆ ಇಲ್ಲದಿದ್ದರೂ ಪ್ರವಾಹ ಭೀತಿ ಇದ್ದೇ ಇದೆ, ಈಗಾಗಲೇ ತಾಲೂಕಿನ ಅಂಗೂರು-ಕೋಟಿಹಾಳು ಗ್ರಾಮಗಳ ನಡುವಿನ ಹಳ್ಳಕ್ಕೆ ನದಿಯ ಹಿನ್ನೀರು ನುಗ್ಗಿರುವ ಪರಿಣಾಮ ರಸ್ತೆ ಸಂಪರ್ಕ ಕಡಿತಗೊಂಡು ವಾರದಿಂದ ವಾಹನಗಳ ಸಂಚಾರ ಇಲ್ಲದೇ ಆ ಭಾಗದ ಹಳ್ಳಿಗಳಿಗೆ ಹೋಗುವ ಪ್ರಯಾಣಿಕರು ಪರದಾಡುವಂತಾಗಿದೆ.
ಭದ್ರಾ ಡ್ಯಾಂ ತುಂಬಿರುವುದರಿಂದ ತುಂಗಭದ್ರಾ ನದಿಗೆ ಹೊರ ಹರಿವು ಹೆಚ್ಚಾಗಿದೆ, ಇದರಿಂದ ನದಿಗೆ ಇನ್ನು 3-4 ಅಡಿ ನೀರು ಬಂದರೆ ಅನೇಕ ಗ್ರಾಮಗಳು ಸಂಪರ್ಕ ಕಡಿತಗೊಳ್ಳುವ ಅಪಾಯವಿದೆ. ನದಿ ತೀರದ ಬನ್ನಿಮಟ್ಟಿ, ಮಕರಬ್ಬಿ, ಕೋಟಿಹಾಳು, ಅಂಗೂರು, ಹೊಸಹಳ್ಳಿ, ಹೊನ್ನೂರು, ಮದಲಗಟ್ಟಿ ಸೇರಿದಂತೆ ಅನೇಕ ಗ್ರಾಮಗಳ ಜಮೀನುಗಳಿಗೆ ನೀರು ನುಗ್ಗಿ ನೀರಿನಲ್ಲೇ ಬೆಳೆಗಳು ಮುಳುಗಿವೆ.
ಮಳೆ ಇಲ್ಲದೇ ಬಿತ್ತನೆಯಾಗಿರುವ ಬೆಳೆಗಳಿಗೆ ನೀರುಣಿಸಲು ನದಿ ತೀರದ ರೈತರು ಮೋಟಾರ್ನಿಂದು ನೀರೆತ್ತಲು ಯಾವ ರೀತಿಯಿಂದಲ್ಲೂ ಅವಕಾಶವಿಲ್ಲದ ಕಾರಣ ಬತ್ತ ನಾಟಿ ಮಾಡಲು ಪರದಾಡುವ ಪರಿಸ್ಥಿತಿ ಇದೆ. ತಾಲೂಕಿನಲ್ಲಿ ಈವರೆಗೂ 48.91 ಮಿ.ಮೀ ಮಳೆಯಾಗಿದ್ದು, ಇದು ಕೃಷಿ ಚಟುವಟಿಕೆಗಳಿಗೆ ಮತ್ತು ಬಿತ್ತನೆಗೆ ಯಾವ ರೀತಿಯಿಂದಲೂ ಅನುಕೂಲಕರವಾಗಿಲ್ಲವೆಂದು ಕೃಷಿ ಅಧಿಕಾರಿಗಳು ಮಾಹಿತಿ ನೀಡಿದರು. ತಾಲೂಕಿನ ಸುಕ್ಷೇತ್ರ ಮದಲಗಟ್ಟಿ ಆಂಜನೇಯ ದೇವಸ್ಥಾನವನ್ನು ನದಿ ನೀರು ಸುತ್ತುವರೆದಿದೆ. ಇದರಿಂದ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. 3-4 ಅಡಿ ನೀರು ಬಂದರೆ ಮದಲಗಟ್ಟಿ ಗ್ರಾಮ ಸಂಪರ್ಕ ಕಡಿದುಕೊಳ್ಳುವ ಭೀತಿ ಎದುರಾಗಿದೆ.
ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ
ಹೊಸಪೇಟೆ: ತುಂಗಭದ್ರಾ ನದಿ ಪಾತ್ರದ ಜನತೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ತಾಲೂಕು ಆಡಳಿತ ಸೂಚನೆ ನೀಡಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ತಹಸೀಲ್ದಾರ್ ರಮೇಶ್ ಕೋನರಡ್ಡಿ, ತುಂಗಭದ್ರಾ ಜಲಾಶಯ ಬಹುತೇಕ ಭರ್ತಿಯಾಗಿದ್ದು, ವ್ಯಾಪಕ ಮಳೆಯಾಗುತ್ತಿರುವುದರಿಂದ ಜಲಾಶಯದಿಂದ ನದಿಗೆ ಇನ್ನು ಹೆಚ್ಚಿನ ಪ್ರಮಾಣದ ನೀರು ಬಿಡಬಹುದು. ಹೀಗಾಗಿ ತುಂಗಭದ್ರಾ ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ತಿಳಿಸಿದ್ದಾರೆ. ಅನಾಹುತಗಳು ಸಂಭವಿಸಿದಲ್ಲಿ ತಾಲೂಕು ಕಚೇರಿ ಕಂಟ್ರೋಲ್ ರೂಂ- 08394-224208ಗೆ ಕರೆ ಮಾಡಿ ತಿಳಿಸುವಂತೆ ತಹಸೀಲ್ದಾರ್ ಮನವಿ ಮಾಡಿದ್ದಾರೆ.
ವೀಕ್ಷಣೆಗೆ ಜನಸಾಗರ
ಹೊಸಪೇಟೆ: ತುಂಗಭದ್ರಾ ಜಲಾಶಯದಿಂದ ಶುಕ್ರವಾರ 28 ಕ್ರಸ್ಟ್ ಗೇಟ್ಗಳ ಮೂಲಕ ನದಿಗೆ 86,276 ಕ್ಯುಸೆಕ್ ನೀರನ್ನು ಬಿಡಲಾಗಿದೆ. ಜಲಾಶಯದಿಂದ ಕಾಲುವೆಗೆ 11,063 ಕ್ಯುಸೆಕ್ ನೀರು ಸೇರಿ ಒಟ್ಟು ತುಂಗಭದ್ರಾ ಜಲಾಶಯದಿಂದ 96,339 ಕ್ಯುಸೆಕ್ ನೀರು ಹೊರ ಹೋಗುತ್ತಿದೆ. ಜಲಾಶಯಕ್ಕೆ 93 ಸಾವಿರ ಕ್ಯುಸೆಕ್ ಒಳ ಹರಿವು ಇದೆ. ನದಿಗೆ ನೀರು ಬಿಚ್ಚಿರುವುದರಿಂದ ತುಂಬಿ ಹರಿಯುತ್ತಿರುವ ನದಿಯನ್ನು ವೀಕ್ಷಿಸಲು ಸಾವಿರಾರು ಪ್ರವಾಸಿಗರು ಜಲಾಶಯ, ವಿಶ್ವವಿಖ್ಯಾತ ಹಂಪಿಯತ್ತ ಧಾವಿಸುತ್ತಿದ್ದಾರೆ. ನದಿ ತುಂಬಿ ಹರಿಯುತ್ತಿರುವುದರಿಂದ ಪ್ರವಾಸಿಗರು ತುಂಗಭದ್ರಾ ಜಲಾಶಯವನ್ನು ವೀಕ್ಷಿಸಲು ತಂಡೋಪ ತಂಡವಾಗಿ ಡ್ಯಾಂಗೆ ಆಗಮಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

