ಬಳ್ಳಾರಿ

ಮಾಲ್ವಿ ಡ್ಯಾಂಗೆ 2 ಟಿಎಂಸಿ ನೀರು: ಪ್ರಸ್ತಾಪ

Published On :

ಹಗರಿಬೊಮ್ಮನಹಳ್ಳಿ: ತಾಲೂಕಿನ ಜೀವನಾಡಿ ಮಾಲ್ವಿ ಜಲಾಶಯಕ್ಕೆ ತುಂಗಭದ್ರಾ ನದಿಯಿಂದ ಎರಡು ಟಿಎಂಸಿ ನೀರೊದಗಿಸುವ ಯೋಜನೆ ಜಾರಿಗೆ ಸಂಬಂಧಿಸಿದಂತೆ ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ ಅವರು ಕರೆದಿದ್ದ ಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ್ದು, ಜಲಸಂಪನ್ಮೂಲ ಸಚಿವರಿಂದ ಪ್ರಸ್ತಾವನೆಗೆ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಕಾರ್ಮಿಕ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ ಹೇಳಿದರು.
ತಾಲೂಕಿನ ಸಕ್ರಿಹಳ್ಳಿ ಗ್ರಾಮದಲ್ಲಿ ಶನಿವಾರ ಮಧ್ಯಾಹ್ನ 'ನಮ್ಮ ಗ್ರಾಮ, ನಮ್ಮ ರಸ್ತೆ' ಯೋಜನೆಯಡಿ ಕೈಗೊಂಡಿರುವ 1.3 ಕಿ.ಮೀ. ಉದ್ದದ ನೂತನ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೇರವೇರಿಸಿ, ಬಳಿಕ ಗ್ರಾಮದಲ್ಲಿ ಆಯೋಜಿಸಿದ್ದ ಬಹಿರಂಗ ಸಭೆಯಲ್ಲಿ ಮಾತನಾಡಿ, ನೀರಾವರಿ ಉದ್ದೇಶದ ಜತೆಗೆ ಮುಖ್ಯವಾಗಿ ಅಂತರ್ಜಲ ವೃದ್ಧಿಗೆ ಈ ಡ್ಯಾಂ ಪೂರಕವಾಗಿ ಕಾರ್ಯನಿರ್ವಹಿಸಲಿದೆ. ಈ ಅಂಶವನ್ನು ಸಭೆಯಲ್ಲಿ ನೀರಾವರಿ ಸಚಿವರ ಗಮನಕ್ಕೆ ತಂದಿರುವೆ. ಸಂಬಂಧಿಸಿದ ಅಧಿಕಾರಿಗಳ ಜತೆಗೆ ಈ ಕುರಿತಂತೆ ಪರಿಶೀಲಿಸುವುದಾಗಿ ಸಚಿವರು ಭರವಸೆ ನೀಡಿದ್ದಾರೆ ಎಂದರು.
ಶೀಘ್ರದಲ್ಲೇ 3 ಯೋಜನೆ: ತಾಲೂಕಿನ 80 ಹಳ್ಳಿಗಳಿಗೆ ತುಂಗಭದ್ರಾ ನದಿ ಹಿನ್ನಿರಿನಿಂದ ಕುಡಿಯುವ ನೀರು ಪೂರೈಕೆ ಮಾಡುವ 3 ಯೋಜನೆಗಳಿಗೆ ಶೀಘ್ರದಲ್ಲೇ ಟೆಂಡರ್ ಕರೆಯಲಾಗುವುದು. ಮುಂದಿನ ಮೂರ್ನಾಲ್ಕು ತಿಂಗಳಲ್ಲಿ ಈ 3 ಯೋಜನೆಗಳ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದರು.
ಜಿಪಂ ಉಪಾಧ್ಯಕ್ಷೆ ಮಮತಾ ಸುರೇಶ, ತಾಪಂ ಅಧ್ಯಕ್ಷೆ ವಿಜಯಲಕ್ಷ್ಮಿ ಪೂರ್ಯನಾಯ್ಕ, ಉಪಾಧ್ಯಕ್ಷೆ ನಾಗರತ್ನಾ ವೆಂಕಟೇಶ, ಜಿಪಂ ಸದಸ್ಯ ವಸಂತ, ತಾಪಂ ಸದಸ್ಯರಾದ ಐಗೋಳ ಚಿದಾನಂದ, ಭಾರತಮ್ಮ ಬೆಲ್ಲದ್, ಗ್ರಾಪಂ ಅಧ್ಯಕ್ಷೆ ಲಲಿತಮ್ಮ, ಮುಟುಗನಹಳ್ಳಿ ಕೊಟ್ರೇಶ್, ಮುಖಂಡರಾದ ಅರವಳ್ಳಿ ವೀರಣ್ಣ, ಹೆಗ್ಡಾಳ ರಾಮಣ್ಣ, ತಾಪಂ ಮಾಜಿ ಅಧ್ಯಕ್ಷ ಟಿ. ಪ್ರಭಾಕರ, ಜಿಪಂ ಮಾಜಿ ಸದಸ್ಯ ಉಲುವತ್ತಿ ಸೋಮಲಿಂಗಪ್ಪ, ಬಾಲಕೃಷ್ಣಬಾಬು, ತಹಸೀಲ್ದಾರ್ ನಾಗರಾಜ ಭಟ್, ತಾಪಂ ಇಓ ಗೋಪ್ಯಾನಾಯ್ಕ, ಜೆಸ್ಕಾಂ ಎಇಇ ಮೋಟ್ಲಾನಾಯ್ಕ ಭಾಗವಹಿಸಿದ್ದರು. ಮಲ್ಲಿಕಾರ್ಜುನಗೌಡ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.