ಸುದ್ದಿ ಸಂಕ್ಷೇಪ
ಇಂದು ನಾಟಕ ಪ್ರದರ್ಶನ
ಬಳ್ಳಾರಿ: ಗಾನಯೋಗಿ ಪಂಚಾಕ್ಷರಿ ಗವಾಯಿಗಳ 69ನೇ ಹಾಗೂ ಡಾ. ಪಂ. ಪುಟ್ಟರಾಜ ಕವಿಗವಾಯಿಗಳ ತೃತೀಯ ಪುಣ್ಯಸ್ಮರಣೋತ್ಸವದ ಪ್ರಯುಕ್ತ ಬಳ್ಳಾರಿಯ ಶ್ರೀ ಪಂಚಾಕ್ಷರಿ ಸಂಗೀತ ಕಲಾ ಬಳಗದಿಂದ ಜು. 28ರಂದು ರಾತ್ರಿ 8.30ಕ್ಕೆ ರಕ್ತರಾತ್ರಿ ಅರ್ಥಾತ್ ವೀರ ಅಶ್ವತ್ಥಾಮ ಎಂಬ ಪೌರಾಣಿಕ ನಾಟಕ ನಗರದ ರಾಘವ ಕಲಾ ಮಂದಿರದಲ್ಲಿ ಪ್ರದರ್ಶನಗೊಳ್ಳಲಿದೆ ಎಂದು ಪ್ರಕಟಣೆ ತಿಳಿಸಿದೆ.
ಮಟ್ಕಾ: ಓರ್ವನ ಬಂಧನ
ಬಳ್ಳಾರಿ: ಕುರುಗೋಡು ಸಮೀಪದ ಸೋಮಲಾಪುರ ಗ್ರಾಮದ ಸೋಮಪ್ಪನ ಗುಡಿ ಮುಂದಿನ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜೂಜಾಟ ಆಡುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿ ಓರ್ವನನ್ನು ಬಂಧಿಸಿ ಆತನಿಂದ ರು. 6,300 ವಶಪಡಿಸಿಕೊಂಡಿದ್ದಾರೆ. ಶುಕ್ರವಾರ ಸಂಜೆ ಖಚಿತ ಮಾಹಿತಿಯ ಮೇರೆಗೆ ಕುರುಗೋಡು ಪೊಲೀಸರು ಅಡ್ಡೆ ಮೇಲೆ ದಾಳಿ ಮಾಡಿ, ಕಾಯಿಗಟ್ಟೆ ಶಂಕ್ರಪ್ಪನನ್ನು ಬಂಧಿಸಿದ್ದಾರೆ. ಕುರುಗೋಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಏಣಿಗಿ ಬಸಾಪುರ ಶಾಲೆ ಸುತ್ತ ವಾಮಾಚಾರ
ಹಗರಿಬೊಮ್ಮನಹಳ್ಳಿ: ಸರ್ಕಾರಿ ಶಾಲೆಯ ನಾಲ್ಕು ಮೂಲೆಗಳಲ್ಲಿ ಮತ್ತು ಶಾಲೆಗೆ ಬರುವ ರಸ್ತೆಯಲ್ಲಿ ಕುಂಕುಮ ಮಿಶ್ರಿತ ನಿಂಬೆಹಣ್ಣುಗಳನ್ನು ಅಲ್ಲಲ್ಲಿ ಇಟ್ಟಿದ್ದು, ವಿದ್ಯಾರ್ಥಿ-ಶಿಕ್ಷಕರಲ್ಲಿ ತೀವ್ರ ಆತಂಕ ಉಂಟು ಮಾಡಿದ ಘಟನೆ ತಾಲೂಕಿನ ಏಣಿಗೆ ಬಸಾಪುರ (ಹಳಊೇರು) ಗ್ರಾಮದಲ್ಲಿ ಶನಿವಾರ ಜರುಗಿದೆ. ವಿಷಯ ತಿಳಿದ ನೂರಾರು ಗ್ರಾಮಸ್ಥರು ಗ್ರಾಪಂ ಮಾಜಿ ಅಧ್ಯಕ್ಷ ದೊಡ್ಡಬಸಪ್ಪ ನೇತೃತ್ವದಲ್ಲಿ ತಂಬ್ರಹಳ್ಳಿ ಪೊಲೀಸ್ ಠಾಣೆಗೆ ತಲುಪಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ನಿಂಬೆಹಣ್ಣುಗಳನ್ನು ಗ್ರಾಮಸ್ಥರಿಂದಲೇ ತೆರವುಗೊಳಿಸಿ, ಪರಿಸ್ಥಿತಿ ಶಾಂತಗೊಳಿಸಿದರು. ಇಂತಹ ಘಟನೆ ಆಗಾಗ ನಡೆಯುತ್ತಲೆ ಇದೆ. ಆದರೆ ನಾವು ಬಹಿರಂಗಪಡಿಸಿರಲಿಲ್ಲ. ಆದರೆ ವಾಮಚಾರದ ಮೂಲಕ ಗ್ರಾಮಸ್ಥರಲ್ಲಿ ಬೆದರಿಕೆ ಉಂಟು ಮಾಡಲು ಕೆಲ ಅನುಮಾನಾಸ್ಪದ ವ್ಯಕ್ತಿಗಳಿಂದ ಇಂತಹ ಕೃತ್ಯ ಮೇಲಿಂದ ಮೇಲೆ ನಡೆಯುತ್ತಿರುವುದನ್ನು ತಡೆಗಟ್ಟಲು ಪೊಲೀಸರ ಗಮನಕ್ಕೆ ತರಲಾಯಿತು ಎಂದು ದೊಡ್ಡಬಸಪ್ಪ ತಿಳಿದರು. ಶಾಲೆಗೆ ಸೇರಿದ ಜಾಗದಲ್ಲಿ ಬಹುದಿನಗಳಿಂದ ಇದ್ದ ಕುರಿಹಟ್ಟಿಯವರು ವಾಮಚಾರ ಮಾಡಿಸಿದ್ದಾರೆ ಎಂದು ಗ್ರಾಮಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ. ಕುರಿಹಟ್ಟಿ ತೆರವಿಗೆ ಸೂಚಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

