ಅವಧಿ ವಿಸ್ತರಣೆ
ಬಳ್ಳಾರಿ: ಜಿಲ್ಲೆಯಲ್ಲಿ 2013-14ನೇ ಸಾಲಿಗಾಗಿ ಪ್ರಥಮ ಡಿ.ಇಡಿ. ದಾಖಲಾತಿಗಾಗಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ್ದ ಅವಧಿಯನ್ನು ಜುಲೈ 25ಕ್ಕೆ ಬದಲಾಗಿ ಜುಲೈ 31ರವರೆಗೆ ವಿಸ್ತರಿಸಲಾಗಿದೆ. ಪ್ರಥಮ ವರ್ಷದ ಡಿ.ಇಡಿ. ದಾಖಲಾತಿ ಬಯಸುವ ಅರ್ಹ ಅಭ್ಯರ್ಥಿಗಳು ಜು. 31ರೊಳಗೆ ಅರ್ಜಿ ಸಲ್ಲಿಸಲು ಪ್ರಕಟಣೆ ತಿಳಿಸಿದೆ.
ವಿದ್ಯಾರ್ಥಿನಿ ಅಪಹರಣ
ಬಳ್ಳಾರಿ: ಕಾಲೇಜಿಗೆ ಹೋಗಿದ್ದ ವಿದ್ಯಾರ್ಥಿನಿಯೋರ್ವಳನ್ನು ಅಪಹರಣ ಮಾಡಿರುವ ಘಟನೆ ಹಗರಿಬೊಮ್ಮನಹಳ್ಳಿಯಲ್ಲಿ ನಡೆದಿದೆ. ಅಪಹರಣಕ್ಕೆ ಒಳಗಾದ ವಿದ್ಯಾರ್ಥಿ ರುಕ್ಮಿಣಿ (18). ಜು. 20ರಂದು ಬೆಳಗ್ಗೆ 10.30ಕ್ಕೆ ರುಕ್ಮಿಣಿ ಇಲ್ಲಿಯ ಜೂನಿಯರ್ ಕಾಲೇಜಿಗೆ ಹೋಗಿದ್ದಾಗ, ನಾಗರಾಜ್ ಸೇರಿದಂತೆ 8 ಜನರು ತಮ್ಮ ಮಗಳನ್ನು ಅಪಹರಣ ಮಾಡಿಕೊಂಡು ಹೋಗಿದ್ದಾರೆ ಎಂದು ತಾಲೂಕಿನ ಅಂಕಸಮುದ್ರ ಗ್ರಾಮದ ಟಿಗರ ಚಂದ್ರಪ್ಪ ಅವರು ಹಗರಿಬೊಮ್ಮನಹಳ್ಳಿ ಠಾಣೆಯಲ್ಲಿ ದೂರು ನೀಡಿದ್ದಾರೆ.
ಮತ್ತಿಬ್ಬರ ಬಂಧನ
ಬಳ್ಳಾರಿ: ಇತ್ತೀಚಿಗೆ ಇಲ್ಲಲ್ಲಿಗ ರೂಪನಗುಡಿಯಲ್ಲಿನ ಮನೆವೊಂದರ ಲ್ಲಿ ಮಟ್ಕಾ ಅಡ್ಡೆ ಮೇಲೆ ದಾಳಿ ನಡೆಸಿ 24 ಆರೋಪಿಗಳನ್ನು ಬಂಧಿಸಿದ್ದ ಪೊಲೀಸರು, ಮತ್ತಿಬ್ಬರನ್ನು ಡಿಎಸ್ಪಿ ಡಿಸಿಆರ್ಬಿ ಬಿ. ಲಿಂಗ್ದಾಳ್ ನೇತೃತ್ವದ ತಂಡ ಬಂಧಿಸಿದೆ. ಬಂಧಿತರಿಂದ ರು. 9.48 ಲಕ್ಷ ವಶಕ್ಕೆ ತೆಗೆದುಕೊಂಡಿದ್ದಾರೆ. ಈ ಕುರಿತಾಗಿ ಬ್ರೂಸ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜೂಜಾಟ: ಇಬ್ಬರ ಬಂಧನ
ಬಳ್ಳಾರಿ: ನಗರದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೇಟ್ ಜೂಜಾಟ ಆಡುತ್ತಿದ್ದ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ, 9 ಜನರನ್ನು ಬಂಧಿಸಿ, ಅವರಿಂದ 3,850 ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಎಸ್ಆರ್ ಪುರ ಗ್ರಾಮದ ಈಶ್ವರ ಗುಡಿ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಅಂದರ್ ಬಹರ್ ಜೂಜಾಟ ನಡೆಯುತ್ತಿರುವ ಅಡ್ಡೆಯ ಮೇಲೆ ಕೌಲ್ಬಜಾರ್ ಪೊಲೀಸರು ದಾಳಿ ಮಾಡಿ, ರಾಮಕೃಷ್ಣ ಸೇರಿದಂತೆ 9 ಜನರನ್ನು ಬಂಧಿಸಿ, ಅವರಿಂದ 3,850, ಇಸ್ಪೇಟ್ ಎಲೆಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ. ಈ ಕುರಿತಾಗಿ ಕೌಲ್ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚುನಾವಣೆ: ವಿಜಯೋತ್ಸವ
ಹೂವಿನಹಡಗಲಿ: ರಾಜ್ಯ ಸರ್ಕಾರಿ ನೌಕರರ ಸಂಘ ತಾಲೂಕು ಶಾಖೆಗೆ ನಡೆದ ಚುನಾವಣೆಯಲ್ಲಿ ಆಯ್ಕೆಯಾದ ಆರೋಗ್ಯ ಇಲಾಖೆ ಪ್ರತಿನಿಧಿಗಳು ವಿಜಯೋತ್ಸವ ಆಚರಿಸಿದರು. ಇಲಾಖೆಯ 4 ಸ್ಥಾನಗಳಿಗೆ 8 ಅಭ್ಯರ್ಥಿಗಳ ನಡುವೆ ತೀವ್ರ ಹಣಾಹಣಿ ಏರ್ಪಟ್ಟಿತ್ತು. ಚುನಾವಣೆಯಲ್ಲಿ ಒಂದೇ ಗುಂಪಿನ ನಾಲ್ವರು ಆಯ್ಕೆಯಾಗುತ್ತಿದ್ದಂತೆ ಆರೋಗ್ಯ ಇಲಾಖೆ ಎಲ್ಲ ಸಿಬ್ಬಂದಿ ನೂತನ ನಿರ್ದೇಶಕರನ್ನು ಅಭಿನಂದಿಸಿದರು. ಸಿಹಿ ಹಂಚುವ ಮೂಲಕ ಸಂಭ್ರಮಿಸಿದರು. ನೂತನ ನಿರ್ದೇಶಕಿ ಸಿ.ಸಿ. ಪ್ರೇಮಾ, ವಿ. ಶಶಿಧರ, ಎಂ. ಪ್ರಕಾಶ್, ಯೋಗೇಂದ್ರನಾಯ್ಕ ಮಾತನಾಡಿ, ಆರೋಗ್ಯ ಇಲಾಖೆ ಸಿಬ್ಬಂದಿ ಧ್ವನಿಯಾಗಿ ಕೆಲಸ ಮಾಡುವುದಾಗಿ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

