ಬಳ್ಳಾರಿ

ಗೋಪುರ ಮೇಲೆ ಕನ್ನಡ ಧ್ವಜ ಹಾರಿಸಲು ಒತ್ತಾಯ

Published On :

ಬಳ್ಳಾರಿ: ನಗರದ ಗಡಿಗಿ ಚನ್ನಪ್ಪ ವೃತ್ತದಲ್ಲಿ ಮರು ನಿರ್ಮಾಣ ಮಾಡುತ್ತಿರುವ ಗಡಿಯಾರ ಗೋಪುರದ ಮೇಲೆ ನಿರಂತರವಾಗಿ ಕನ್ನಡ ಧ್ವಜ ಹಾರುವಂತೆ ವ್ಯವಸ್ಥೆ ಮಾಡಬೇಕು ಎಂದು ಇಲ್ಲಿನ ನವಕರ್ನಾಟಕ ಯುವಶಕ್ತಿ ಜಿಲ್ಲಾ ಘಟಕ ಒತ್ತಾಯಿಸಿದೆ.
ನವಕರ್ನಾಟಕ ಯುವಶಕ್ತಿ ಜಿಲ್ಲಾ ಘಟಕದ ಪದಾಧಿಕಾರಿಗಳು ಈ ಕುರಿತು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.
ಕರ್ನಾಟಕ ಏಕೀಕರಣಕ್ಕಾಗಿ ನಡೆದ ಹೋರಾಟದಲ್ಲಿ ವೀರ ಮರಣ ಹೊಂದಿದ ಪಿಂಜಾರ್ ರಂಜಾನ್‌ಸಾಬ್ ಅವರ ಪ್ರತಿಮೆ ಸ್ಥಾಪಿಸಬೇಕು. ನಿರ್ಮಾಣವಾಗುತ್ತಿರುವ ಗಡಿಯಾರ ಗೋಪುರದ ಮೇಲೆ ನಿರಂತರವಾಗಿ ಕನ್ನಡ ಧ್ವಜ ಹಾರುವಂತೆ ವ್ಯವಸ್ಥೆ ಮಾಡಬೇಕು. ಜತೆಗೆ ಗಡಿಗಿ ಚನ್ನಪ್ಪ ವೃತ್ತದಲ್ಲಿ ಮರು ನಿರ್ಮಾಣವಾಗುತ್ತಿರುವ ಗೋಪುರದ ನಾಲ್ಕು ಭಾಗಗಳಲ್ಲಿ ಕನ್ನಡದ ಜ್ಞಾನಪೀಠ ಪುರಸ್ಕೃತರ ಪ್ರತಿಮೆಗಳನ್ನು ನಿರ್ಮಿಸಿ, ಅದಕ್ಕೆ ವಿದ್ಯುತ್ ದೀಪಾಲಂಕಾರದ ವ್ಯವಸ್ಥೆ ಮಾಡಬೇಕು. ಗೋಪುರಕ್ಕೆ ಯಾವುದೇ ಹಾನಿಯಾಗದಂತೆ ಮುಂಜಾಗ್ರತೆ ಕ್ರಮವಾಗಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಬೇಕು ಎಂದು ಒತ್ತಾಯಿಸಿದೆ.
ಮನವಿ ನೀಡುವ ಸಂದರ್ಭದಲ್ಲಿ ಸಂಘಟನೆ ಮುಖಂಡರಾದ ಚಂದ್ರಶೇಖರ್ ಆಚಾರಿ, ಬಸವರಾಜ ಖೇಣಿ, ಯುಸೂಫ್, ಗುರುಸ್ವಾಮಿ, ಮಹೇಶ್ ಕುಮಾರ್, ನಾಗರಾಜ್, ಮಲ್ಲಿಕಾರ್ಜುನ್, ಮಂಜುನಾಥ್ ಮತ್ತು ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.