ಬಳ್ಳಾರಿ

ವಲಯ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

Published On :

ಹೂವಿನಹಡಗಲಿ: ಪಟ್ಟಣದ ಮೌಂಟ್ ಕಾರ್ಮೆಲ್ ಶಾಲಾ ಮೈದಾನದಲ್ಲಿ ವಲಯ ಮಟ್ಟದ ಕ್ರೀಡಾಕೂಟವನ್ನು ಬಿಇಒ ಬಿ. ವಿಜಯಕುಮಾರ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ, ಆತ್ಮ ರಕ್ಷಣೆಯ ವಿದ್ಯೆಯಾದ ಕರಾಟೆಯನ್ನು ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗುವುದು. ಇದರಿಂದ ಸ್ವಯಂ ರಕ್ಷಣೆಗೆ ಸಹಾಯಕವಾಗಲಿದೆ ಎಂದರು.
ಸರ್ಕಾರ ಕ್ರೀಡೆಗಳಿಗೆ ಹೆಚ್ಚಿನ ಉತ್ತೇಜನ ನೀಡುತ್ತಿದೆ, ಅವುಗಳ ಪ್ರಯೋಜನ ಪಡೆದು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಉತ್ತಮ ಕ್ರೀಡಾಪಟುಗಳಾಗಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಕ್ರೀಡಾಧ್ವಜಾರೋಹಣ ನೆರವೇರಿಸಿದ ಪುರಸಭೆ ಸದಸ್ಯ ಸಂತೋಷ ಜೈನ್ ಮಾತನಾಡುತ್ತಾ, ಕ್ರೀಡೆಗಳಿಂದ ಸದೃಢ ದೇಹದಲ್ಲಿ ಸದೃಢ ಮನಸ್ಸು ನಿರ್ಮಾಣವಾಗುತ್ತಿದೆ. ದೈಹಿಕ ಶ್ರಮದಿಂದ ಕ್ರೀಡೆಗಳಲ್ಲಿ ಸಾಧನೆ ಮಾಡುವ ಮೂಲಕ ಶಾರೀರಿಕ ಆರೋಗ್ಯ ಕಾಪಾಡಿಕೊಳ್ಳುವಂತೆ ಸಲಹೆ ಮಾಡಿದರು.
ಕಾರ್ಮೆಲ್ ನಿರ್ದೇಶಕ ರಾಜೇಶ್ ಡಿಸೋಜ ಮಾತನಾಡಿ, ಕ್ರೀಡೆ ಎಂದರೆ ಕ್ರಿಕೆಟ್ ಎನ್ನುವಂತಹ ವಾತವರಣ ಸೃಷ್ಟಿಯಾಗಿದೆ, ಇದನ್ನು ಹೊರತುಪಡಿಸಿ ಕಬಡ್ಡಿ, ವಾಲಿಬಾಲ್, ಖೋ ಖೋ ಕ್ರೀಡೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ವಿದ್ಯಾರ್ಥಿಗಳು ಬರಿ ಪಠ್ಯ ವಿಷಯದಲ್ಲಿ ಸಾಧನೆ ಮಾಡದೆ ಪಠ್ಯೇತರವಾಗಿ ಆಟದ ಮೈದಾನದಲ್ಲಿ ಸಾಧನೆ ಮಾಡುವ ಮೂಲಕ ರಾಷ್ಟ್ರೀಯ ಕ್ರೀಡಾಪಟುಗಳಾಗುವಂತೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಎಂಪಿಪಿ ನಗರ ಶಾಲೆ ಅಧ್ಯಕ್ಷ ಅಂದಾನಪ್ಪ ಅಧ್ಯಕ್ಷತೆ ವಹಿಸಿದ್ದರು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮುಕ್ತಿಯಾರ್ ಪ್ರತಿಜ್ಞಾವಿಧಿ ಬೋಧಿಸಿದರು. ಮುಖಂಡರಾದ ವೀರಣ್ಣ, ಶಂಕ್ರಪ್ಪ, ಗುಣಶೀಲಪ್ಪ, ಸಿದ್ದೇಶ್, ದೈಹಿಕ ಶಿಕ್ಷಣಾಧಿಕಾರಿ ಎನ್. ಮಂಜುನಾಥ, ಪದಾಧಿಕಾರಿಗಳಾದ ಕಂಠಿ ಪ್ರಕಾಶ, ಆನಂದ, ಕೊಟ್ರಯ್ಯ, ಎಚ್.ಡಿ. ಶೋಭಾ, ಲಲಿತಾಬಾಯಿ, ಕೌಶಲ್ಯಬಾಯಿ, ಎಸ್.ಎಂ. ಭೋಗೇಶ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.