ಉತ್ತಮ ವ್ಯಕ್ತಿಗಳಾಗಿ ಬದುಕಿ
ಹೊಸಪೇಟೆ: ಪ್ರತಿಯೊಬ್ಬರೂ ಉತ್ತಮ ವ್ಯಕ್ತಿಗಳಾಗಿ ಬದುಕನ್ನು ಸಾಗಿಸುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ನಾಂದಿ ಹಾಡಬೇಕಾಗಿದೆ ಎಂದು ಕೂಡಲಿ ಶೃಂಗೇರಿ ಶಾರದಾ ಪೀಠದ ಜಗದ್ಗುರು ಡಾ. ವಿದ್ಯಾಭಿನವ ಭಾರತೀ ಸ್ವಾಮೀಜಿ ಹೇಳಿದರು.
ನಗರದ ಮೂಕಾಂಬಿಕಾದೇವಿ ದೇವಸ್ಥಾನದಲ್ಲಿ ನಡೆದ ವಿಶೇಷ ಧಾರ್ಮಿಕ ಕಾರ್ಯಕ್ರಮಗಳಿಗೆ ಜಾಲನೆ ನೀಡಿ ಅವರು ಮಾತನಾಡಿ, ಮುನುಷ್ಯ ಅನೇಕ ವಿಧವಾದ ಜೀವನದ ಜಂಜಾಟದಲ್ಲಿ ತೊಡಗಿಕೊಂಡು ಮಾನಸಿಕ ನೆಮ್ಮದಿಯನ್ನು ಹಾಳು ಮಾಡಿಕೊಳ್ಳುತ್ತಿದ್ದಾನೆ. ಹೀಗಾಗಿ ನಿತ್ಯವೂ ಸ್ವಲ್ಪ ಸಮಯವನ್ನು ಮನಃಶಾಂತಿಗಾಗಿ ದೇವರ ಧ್ಯಾನದಲ್ಲಿ ತೊಡಗಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ದೇವತಾರಾಧನೆ, ನಂದಿ ವೀರಭದ್ರ ನಾಗಪ್ರತಿಷ್ಠೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಪ್ರತಿಷ್ಠಾಂಗ ಹೋಮ, ಶ್ರೀಗಳ ಸಾಮೂಹಿಕ ಪಾದಪೂಜೆ, ರಾಕ್ಷೆಘ ಹೋಮ, ಬಲಿ ಪೂರ್ಣಾಹೂತಿ ಹಾಗೂ ಮಹಾಮಂಗಳಾರತಿ ಕಾರ್ಯಕ್ರಮಗಳು ಶ್ರೀಗಳ ಅಣತಿಯಂತೆ ಭಕ್ತವೃಂದ ನೆರವೇರಿಸಿದರು. ಎಸ್.ಪಿ. ಸುಂದರೇಶ ಭಟ್, ಗೊಗ್ಗ ರಾಜಣ್ಣ, ಕೆ. ದಿವಾಕರ ಸೇರಿದಂತೆ ಸಹಸ್ರಾರು ಭಕ್ತರು ಸಾಂಪ್ರದಾಯಿಕ ಮೇಳ, ಬಾಣ ಬಿರುಸುಗಳೊಂದಿಗೆ ಶ್ರೀಗಳನ್ನು ನಗರಕ್ಕೆ ಬರಮಾಡಿಕೊಂಡು ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

