ಬಳ್ಳಾರಿ

ದಲಿತ ಮುಖಂಡ ಚಲಪತಿ ಕೊಲೆ

Published On :

ಬಳ್ಳಾರಿ:  ದಲಿತ ಮುಖಂಡನೋರ್ವನನ್ನು ಐವರು ದುಷ್ಕರ್ಮಿಗಳು ಕಬ್ಬಿಣದ ರಾಡಿನಿಂದ ತಲೆ ಮತ್ತು ಮುಖದ ಭಾಗಕ್ಕೆ ಬಲವಾಗಿ ಹೊಡೆದು ಕೊಲೆಗೈದಿರುವ ಘಟನೆ ಬಳ್ಳಾರಿ-ಅನಂತಪುರ ರಸ್ತೆಯಲ್ಲಿರುವ ಸರ್ಕಾರಿ ಅತಿಥಿ ಗೃಹದ ಮುಂಭಾಗದಲ್ಲಿ ಮಂಗಳವಾರ ಸಂಜೆ ಜರುಗಿದೆ.
ನಗರದ ಶ್ರೀರಾಂಪುರ ಕಾಲೋನಿ ನಿವಾಸಿ ಎನ್.ಎಸ್.ಚಲಪತಿ(38) ಎಂಬುವವರು ಶ್ರೀರಾಂಪುರ ಕಾಲೋನಿಯಿಂದ ಸಂಜೆ 6.30ರ ಸುಮಾರಿಗೆ ನಡೆದುಕೊಂಡು ಬರುತ್ತಿದ್ದ ಸಂದರ್ಭದಲ್ಲಿ ಐವರು ದುಷ್ಕರ್ಮಿಗಳು ಬೈಕ್ ಮೇಲೆ ಬಂದು ದಾಳಿ ನಡೆಸಿ, ತಲೆ ಮತ್ತು ಮುಖದ ಭಾಗಕ್ಕೆ ಬಲವಾಗಿ ಹೊಡೆದ ಪರಿಣಾಮ ಚಲಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹತ್ಯೆ ನಡೆದ ಸ್ಥಳದಲ್ಲಿ ಒಂದು ಮೊಬೈಲ್ ಪತ್ತೆಯಾಗಿದ್ದು, ಮೃತದೇಹವನ್ನು ನಗರದ ವಿಮ್ಸ್‌ಗೆ ತರಲಾಗಿದೆ. ಪ್ರಕರಣ ಬ್ರೂಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಶ್ವಾನದಳ ಮತ್ತು ಬೆರಳಚ್ಚು ತಜ್ಞರು ಘಟನಾ ಸ್ಥಳವನ್ನು ಪರಿಶೀಲಿಸಿ, ಮಾಹಿತಿ ಪಡೆದರು. ಜಿಲ್ಲಾಧಿಕಾರಿ ಅಮ್ಲಾನ್ ಆದಿತ್ಯ ಬಿಸ್ವಾಸ್, ಎಸ್‌ಪಿ ಡಾ.ಚಂದ್ರಗುಪ್ತ, ಡಿವೈಎಸ್‌ಪಿ ಮುರುಗಣ್ಣನವರ್, ಪಿಎಸ್‌ಐಗಳಾದ ನಿರಂಜನ, ಚಿದಾನಂದ ಘಟನಾ ಸ್ಥಳಕ್ಕೆ ಆಗಮಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.