ಹಗರಿಬೊಮ್ಮನಹಳ್ಳಿ; ಮತ್ತೆ ವಾಂತಿ, ಭೇದಿ: ಇಬ್ಬರು ಆಸ್ಪತ್ರೆಗೆ ದಾಖಲು
ಕನ್ನಡಪ್ರಭ ವಾರ್ತೆ , ಹಗರಿಬೊಮ್ಮನಹಳ್ಳಿ , ಜೂ. 7
ತಾಲೂಕಿನ ಮಗಿಮಾವಿನಹಳ್ಳಿ ಗ್ರಾಮದಲ್ಲಿ ವಾಂತಿ-ಭೇದಿ ಪ್ರಕರಣ ನಿಯಂತ್ರಣಕ್ಕೆ ಬರುತ್ತಿದ್ದಂತೆಯೇ ಅದೇ ಗ್ರಾಮದ ಸರಹದ್ದಿನಲ್ಲಿರುವ ರಾಯರಾಳತಾಂಡದಲ್ಲಿ ಗುರುವಾರ ರಾತ್ರಿ ಇಬ್ಬರು ಮಕ್ಕಳಿಗೆ ವಾಂತಿ-ಭೇದಿ ಕಾಣಿಸಿಕೊಂಡಿದೆ.
ಮಕ್ಕಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದ್ದು, ತಾಂಡಾದ ಜನತೆ ಭಯ-ಭೀತರಾಗಿದ್ದಾರೆ. ಗ್ರಾಮದಲ್ಲಿ ನೀರಿನ ಟ್ಯಾಂಕ್ ಮೂಲಕ ಕುಡಿಯುವ ನೀರು ಪೂರೈಸಲಾಗುತ್ತಿದೆ. ಸ್ಥಳೀಯ ಆರೋಗ್ಯ ಇಲಾಖೆ ಸಿಬ್ಬಂದಿ ತಾಂಡದಲ್ಲಿಯೇ ಬೀಡುಬಿಟ್ಟಿದ್ದು ಪ್ರತಿ ಮನೆಗೆ ತೆರಳಿ ರೋಗ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕೆಲಸದಲ್ಲಿ ನಿರತರಾಗಿದ್ದಾರೆ.ಅನೇಕ ದಿನಗಳಿಂದ ಅನಾರೋಗ್ಯಪೀಡಿತನಾಗಿದ್ದ ರಾಯರಾಳ ತಾಂಡಾದ ಕೃಷ್ಣನಾಯ್ಕ (12) ಗುರುವಾರ ರಾತ್ರಿ ಮೃತಪಟ್ಟಿದ್ದು, ವಾಂತಿ-ಭೇದಿಯಿಂದಲೇ ಈ ಸಾವು ಸಂಭವಿಸಿರಬಹುದೆಂದು ಶಂಕಿಸಲಾಗಿದೆ. ಆತನ ಸಾವಿಗೆ ವಾಂತಿ-ಭೇದಿ ಕಾರಣವಲ್ಲ ಎಂದು ತಾಲೂಕು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ.ಪಟ್ಟಣ ಪ್ರದೇಶ ಹೊರತುಪಡಿಸಿ ತಾಲೂಕಿನಾದ್ಯಂತ ಬೋರ್ವೆಲ್ ನೀರೇ ಜನತೆಗೆ ಕುಡಿಯುವ ಏಕೈಕ ಆಸರೆಯಾಗಿದೆ. ಈ ನಿಟ್ಟಿನಲ್ಲಿ ವಾಂತಿ-ಭೇದಿಗೆ ಅದೇ ಕಲುಷಿತ ನೀರು ಕಾರಣ ಎಂದು ಗ್ರಾಮಸ್ಥರು ಹೇಳುತ್ತಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

