ಪ್ರೊ. ಕೃಷ್ಣಪ್ಪ ಜಯಂತಿ ಆಚರಣೆ
ಬಳ್ಳಾರಿ: ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಮಿತಿ ವತಿಯಿಂದ ಭಾನುವಾರ ಇಲ್ಲಿನ ಜಿಲ್ಲಾ ಕಚೇರಿಯಲ್ಲಿ ಪ್ರೊ. ಕೃಷ್ಣಪ್ಪ ಅವರ 75ನೇ ಜಯಂತಿಯನ್ನು ಆಚರಿಸಿತು. ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಮುಂಡ್ರಿಗಿ ನಾಗರಾಜ್ ಪ್ರೊ. ಕೃಷ್ಣಪ್ಪ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿ ಮಾತನಾಡಿ, ಪ್ರೊ.ಬಿ.ಕೆ ಅವರು ರಾಜ್ಯದಲ್ಲಿ ದಲಿತ ಚಳವಳಿಯನ್ನು ಹುಟ್ಟುಹಾಕಿದ ಮಹಾನ್ ನಾಯಕ. ದಲಿತರ ಪರ ಹೋರಾಡಿ ಸಾಮಾಜಿಕ ನ್ಯಾಯ ದೊರಕಿಸಿಕೊಟ್ಟ ಅವರ ಹೋರಾಟದ ಮನೋಭಾವವನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕು ಎಂದರು. ಪಿ. ಜಗದೀಶ್ವರ ರೆಡ್ಡಿ ಮಾತನಾಡಿ, ಪ್ರೊ. ಕೃಷ್ಣಪ್ಪ ಅವರ ಆದರ್ಶ ಗುಣಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಸಮಿತಿಯ ಜಿಲ್ಲಾ ಸಂಚಾಲಕ ಎಸ್. ವಿಘ್ನೇಶ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಸಂಘಟನಾ ಸಂಚಾಲಕ ಜಿ. ಗೋವರ್ಧನ, ರಾಜ, ಎ.ಕೆ. ನಾಗರಾಜ್, ಜಿಲ್ಲಾ ಖಜಾಂಚಿ ಸ್ಟೋರ್ ಬಸಪ್ಪ, ಕುಬೇರ, ನಟರಾಜ, ಎಚ್. ಶಿವಣ್ಣ, ಹೊನ್ನೂರಪ್ಪ, ಮುರಳಿ, ಕಂಪ್ಲಿ ಗುಂಡಪ್ಪ, ಹನುಮಂತ, ಎಚ್. ಲಕ್ಷ್ಮಣ, ಹೊನ್ನೇಶ್, ಬಸವೇಶ್ವರ ಪ್ರೌಢಶಾಲೆ ಮುಖ್ಯಗುರು ಎಚ್. ವೆಂಕಟೇಶ್, ಎಂ. ಮಹಾದೇವ, ಗುರು, ವೈ. ತಿಮ್ಮರಾಜು ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

