ಬಳ್ಳಾರಿ

ಅಕ್ರಮ ಗಣಿ: ಸಿಬಿಐನಿಂದ ಇಬ್ಬರು ಪೇದೆಗಳ ವಿಚಾರಣೆ

Published On :

ಬಳ್ಳಾರಿ: ಡೆಕ್ಕನ್ ಮೈನಿಂಗ್ ಸಿಂಡಿಕೇಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಸಂಡೂರು ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ರಮಾಕಾಂತ್ ಅವಧಿಯಲ್ಲಿ ಅವರ ಕೈ ಕೆಳಗೆ ಕೆಲಸ ಮಾಡುತ್ತಿದ್ದ ನಾಲ್ಕು ಜನ ಪೊಲೀಸ್ ಪೇದೆಗಳನ್ನು ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ವಿಚಾರಣೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಡೆಕ್ಕನ್ ಮೈನಿಂಗ್ ಸಿಂಡಿಕೇಟ್ ಕುರಿತು ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಗಣಿಗಾರಿಕೆಗೆ ಸಹಕರಿಸಿದ್ದಾರೆ ಎಂಬ ಆರೋಪದ ಮೇಲೆ ಆಗ ಸಂಡೂರಿನ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ ಇನ್ಸ್‌ಪೆಕ್ಟರ್ ರಮಾಕಾಂತ್ ಅವರನ್ನು ಬಂಧಿಸಿ, ವಿಚಾರಣೆ ನಡೆಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ರಮಾಕಾಂತ್ ಅವಧಿಯಲ್ಲೇ ಇದ್ದ ಪೊಲೀಸ್ ಪೇದೆಗಳಾದ ಹಲ್ಲೂರಯ್ಯ, ನಾಗರಾಜ್, ಉಮಾಶಂಕರ್, ಹುಲಿಕುಂಟೆ ಎನ್ನುವವರನ್ನು ವಿಚಾರಣೆಗೆ ಹಾಜರಾಗುವಂತೆ ಸಿಬಿಐ ನೋಟಿಸ್ ನೀಡಿತ್ತು.
ಸಿಬಿಐ ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ನಾಲ್ಕು ಪೊಲೀಸ್ ಪೇದೆಗಳು ಶನಿವಾರ ಬೆಂಗಳೂರಿನ ಸಿಬಿಐ ಕಚೇರಿಗೆ ಹಾಜರಾಗಿದ್ದರು. ಸಿಬಿಐನವರು ಶನಿವಾರದಿಂದ ಸೋಮವಾರದವರೆಗೆ ವಿಚಾರಣೆಗೆ ಒಳಪಡಿಸಿದ್ದಾರೆ ಎನ್ನಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಾಹಿತಿಗಳನ್ನು ಈ ಸಂದರ್ಭದಲ್ಲಿ ಪೇದೆಗಳಿಂದ ಪಡೆದಿದ್ದಾರೆ. ರಮಾಕಾಂತ್ ಅವರ ಬಗ್ಗೆ ಮಾಹಿತಿಯನ್ನು ಸಹ ಸಿಬಿಐ ಅಧಿಕಾರಿಗಳು ಕಲೆ ಹಾಕಿದ್ದಾರೆ ಎಂದು ಹೇಳಲಾಗುತ್ತಿದೆ. ವಿಚಾರಣೆ ನಂತರ ಪೇದೆಗಳನ್ನು ಬಿಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.