ಅಪಘಾತ: ಓರ್ವ ಸಾವು
ಹೊಸಪೇಟೆ: ಟಾಟಾ ಸುಮೊ ಮತ್ತು ಬೈಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬೈಕ್ ಹಿಂಬದಿಯ ಸವಾರ ತೀವ್ರ ಗಾಯಗೊಂಡಿರುವ ಘಟನೆ ತಾಲೂಕಿನ ಮರಿಯಮ್ಮನಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ-13ರಲ್ಲಿ ಶನಿವಾರ ರಾತ್ರಿ ನಡೆದಿದೆ. ಮೃತನನ್ನು ಹಗರಿಬೊಮ್ಮನಹಳ್ಳಿ ತಾಲೂಕು ಅಂಬಳಿ ಗ್ರಾಮದ ಕೊಟ್ರೇಶ್ (38) ಎಂದು ಗುರುತಿಸಲಾಗಿದೆ. ಹಗರಿಬೊಮ್ಮನಹಳ್ಳಿ ತಾಲೂಕು ದಶಮಾಪುರ ಗ್ರಾಮದ ಫಕ್ಕೀರಪ್ಪ (30) ತೀವ್ರ ಗಾಯಗೊಂಡಿದ್ದಾನೆ. ಇವರಿಬ್ಬರು ಹೊಸಪೇಟೆಯಿಂದ ಮರಿಯಮ್ಮನಹಳ್ಳಿ ಕಡೆಗೆ ಬರುವಾಗ ಎದುರಿಗೆ ಬಂದ ಟಾಟಾ ಸುಮೊ ಬೈಕ್ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟರೆ, ಬೈಕ್ ಹಿಂಬದಿ ಸವಾರನಿಗೆ ತೀವ್ರ ಗಾಯಗಳಾಗಿವೆ. ಗಾಯಗೊಂಡವನನ್ನು ಹೊಸಪೇಟೆಯ ನೂರು ಹಾಸಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು, ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾನೆ.
ಸಂತಾಪ: ಪತ್ರಕರ್ತ ಅಂಬಳಿ ಕೊಟ್ರೇಶ್ ನಿಧನಕ್ಕೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಸಂತಾಪ ಸೂಚಿಸಿದೆ. ಮೃತ ಅಂಬಳಿ ಕೊಟ್ರೇಶ್ ತಾಲೂಕಿನ ಗಡಿಗ್ರಾಮ ಅಂಬಳಿಯವರಾಗಿದ್ದು, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿಯಾಗಿದ್ದರು. ಅವರ ನಿಧನಕ್ಕೆ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕಾಧ್ಯಕ್ಷ ಮಜ್ಜಿಗಿ ವೀರೇಶ, ಪ್ರಧಾನ ಕಾರ್ಯದರ್ಶಿ ಬಿ.ಕೆ. ವಿಶ್ವನಾಥ, ಸಂಘದ ಹುಳ್ಳಿ ಪ್ರಕಾಶ, ಬುಡ್ಡಿ ಬಸವರಾಜ, ಹಿ.ಮ. ಗುರುಬಸವರಾಜ, ಕಾಂಗ್ರೆಸ್ ಹಿರಿಯ ಮುಖಂಡ ಹೆಗ್ಡಾಳ ರಾಮಣ್ಣ, ಮುಟುಗನಹಳ್ಳಿ ಕೊಟ್ರೇಶ್, ಗದ್ದಿಕೇರಿ ದೊಡ್ಡಬಸಪ್ಪ, ಹೆಗ್ಡಾಳ ರವಿ, ಬಿ. ಕೃಷ್ಣ, ಕಡ್ಲಬಾಳು ಅಂಬರೀಷ್, ಕೆಚ್ಚಿನಬಂಡಿ ದುರುಗಪ್ಪ, ವಕೀಲ ಸಿ. ಬಸವರಾಜ, ಪಿ. ಛತ್ರಪ್ಪ ಸಂತಾಪ ವ್ಯಕ್ತಪಡಿಸಿದ್ದಾರೆ.
ಕಳ್ಳತನ ಪ್ರಕರಣ: ಆರೋಪಿಗಳ ಬಂಧನ
ಹೊಸಪೇಟೆ: ನಗರದ ಹೊರವಲಯದ ಸಂಕ್ಲಾಪುರದ ಮನೆಯೊಂದರಲ್ಲಿ ಮಹಿಳೆಯನ್ನು ಕಟ್ಟಿ ಹಾಕಿ ಮನೆ ದರೋಡೆ ಮಾಡಿದ ಪ್ರಕರಣವನ್ನು ಗ್ರಾಮೀಣ ಪೊಲೀಸರು ಭೇದಿಸಿ ನಾಲ್ವರು ಆರೋಪಿಗಳನ್ನು ಬಂಧಿಸಿ, ರು. 1.9 ಲಕ್ಷ ಮೌಲ್ಯದ ಬಂಗಾರದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಹೊಸಪೇಟೆಯ ಮಣಿಕಂಠ (20), ಕೆ. ಮಂಜುನಾಥ(20), ವಿ. ಕುಮಾರ್ (19) ಮರಿಯಮ್ಮನಹಳ್ಳಿಯ ಸತೀಶ (21) ಎಂದು ಗುರುತಿಸಲಾಗಿದೆ. ಭಗತ್ಸಿಂಗ್ ನಗರದ ಲಕ್ಷ್ಮಣ, ಈಶ್ವರ ನಗರದ ದುರ್ಗೇಶಿ ಪರಾರಿಯಾಗಿದ್ದು, ಅವರ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಫೆಬ್ರವರಿ 22ರಂದು ಈ ಕಳ್ಳತನ ಪ್ರಕರಣ ನಡೆದಿತ್ತು. ಪ್ರಕರಣ ಶೋಧನೆ ನಡೆಸುತ್ತಿದ್ದ ಗ್ರಾಮೀಣ ಪೊಲೀಸರಿಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಭಾನುವಾರ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಡಿವೈಎಸ್ಪಿ ವಿ.ಬಿ. ಮಡಿವಾಳ, ಗ್ರಾಮೀಣ ಠಾಣಾ ಸಿಪಿಐ ವಿ. ರಘುಕುಮಾರ್ ಮಾರ್ಗದರ್ಶನದಲ್ಲಿ ಪಿಎಸ್ಐ ಜಿ. ಶಾಂತಪ್ಪ, ಎಎಸ್ಐ ವಿ.ಡಿ. ಜೋಷಿ, ಸಿಬ್ಬಂದಿ ಕೋದಂಡಪಾಣಿ, ಕೋರಿ ಕೃಷ್ಣ, ಸುರೇಶ, ಗಂಗಾಧರ, ಬಿ. ಫಣಿರಾಜ್ ಮತ್ತಿತರರು ಕಾರ್ಯಾಚರಣೆಯಲ್ಲಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

