ಹೂವಿನಹಡಗಲಿ: ವಿಶ್ವ ಪರಿಸರ ದಿನಾಚರಣೆ
ಹೂವಿನಹಡಗಲಿ: ಇಲ್ಲಿನ ಜಿಬಿಆರ್ ಕಾಲೇಜು ಆವರಣದಲ್ಲಿ ತಾಲೂಕು ಗೃಹರಕ್ಷಕ ದಳದಿಂದ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಗೃಹರಕ್ಷಕ ಘಟಕಾಧಿಕಾರಿ ಪಿ. ಶಂಕರರಾವ್, ಗಿಡ ಮರಗಳನ್ನು ಬೆಳೆಸುವ ಮೂಲಕ ಉತ್ತಮ ಪರಿಸರವನ್ನು ನಿರ್ಮಾಣ ಮಾಡಬೇಕಿದೆ. ಇಂದು ಜಾಗತಿಕ ತಾಪಮಾನ ಹೆಚ್ಚಳವಾಗುತ್ತಿರುವುದರಿಂದ ಸಕಲ ಜೀವರಾಶಿಗೂ ಕಂಟಕವಾಗುತ್ತಿದೆ. ಇದನ್ನು ತಪ್ಪಿಸಲು ಪ್ರತಿಯೊಬ್ಬರು ಸಸಿಗಳನ್ನು ನೆಟ್ಟು ಪ್ರೋತ್ಸಾಹಿಸಬೇಕೆಂದು ಕರೆ ನೀಡಿದರು.ಕೈಗಾರಿಕೆಗಳು ಸೂಸುವ ಕಲುಷಿತ ಹೊಗೆ ವಾತವರಣದಲ್ಲಿ ಸೇರಿ ಉತ್ತಮ ಪರಿಸರವನ್ನು ಹಾಳು ಮಾಡುತ್ತಿವೆ. ಜತೆಗೆ ಜನಮಾಲಿನ್ಯ, ವಾಯು ಮಾಲಿನ್ಯಯನ್ನು ಸಂಪೂರ್ಣ ತಡೆಗಟ್ಟಲು ಎಲ್ಲರ ಪ್ರಯತ್ನ ಅಗತ್ಯವಿದೆ. ಆದರಿಂದ ರೈತರಿಗೂ ಗಿಡ, ಮರಗಳ ಮಹತ್ವ ಮತ್ತು ಅದರ ಉಪಯೋಗ ಕುರಿತು ಜಾಗೃತಿ ಮೂಡಿಸಬೇಕಿದೆ ಎಂದರು.ಈ ಸಂದರ್ಭದಲ್ಲಿ ಕಾಲೇಜು ಪ್ರಾಚಾರ್ಯ ಡಾ.ಎ.ಎಂ. ರಾಜಶೇಖರಯ್ಯ, ಪದವಿ ಕಾಲೇಜು ಪ್ರಾಚಾರ್ಯ ಡಾ.ಆರ್. ಮರೇಗೌಡ, ಡಾ. ಅಲಂಬಾಷ, ಜಿ.ಎಂ. ರಾಜಪೀರ್ (ಪಿಎಲ್ಸಿ), ಜಿ.ಎಂ. ಚಂದ್ರಶೇಖರಯ್ಯ, ಎಸ್. ಸಿದ್ದಲಿಂಗಪ್ಪ, ನಾಗರಾಜ ಮಲ್ಕಿಒಡೆಯರ್ ಸೇರಿದಂತೆ ಇತರರು ಉಪಸ್ಥಿತರಿದ್ದರು. ಇದಕ್ಕೂ ಮುನ್ನ ಕಾಲೇಜು ಆವರಣದಲ್ಲಿ ಸಂಪೂರ್ಣ ಸ್ವಚ್ಛತೆ ಕಾರ್ಯಕ್ರಮ ಮಾಡಿ ನಂತರ ಸುಮಾರು 31ಕ್ಕೂ ಹೆಚ್ಚು ಸಸಿಗಳನ್ನು ಕಾಲೇಜು ಆವರಣದಲ್ಲಿ ನೆಡಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

