ಬಳ್ಳಾರಿ

ಎಂ.ಪಿ.ಪಿ. ಮಾದರಿಯಲ್ಲೇ ಹಂಪಿ ಉತ್ಸವ: ಪಿಟಿಪಿ

Published On :

ಬಳ್ಳಾರಿ: ಎಂ.ಪಿ. ಪ್ರಕಾಶ್ ಆರಂಭಿಸಿದ ಮಾದರಿಯಲ್ಲೇ ಹಂಪಿ ಉತ್ಸವ ಆಚರಿಸಲಾಗುತ್ತದೆ ಎಂದು ಕಾರ್ಮಿಕ, ಜಿಲ್ಲಾ ಉಸ್ತುವಾರಿ ಸಚಿವ ಪಿ.ಟಿ. ಪರಮೇಶ್ವರ ನಾಯಕ ತಿಳಿಸಿದ್ದಾರೆ. ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಉತ್ತಮ ಮಳೆಯಾದರೆ ಹಂಪಿ ಉತ್ಸವವನ್ನು ಸಂಭ್ರಮದಿಂದ ಆಚರಿಸೋಣ. ಚುನಾವಣೆ, ಬರದ ಹಿನ್ನೆಲೆಯಲ್ಲಿ ಹಂಪಿ ಉತ್ಸವ ಆಚರಣೆ ಸಾಧ್ಯವಾಗಿರಲಿಲ್ಲ. ಈ ಬಾರಿ ಆಚರಿಸೋಣ ಎಂದು ತಿಳಿಸಿದರು.  ಸರೋಜಿನಿ ಮಹಿಷಿ ವರದಿಯನ್ವಯ ವಿವಿಧ ಕೈಗಾರಿಕೆಗಳಲ್ಲಿ ಕನ್ನಡಿಗರಿಗೆ ಎಷ್ಟು ಜನರಿಗೆ ಉದ್ಯೋಗ ನೀಡಲಾಗಿದೆ ಎಂಬುದನ್ನು ಪರಿಶೀಲನೆ ನಡೆಸಿ, ವರದಿ ಅನ್ವಯ ನೇಮಕಾತಿ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ. ಲಾರಿ ಕ್ಲೀನರ್‌ಗಳಾಗಿ ಮಕ್ಕಳು ಎಲ್ಲಿಯೂ ದುಡಿಯುತ್ತಿಲ್ಲ. ಯಾವುದಕ್ಕೂ ಈ ಬಗ್ಗೆ ಗಮನಹರಿಸುತ್ತೇನೆ ಎಂದು ತಿಳಿಸಿದರು. ವಿವಿಧ ಉದ್ಯಮಗಳಲ್ಲಿ ರಾಜ್ಯಾದ್ಯಂತ ಇದ್ದ 39 ಲಕ್ಷ ಬಾಲ ಕಾರ್ಮಿಕರ ಸಂಖ್ಯೆ 19 ಲಕ್ಷಕ್ಕೆ ಇಳಿದಿದೆ. ಈಗಲೂ ಬಾಲ ಕಾರ್ಮಿಕರನ್ನು ಪತ್ತೆ ಹಚ್ಚುವ ಕಾರ್ಯ ನಡೆದಿದೆ ಎಂದು ತಿಳಿಸಿದರು. ಎಲ್ಲ ಬಾಲ ಕಾರ್ಮಿಕರಿಗೆ ಅಗತ್ಯ ಶಿಕ್ಷಣ ನೀಡಲಾಗುತ್ತಿದೆ. ಬಾಲ ಕಾರ್ಮಿಕರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಪ್ರಯತ್ನ ಮಾಡಲಾಗುತ್ತದೆ ಎಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.