ಬಳ್ಳಾರಿ

ಬಸ್‌ಪಾಸ್ ವಿತರಿಸಲು ಆಗ್ರಹ

Published On :

ಬಳ್ಳಾರಿ: ಪಿಯು ತರಗತಿಗಳು ಈಗಾಗಲೇ ಪ್ರಾರಂಭವಾಗಿದ್ದು, ಬಡ ವಿದ್ಯಾರ್ಥಿಗಳು ಅದರಲ್ಲೂ ದೂರದ ಹಳ್ಳಿಗಳಿಂದ ಬರುವ ವಿದ್ಯಾರ್ಥಿಗಳಿಗೆ ಬಸ್‌ಪಾಸ್ ವಿತರಣೆ ಮಾಡದಿರುವುದು ತೊಂದರೆಯಾಗಿದೆ. ಕೂಡಲೆ ಬಸ್‌ಪಾಸ್ ವಿತರಿಸಬೇಕು ಎಂದು ಆಗ್ರಹಿಸಿ ಎಐಡಿಎಸ್‌ಓ ಜಿಲ್ಲಾ ಸಮಿತಿ ನಗರದಲ್ಲಿ ಪ್ರತಿಭಟನೆ ನಡೆಸಿತು.
ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಜಿಲ್ಲಾ ವಿಭಾಗೀಯ ನಿಯಂತ್ರಣಾಧಿಕಾರಿಗಳ ಮೂಲಕ ಸಾರಿಗೆ ಸಚಿವರಿಗೆ ಮನವಿ ಪತ್ರ ಸಲ್ಲಿಸಿದರು. ಅವಶ್ಯಕವಿರುವ ಪಿಯುಸಿ ವಿದ್ಯಾರ್ಥಿಗಳಿಗೆ ಕೂಡಲೆ ಬಸ್‌ಪಾಸ್ ವಿತರಿಸಿ, ವಿದ್ಯಾರ್ಥಿಗಳಿಗೆ ಕೈಗೆಟಕುವ ದರದಲ್ಲಿ ಬಸ್‌ಪಾಸ್ ದರ ನಿಗದಿಪಡಿಸಿ ಪ್ರತಿ ವರ್ಷ ಶಾಲಾ-ಕಾಲೇಜು ಪ್ರಾರಂಭವಾದ ಮೊದಲನೇ ವಾರದಿಂದಲೇ ಬಸ್‌ಪಾಸ್ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಎಐಡಿಎಸ್‌ಓ ಮನವಿಗೆ ಸ್ಪಂದಿಸಿದ ಸಾರಿಗೆ ಅಧಿಕಾರಿ ಈ ತಿಂಗಳ 20ನೇ ತಾರೀಕಿನಂದು ಬಸ್‌ಪಾಸ್ ವಿತರಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಎಐಡಿಎಸ್‌ಓ ಪದಾಧಿಕಾರಿಗಳು ತಿಳಿಸಿದ್ದಾರೆ. ಪ್ರತಿಭಟನೆಯಲ್ಲಿ ಜಿಲ್ಲಾ ಕಾರ್ಯದರ್ಶಿ ಗೋವಿಂದ, ಸಹಕಾರ್ಯದರ್ಶಿ ಎರ್ರಿಸ್ವಾಮಿ, ರಮೇಶ್, ವಿದ್ಯಾರ್ಥಿ ಮುಖಂಡರಾದ ಅಶೋಕ್, ರಾಜಗೌಡ, ಮಲ್ಲಿಕಾರ್ಜುನ, ಲಿಂಗಮೂರ್ತಿ, ವೀರೇಂದ್ರ ಹಾಗೂ ಇತರರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.