ಬಳ್ಳಾರಿ

ಜನತೆ ಕಷ್ಟಕ್ಕೆ ಸ್ಪಂದಿಸುವೆ: ಭೀಮಾನಾಯ್ಕ

Published On :

ಹೊಸಪೇಟೆ:  ಜನರ ಕಷ್ಟ, ಸುಖ, ದುಃಖಗಳಿಗೆ ಸದಾ ಸ್ಪಂದಿಸುವ ಮೂಲಕ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಜತೆಗೆ ನನ್ನ ಹಟ್ಟೂರಾದ ಕಲ್ಲಹಳ್ಳಿ, ಕಲ್ಲಹಳ್ಳಿ ತಾಂಡ ನನ್ನ ಕ್ಷೇತ್ರಕ್ಕೆ ಒಳಪಡದಿದ್ದರೂ ಸಹ ವಿಶೇಷ ಒತ್ತು ನೀಡಿ ಅಭಿವೃದ್ಧಿ ಪಡಿಸುತ್ತೇನೆ ಎಂದು ಹಗರಿಬೊಮ್ಮನಹಳ್ಳಿ ಶಾಸಕ ಎಸ್. ಭೀಮಾನಾಯ್ಕ ಹೇಳಿದರು.
ತಾಲೂಕಿನ ಕಲ್ಲಹಳ್ಳಿ ತಾಂಡಾದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿ, ಕಲ್ಲಹಳ್ಳಿ ತಾಂಡದ ಬಡತನದ ಕುಟುಂಬದಲ್ಲಿ ಬೆಳೆದು ಶಾಸಕನಾಗುವಂತೆ ಪ್ರೇರೇಪಿಸಿದ ನನ್ನ ಹುಟ್ಟೂರಿನ ಜನರು ನನ್ನ ಮೇಲೆ ಇಟ್ಟಿರುವ ಪ್ರೀತಿ, ವಿಶ್ವಾಸಕ್ಕೆ ಸದಾ ಋಣಿಯಾಗಿದ್ದೇನೆ. ಚಿಕ್ಕಂದಿನಿಂದಲೂ ಬಡವರ ಜತೆಯಲ್ಲೇ ಬೆಳೆದವನು. ಬಡವರ ಕಷ್ಟ, ದುಃಖಗಳನ್ನು ಅರ್ಥೈಸಿಕೊಂಡಿದ್ದೇನೆ. ಬಡವರ ಅಭಿವೃದ್ದಿಗೆ ಪ್ರಾಮಾಣಿಕವಾಗಿ ಶ್ರಮಿಸುವೆ. ನನ್ನ ಎಲ್ಲ ಅಭಿವೃದ್ಧಿ, ಬೆಳವಣಿಗೆಗಳನ್ನು ಕಂಡ ನನ್ನೂರಿನ ಜನರಿಗಾಗಿ ನನ್ನ ಕೈಲಾದ ಮಟ್ಟಿಗೆ ಋಣ ತೀರಿಸಲು ಕಂಕಣಬದ್ಧವಾಗಿದ್ದೇನೆ ಎಂದರು.
ಕ್ಷೇತ್ರದ ಅಭಿವೃದ್ಧಿಗೆ ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಶ್ರಮಿಸುವೆ. ಹಗರಿಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆಯಬೇಕಿದ್ದು, ಜನರ ಬೇಡಿಕೆಗೆ ಅನುಗುಣವಾಗಿ ಮತ್ತು ಆದ್ಯತೆ ಮೇರೆಗೆ ಅಭಿವೃದ್ಧಿ  ಕೈಗೊಳ್ಳಲಾಗುತ್ತದೆ. ಕ್ಷೇತ್ರದ ಪ್ರತಿ ಗ್ರಾಮಕ್ಕೂ ಮೂಲ ಸೌಲಭ್ಯಗಳನ್ನು ಒದಗಿಸುವುದೇ ಮೊದಲ ಆದ್ಯತೆ ಎಂದರು.
ಕಲ್ಲಹಳ್ಳಿ ತಾಂಡಾದ ರಾಮಜೀ ನಾಯ್ಕ, ರಾಮಾನಾಯ್ಕ ಮಾತನಾಡಿದರು. ಸ್ಥಳೀಯ ಮುಖಂಡರಾದ ಲಕ್ಷ್ಮಣನಾಯ್ಕ, ಡಿ. ಕೃಷ್ಣಾನಾಯ್ಕ, ವಲಿನಾಯ್ಕ, ಎರ್ರಿಸ್ವಾಮಿ, ರುದ್ರಪ್ಪ, ಹನುಮಂತಪ್ಪ, ಸಣ್ಣ ರಾಮಾನಾಯ್ಕ, ಗ್ರಾಪಂ ಅಧ್ಯಕ್ಷೆ ಯಮನೂರಮ್ಮ, ಸದಸ್ಯೆ ಹನುಮಮ್ಮ, ಸದಸ್ಯ ಹನುಮಂತಪ್ಪ, ಗ್ರಾಪಂ ಕಾರ್ಯದರ್ಶಿ ಉಮೇಶ್ ಜಾಗೀರದಾರ್ ಸೇರಿದಂತೆ ಇತರರು ಭಾಗವಹಿಸಿದ್ದರು. ತಾಂಡಾದ ಮಹಿಳೆಯರು ಸಾಂಪ್ರಾದಾಯಿಕ ಲಂಬಾಣಿ ಪದಗಳನ್ನು ಹಾಡುತ್ತಾ ಶಾಸಕರನ್ನು ಮೆರವಣಿಗೆಯಲ್ಲಿ ಕರೆ ತರಲಾಯಿತು. ಲಂಬಾಣಿ ಮಹಿಳೆಯರು ನೃತ್ಯ ಮಾಡಿದ್ದು ವಿಶೇಷವಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.