ಕುಂದುಕೊರತೆ ಆಲಿಕೆ
ಬಳ್ಳಾರಿ: ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಜೂನ್ 26ರಿಂದ 29ರವರೆಗೆ ಜಿಲ್ಲೆಯ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಕುಂದುಕೊರತೆಗಳನ್ನು ಸ್ವೀಕರಿಸಲಿದ್ದಾರೆ. ಜೂನ್ 26ರಂದು ಹೊಸಪೇಟೆ, 27ರಂದು ಸಿರುಗುಪ್ಪ ಹಾಗೂ ಹೂವಿನಹಡಗಲಿ, 28ರಂದು ಸಂಡೂರು ಹಾಗೂ ಕೂಡ್ಲಿಗಿ, 29ರಂದು ಬಳ್ಳಾರಿ ಹಾಗೂ ಹಗರಿಬೊಮ್ಮನಹಳ್ಳಿ ತಾಲೂಕಿನ ಸಾರ್ವಜನಿಕ ಕುಂದುಕೊರತೆಗಳನ್ನು ಇತ್ಯರ್ಥಪಡಿಸಲಿದ್ದಾರೆ. ಆಯಾ ದಿನಾಂಕಗಳಂದು ಸಂಬಂಧಿಸಿದ ತಾಲೂಕಿನ ಪ್ರವಾಸಿ ಮಂದಿರಗಳಲ್ಲಿ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1ಗಂಟೆವರೆಗೆ ಸಾರ್ವಜನಿಕರ ಅಹವಾಲು ಸ್ವೀಕರಿಸಿ ವಿಚಾರಿಸಲಿದ್ದು, ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸಲಿದ್ದಾರೆ. ಬಳ್ಳಾರಿಯ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ಜೆ. ರಮೇಶ್ ಅವರ ನೇತೃತ್ವದಲ್ಲಿ ಸಿರುಗುಪ್ಪ, ಸಂಡೂರು, ಬಳ್ಳಾರಿ ತಾಲೂಕಿನ ಕುಂದುಕೊರತೆಗಳು ಹಾಗೂ ಹೊಸಪೇಟೆಯ ಲೋಕಾಯುಕ್ತ ಉಪಾಧೀಕ್ಷಕ ಎಂ. ಪಾಷ ಅವರ ನೇತೃತ್ವದಲ್ಲಿ ಹೊಸಪೇಟೆ, ಹೂವಿನಹಡಗಲಿ, ಹಗರಿಬೊಮ್ಮನಹಳ್ಳಿ, ಕೂಡ್ಲಿಗಿ ತಾಲೂಕಿನ ಕುಂದುಕೊರತೆಗಳನ್ನು ಸ್ವೀಕರಿಸಲಾಗುವುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

