18 ಕಾಂಗ್ರೆಸ್ಮುಖಂಡರ ವಿರುದ್ಧ ಕ್ರಮಕ್ಕೆ ದೂರು
ಹಗರಿಬೊಮ್ಮನಹಳ್ಳಿ: ಹಗರಿಬೊಮ್ಮನಹಳ್ಳಿ ಕ್ಷೇತ್ರದ ಕಾಂಗ್ರೆಸ್ನಲ್ಲೀಗ ದೂರು ಸಲ್ಲಿಕೆ ಪರ್ವ ಆರಂಭವಾಗಿದೆ. ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಪಕ್ಷಕ್ಕೆ ದ್ರೋಹ ಎಸಗಿ, ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾದವರ ಮೇಲೆ ಶಿಸ್ತು ಕ್ರಮ ತೆಗೆದುಕೊಳ್ಳುವಂತೆ ವರಿಷ್ಠರಿಗೆ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಎಲ್. ಮಾರೆಣ್ಣ ದೂರು ಸಲ್ಲಿಸಿದ್ದಾರೆ.
ಜಿಪಂ ಉಪಾಧ್ಯಕ್ಷೆ ಸಹಿತ ಜಿಪಂ, ತಾಪಂ, ಎಪಿಎಂಸಿ ಸದಸ್ಯರು, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷರು, ಉಪಾಧ್ಯಕ್ಷರು, ಕೆಪಿಸಿಸಿ ಸದಸ್ಯರು, ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ಸೇರಿದಂತೆ 18 ಮುಖಂಡರ ಮೇಲೆ ಪಕ್ಷ ವಿರೋಧಿ ಆರೋಪ ಮಾಡಿ ಮಾರೆಣ್ಣ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ, ಜಿಲ್ಲಾ ಕಾಂಗ್ರೆಸ್(ಗ್ರಾಮೀಣ) ಅಧ್ಯಕ್ಷ ಎಂ.ಪಿ. ರವೀಂದ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ ಅವರಿಗೆ ಲಿಖಿತ ದೂರು ಸಲ್ಲಿಸಿದ್ದಾರೆ.
ಕನ್ನಡಪ್ರಭಕ್ಕೆ ಲಭ್ಯ: ವರಿಷ್ಠರಿಗೆ ಸಲ್ಲಿಸಿರುವ ದೂರಿನ ಪ್ರತಿ ಸೋಮವಾರ 'ಕನ್ನಡಪ್ರಭ'ಕ್ಕೆ ಲಭ್ಯವಾಗಿದ್ದು, ಕಾಂಗ್ರೆಸ್ನವರಾಗ ಜಿಪಂ, ತಾಪಂ, ಎಪಿಎಂಸಿ, ಪಿಕಾರ್ಡ್ ಬ್ಯಾಂಕ್ಗಳಿಗೆ ಗೆದ್ದು ಬಂದಿರುವ ಮತ್ತು ಹಲವು ವರ್ಷಗಳಿಂದಲೂ ಪಕ್ಷದ ವಿವಿಧ ಪ್ರಮುಖ ಹುದ್ದೆಗಳ ಪದಾಧಿಕಾರಿಗಳಾಗಿ ಅಧಿಕಾರ ಅನುಭವಿಸಿರುವ ಮುಖಂಡರು ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧ, ಜೆಡಿಎಸ್ ಅಭ್ಯರ್ಥಿ ಪರ ಮತಯಾಚನೆ ಮಾಡಿದ್ದಾರೆ. ಆ ಮೂಲಕ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಸೋಲಿಗೆ ಕಾರಣರಾಗಿದ್ದಾರೆ.
ಪಕ್ಷಕ್ಕೆ ದ್ರೋಹ ಎಸಗುವ ಕೃತ್ಯ ಮಾಡಿ, ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾದ 18 ಜನರ ಮೇಲೆ ಶಿಸ್ತುಕ್ರಮ ತೆಗೆದುಕೊಳ್ಳಬೇಕೆಂದು ಎಲ್. ಮಾರೆಣ್ಣ ಆಗ್ರಹಿಸಿದ್ದಾರೆ.
ಯಾರ್ಯಾರ ಮೇಲೆ ಕ್ರಮಕ್ಕೆ ಆಗ್ರಹ?: ಜಿಪಂ ಉಪಾಧ್ಯಕ್ಷೆ ಮಮತಾ ಸುರೇಶ್, ಜಿಪಂ ಸದಸ್ಯ ರೋಗಾಣಿ ಹುಲುಗಪ್ಪ, ತಾಪಂ ಸದಸ್ಯರಾದ ಉಪ್ಪಾರ ಬಾಲು, ಮಂಜುಳಾ ಕೃಷ್ಣನಾಯ್ಕ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಬಿ.ಎಂ. ಗುರುವಯ್ಯ, ಉಪಾಧ್ಯಕ್ಷ ಪಟ್ಟಣಶೆಟ್ಟಿ ಸುರೇಶ್, ಎಪಿಎಂಸಿ ಸದಸ್ಯರಾದ ಹೂಗಾರ ಮಲ್ಲಣ್ಣ, ಹನಸಿ ಶಿವಕುಮಾರ, ಕೆಪಿಸಿಸಿ ಸದಸ್ಯ ಪಿ.ಎಚ್. ದೊಡ್ಡರಾಮಣ್ಣ, ಮರಿಯಮ್ಮನಹಳ್ಳಿ ಕೃಷ್ಣನಾಯ್ಕ, ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಉಪಾಧ್ಯಕ್ಷ ಸಿನಿಮಾ ಮಂಜಣ್ಣ, ಜಿಲ್ಲಾ ಕಾಂಗ್ರೆಸ್ ಮಾಧ್ಯಮ ಘಟಕದ ಅಧ್ಯಕ್ಷ ಅಕ್ಕಿ ತೋಟೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸೋಗಿ ಕೊಟ್ರೇಶ್, ಹುಡೇದ ಗುರುಬಸವರಾಜ, ಎಸ್ಟಿ ಘಟಕಾಧ್ಯಕ್ಷ ಚಿಂತ್ರಪಳ್ಳಿ ದೇವೇಂದ್ರಪ್ಪ, ಕೆಪಿಸಿಸಿ ಮಾಜಿ ಸದಸ್ಯ ಬೋಸಪ್ಪ, ಕೊಟ್ಟೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪರಮೇಶ್ವರಯ್ಯ, ಉಪಾಧ್ಯಕ್ಷ ಎಣ್ಣಿ ಇಬ್ರಾಹಿಂ ಇವರ ಮೇಲೆ ಶಿಸ್ತು ಕ್ರಮ ಜರುಗಿಸುವಂತೆ ದೂರು ಸಲ್ಲಿಸಿದ್ದಾರೆ.
ಈ ಪೈಕಿ ಕೆಪಿಸಿಸಿ ಸದಸ್ಯ ಪಿ.ಎಚ್. ದೊಡ್ಡರಾಮಣ್ಣ ಕೆಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಕೊಟ್ಟೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪರಮೇಶ್ವರಯ್ಯ ಸಹ ಕೆಜೆಪಿ ಸೇರ್ಪಡೆಯಾಗಿದ್ದರು. ಇವರೆಲ್ಲರೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ಸಲ್ಲಿಸದೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಪರ ಬಹಿರಂಗವಾಗಿ ಪ್ರಚಾರ ಮಾಡಿದ್ದಾರೆ. ಹೀಗಾಗಿ ಇವರ ಮೇಲೆ ಕ್ರಮವಹಿಸುವಂತೆ ಮಾರೆಣ್ಣ ದೂರಿನಲ್ಲಿ ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

