ವಿದ್ಯಾರ್ಥಿ ನಿಲಯಕ್ಕೆ ಅರ್ಜಿ ಆಹ್ವಾನ
ಬಳ್ಳಾರಿ: ಬಳ್ಳಾರಿ ತಾಲೂಕಿನ ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕ-ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿಯಿರುವ ಸ್ಥಾನಗಳಿಗೆ ಅರ್ಜಿ ಕರೆಯಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿಸ್ತರಣಾಧಿಕಾರಿ ತಿಳಿಸಿದ್ದಾರೆ. ನಗರದ ರೇಡಿಯೋಪಾರ್ಕ್, ತಿಲಕ್ನಗರ(ಕೌಲ್ಬಜಾರ್), ಗೌತಮ್ ನಗರ (ಎಸ್.ಎನ್. ಪೇಟೆ) ಹಾಗೂ ತಿಲಕ್ ನಗರದಲ್ಲಿರುವ ಸರ್ಕಾರಿ ಬಿಸಿಎಂ ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಸಾಮಾನ್ಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವೃತ್ತಿಪರ ವಿದ್ಯಾರ್ಥಿಗಳಿಗಾಗಿ ಗೌತಮ್ ನಗರ (ಕಪ್ಪಗಲ್ ರಸ್ತೆ), ಗಾಂಧಿನಗರದಲ್ಲಿರುವ ಸರ್ಕಾರಿ ಬಿಸಿಎಂ ಮೆಟ್ರಿಕ್ ನಂತರ ಬಾಲಕರ ವೃತ್ತಿಪರ ವಿದ್ಯಾರ್ಥಿ ನಿಲಯಗಳಲ್ಲಿ, ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗಾಗಿ ಕೌಲ್ ಬಜಾರ್ನಲ್ಲಿರುವ ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿನಿಲಯ, ಅಲ್ಪಸಂಖ್ಯಾತ ವರ್ಗದ ವೃತ್ತಿಪರ ಹಾಗೂ ಸಾಮಾನ್ಯ ವಿದ್ಯಾರ್ಥಿನಿಯರಿಗಾಗಿ ಕುವೆಂಪು ನಗರದಲ್ಲಿರುವ ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ಪ್ರವೇಶ ಕಲ್ಪಿಸಲಾಗಿದೆ. ಪಾರ್ವತಿನಗರ ಹಾಗೂ ಬೆಳಗಲ್ ಕ್ರಾಸ್ನಲ್ಲಿರುವ ಸರ್ಕಾರಿ ಬಿಸಿಎಂ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ವೃತ್ತಿಪರ ಹಾಗೂ ಸಾಮಾನ್ಯ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಸರ್ಕಾರ ಅಥವಾ ಸರ್ಕಾರದಿಂದ ಅಂಗೀಕೃತ ಶೈಕ್ಷಣಿಕ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರಬೇಕು. ಹಿಂದುಳಿದ ಪ್ರವರ್ಗ 2ಎ, 2ಬಿ, 3ಎ, 3ಬಿ ವಿದ್ಯಾರ್ಥಿಗಳ ವಾರ್ಷಿಕ ವರಮಾನ ರು. 44500 ಗಳ ಒಳಗಿರಬೇಕು. ಪ್ರವರ್ಗ 1, ಪರಿಶಿಷ್ಟ ಜಾತಿ-ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ವಾರ್ಷಿಕ ವರಮಾನ 2 ಲಕ್ಷ ರು.ಗಳ ಒಳಗಿರಬೇಕು. ವಿದ್ಯಾರ್ಥಿಗಳು ಶೈಕ್ಷಣಿಕ ಸಂಸ್ಥೆಯಿಂದ 5 ಕಿ.ಮೀ. ದೂರದಲ್ಲಿ ವಾಸಿಸುತ್ತಿರಬೇಕು. ಪಿಯುಸಿ ಪ್ರಥಮ ಹಾಗೂ ದ್ವಿತೀಯ, ಬಿಎ, ಬಿಕಾಂ, ಎಂಎ, ಎಂಕಾಂ, ಐಟಿಐ, ವೃತ್ತಿಪರ ತರಗತಿಯನ್ನು ಓದುತ್ತಿರುವ ವಿದ್ಯಾರ್ಥಿಗಳಿಗೆ ಸೇರಲು ಅವಕಾಶವಿದ್ದು, ಅರ್ಹ ವಿದ್ಯಾರ್ಥಿಗಳು ಭರ್ತಿ ಮಾಡಿದ ತಮ್ಮ ಅರ್ಜಿಯೊಂದಿಗೆ ಕಳೆದ ಸಾಲಿನ ದೃಢೀಕೃತ ಅಂಕಪಟ್ಟಿ, ಇತ್ತೀಚೆಗೆ ತಹಸೀಲ್ದಾರ್ರಿಂದ ಪಡೆದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಇತ್ತೀಚಿನ ಎರಡು ಸ್ಟಾಂಪ್ ಸೈಜ್ ಫೋಟೋ, ಗ್ರಾಮ ಪಂಚಾಯತಿ- ತಹಸೀಲ್ದಾರ್ರಿಂದ ಪಡೆದ ನಿಲಯಕ್ಕೆ ಸ್ವ-ವಿಳಾಸದಿಂದ ಇರುವ ಅಂತರ ದೃಢೀಕರಣ ಪತ್ರ ಮತ್ತಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಜು. 10ರೊಳಗಾಗಿ ಸಂಬಂಧಿಸಿದ ವಿದ್ಯಾರ್ಥಿ ನಿಲಯಗಳ ಮೇಲ್ವಿಚಾರಕರು-ನಿಲಯ ಪಾಲಕರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲೂಕು ಪಂಚಾಯಿತಿ, ಬಳ್ಳಾರಿ ಅಥವಾ ವಿಸ್ತರಣಾಧಿಕಾರಿಗಳು, ಹಿಂದುಳಿದ ವರ್ಗಗಳ ಹಾಗೂ ಅಲ್ಪ ಸಂಖ್ಯಾತರ ಇಲಾಖೆ ತಾಲೂಕು ಪಂಚಾಯಿತಿ ಬಳ್ಳಾರಿ ಇವರನ್ನು ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

