ಬಳ್ಳಾರಿ

ಜನರ ಹಿತ ಕಾಯಬೇಕು

Published On :

ಬಳ್ಳಾರಿ: ನಗರಾಭಿವೃದ್ಧಿ ಪ್ರಾಧಿಕಾರಗಳು ನಗರವಾಸಿಗಳ ಹಿತ ಕಾಯುವ ಕೆಲಸ ಮಾಡಬೇಕೆ ಹೊರತು ರಿಯಲ್ ಎಸ್ಟೇಟ್ ಉದ್ಯಮಿಗಳ ಅನುಕೂಲಕ್ಕೆ ತಕ್ಕಂತೆ ಕೆಲಸ ಮಾಡಬಾರದು ಎಂದು ನಗರಾಭಿವೃದ್ಧಿ ಸಚಿವ ವಿನಯ್ಕುಮಾರ್ ಸೊರಕೆ ಹೇಳಿದರು.
ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನ ಸಭೆ ಅನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರ ಹಿತ ಮರೆತು ರಿಯಲ್ ಎಸ್ಟೇಟ್ ಉದ್ಯಮಿಗಳ ಪರ ಕೆಲಸ ಮಾಡುವ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ. ಈಗಾಗಲೇ ಇಲಾಖೆಯಲ್ಲಿ ಕೆಲಸ ನಿರ್ವಹಿಸಿ ತಪ್ಪು ಮಾಡಿದವರು ಜೈಲು ಪಾಲಾಗಿದ್ದಾರೆ ಎಂದು ಹೇಳುವ ಮೂಲಕ ಅಧಿಕಾರಿಗಳಿಗೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
ಸ್ಥಳೀಯ ಸಂಸ್ಥೆಗಳನ್ನು ಮೇಲ್ದರ್ಜೆಗೇರಿಸುವುದರಿಂದ ಮಾತ್ರ ಅಭಿವೃದ್ಧಿಯಾಗದು. ಪಾಲಿಕೆ ಸ್ವರೂಪ ಪಡೆದ ಬಳಿಕ ಬೇಕಾದ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕು. ಜನರ ಆಶೋತ್ತರಗಳಿಗೆ ಸ್ಪಂದಿಸಿ ಕೆಲಸ ಮಾಡಬೇಕು. ನಗರದ ಅಭಿವೃದ್ಧಿ ನೆಲೆಯಲ್ಲಿ ಪ್ರಾಧಿಕಾರ ಅಧಿಕಾರಿಗಳು ಸಹಭಾಗಿತ್ವದಲ್ಲಿ ಕೆಲಸ ಮಾಡಬೇಕು. ಒಟ್ಟು ಉದ್ದೇಶ ನಗರದ ಬಡ ಹಾಗೂ ಮಧ್ಯಮ ವರ್ಗದ ಹಿತ ಕಾಯುವುದೆ ಹೊರತು, ಶ್ರೀಮಂತರ ಆಶೋತ್ತರಿಗಳಿಗೆ ಸ್ಪಂದಿಸುವುದಲ್ಲ ಎಂದರು.
ನಾವು ಎಚ್ಚರಿಕೆಯಿಂದ ಕೆಲಸ ಮಾಡುತ್ತೇವೆ, ಈ ಹಿಂದಿನವರು ಹೇಳಿದಂತೆ ಬರೀ ಭರವಸೆಗಳನ್ನು ಹೇಳಿ ಹೋಗಲು ಬಂದಿಲ್ಲ. ಮೂರು ತಿಂಗಳಿಗೊಮ್ಮೆ ಅಧಿಕಾರಿಗಳ ಸಭೆ ನಡೆಸಿ, ಹಿಂದಿನ ಸಭೆಯ ನಿರ್ಧಾರಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಿಕೊಳ್ಳುತ್ತೇವೆ. ರಾಜ್ಯ ಮಟ್ಟದ ಅಧಿಕಾರಿಗಳನ್ನು ಸಹ ಜಿಲ್ಲಾ ಮಟ್ಟದ ಸಭೆಗೆ ಕರೆ ತರುತ್ತೇವೆ ಎಂದು ತಿಳಿಸಿದರು. ಶಾಸಕ ಅನಿಲ್ ಲಾಡ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.