ಬಳ್ಳಾರಿ: ಬಳ್ಳಾರಿ ಮಹಾನಗರ ಪಾಲಿಕೆಯ 4ನೇ ವಾರ್ಡಿಗೆ ಸ್ಪರ್ಧಿಸಿರುವ ಬಿಎಸ್ಸಾರ್ ಪಕ್ಷದ ಅಭ್ಯರ್ಥಿ ಆರ್. ಮಹ್ಮದ್ ಜಮೀದ್ ಸೇರಿ ಮೂವರನ್ನು ಬಂಧಿಸಲಾಗಿದೆ ಎಂದು ಬಳ್ಳಾರಿ ಎಪಿಎಂಸಿ ಠಾಣಾ ಪೊಲೀಸರು ತಿಳಿಸಿದ್ದಾರೆ.
ಶುಕ್ರವಾರ ರಾತ್ರಿ ಜಮೀದ್ನೊಂದಿಗೆ ಟೈಲರ್ ಶೇಖ್ ಹಾಗೂ ಟೈಲರ್ ಬಾಬು ಎಂಬುವವರನ್ನು ಶಾಂತಿ, ಸುವ್ಯವಸ್ಥೆ ಹಿನ್ನೆಲೆಯಲ್ಲಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಮೂವರನ್ನು ಮಾ. 8ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ತಿಳಿದುಬಂದಿದೆ.