ಬಳ್ಳಾರಿ

ಪಾಲಿಕೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ

Published On :

ಬಳ್ಳಾರಿ: ಮಹಾನಗರ ಪಾಲಿಕೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರುವುದು ಖಚಿತ ಎಂದು ಮಾಜಿ ಶಾಸಕ, ಜೆಡಿಎಸ್ ಜಿಲ್ಲಾಧ್ಯಕ್ಷ ನಾರಾ ಸೂರ್ಯನಾರಾಯಣ ರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದರು.
ಬಳ್ಳಾರಿ ಮಹಾನಗರ ಪಾಲಿಕೆಯ 9ನೇ ವಾರ್ಡ್‌ನ ಜೆಡಿಎಸ್ ಅಭ್ಯರ್ಥಿ ಮುನ್ನ ಹಾಗೂ 3ನೇ ವಾರ್ಡ್ ಅಭ್ಯರ್ಥಿ ಕೆ. ಶಿವಕುಮಾರ್ ಹಾಗೂ  ಮಿಲ್ಲರ್‌ಪೇಟೆಯ ಅಭ್ಯರ್ಥಿ ಪರ ಮತ ಯಾಚನೆ ಮಾಡಿ ಮಾತನಾಡಿ, ಪಾಲಿಕೆಯಲ್ಲಿ ಆಳಿ ಹೋಗಿರುವ ಪಕ್ಷಗಳು ನಗರವನ್ನು ಅಭಿವೃದ್ಧಿಪಡಿಸುವಲ್ಲಿ ವಿಫಲವಾಗಿವೆ. ಜನತೆಗೆ ಕುಡಿಯುವ ನೀರು, ಮಹಿಳೆಯರಿಗೆ ಶೌಚಾಲಯ, ರಸ್ತೆಗಳು ಹಾಗೂ ಪಡಿತರ ಚೀಟಿಗಳು ಸೇರಿದಂತೆ ಹಲವಾರು ಸಮಸ್ಯೆಗಳನ್ನು ಜನರು ಎದುರಿಸುತ್ತಿದ್ದಾರೆ. ಇದರಿಂದಾಗಿ ಜನರು ಬೇಸತ್ತು ಹೋಗಿದ್ದು, ಈ ಬಾರಿ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಬಗ್ಗೆ ಒಲವು ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು.
ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆಯ ಪ್ರಚಾರದಲ್ಲಿ 29,31 ಮತ್ತು 32ನೇ ವಾರ್ಡ್‌ನಲ್ಲಿ ಮತಯಾಚನೆ ಮಾಡಿ, ನಗರವನ್ನು ಅಭಿವೃದ್ಧಿ  ಪಡಿಸಲಾಗುತ್ತದೆ ಎಂದು ಸುಳ್ಳು ಭರವಸೆಯನ್ನು ನೀಡಿದ್ದಾರೆ. ಈ ಬಾರಿ ಜನರು ಸುಳ್ಳು ಭರವಸೆಗಳಿಗೆ ಮಾರು ಹೋಗದೆ, ನಗರವನ್ನು ಅಭಿವೃದ್ಧಿ ಮಾಡಲು ಮುಂದಾಗಿರುವ ಜೆಡಿಎಸ್‌ಗೆ ಬೆಂಬಲ ನೀಡುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡರಾದ ಮುಂಡ್ರಿಗಿ ನಾಗರಾಜ, ನೆಕ್ಕಂಟಿ ಶ್ರೀನಿವಾಸ್, ವದ್ದಟಿ ಸತ್ಯಬಾಬು, ಜಗದೀಶ್ವರ ರೆಡ್ಡಿ, ಮಲಾರೆಡ್ಡಿ ಮತ್ತಿತರೆ ಮುಖಂಡರು ಭಾಗವಹಿಸಿದರು.
ಟಚ್ ಫಾರ್ ಲೈಫ್ ಫೌಂಡೇಷನ್ ಸಂಸ್ಥಾಪಕ ನಾರಾ ಭರತರೆಡ್ಡಿ ನಗರದ 16ನೇ ವಾರ್ಡಿನ ಶ್ರೀರಾಂಪುರ ಕಾಲೋನಿಯಲ್ಲಿ 16ನೇ ವಾರ್ಡ್ ಚಂದ್ರನಾಗರಾಜ್ ಹಾಗೂ 14ನೇ ವಾರ್ಡಿನ ಉಮಾದೇವಿ ಅವರ ಪರ ಪ್ರಚಾರ ಮಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.