ಸಂಭ್ರಮದ ಶ್ರೀ ಗವಿಸಿದ್ದೇಶ್ವರ ರಥೋತ್ಸವ
ಹೂವಿನಹಡಗಲಿ: ಪಟ್ಟಣದ ಶ್ರೀ ಗವಿಸಿದ್ದೇಶ್ವರ ಸ್ವಾಮಿಯ ರಥೋತ್ಸವವು ಸಡಗರ, ಸಂಭ್ರಮದಿಂದ ಜರುಗಿತು. ನೂತನವಾಗಿ ನಿರ್ಮಾಣಗೊಂಡಿದ್ದ ಗಡ್ಡಿತೇರು ಪಟ್ಟಣದ ಟಿಡಿವಿ ಶಾಲೆ ಮುಂಭಾಗದಿಂದ ಪಾದಗಟ್ಟೆಯ ವರೆಗೆ ಸಂಭ್ರಮದಿಂದ ಸಾಗಿತು. ಕೊಪ್ಪಳ ಸಂಸ್ಥಾನ ಮಠದ ಶ್ರೀ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ ಮತ್ತು ಮುಂಡರಗಿಯ ಡಾ. ಅನ್ನದಾನೀಶ್ವರ ಸ್ವಾಮೀಜಿಗಳು ನೂತನ ಗಡ್ಡಿತೇರಿಗೆ ಚಾಲನೆ ನೀಡಿ, ಶುಭ ಹಾರೈಸಿದರು. ವಿಧಿ-ವಿಧಾನಗಳಂತೆ ಶ್ರೀ ಸ್ವಾಮೀಗೆ ಮತ್ತು ರಥಕ್ಕೆ ಪೂಜೆ ಸಲ್ಲಿಸಿದ ನಂತರ ಗವಿಸಿದ್ಧೇಶ್ವರ ಸ್ವಾಮಿಯ ಜಯಘೋಷದೊಂದಿಗೆ ಭಕ್ತರು ರಥ ಎಳೆದರು. ನೂತನವಾಗಿ ನಿರ್ಮಾಣಗೊಂಡಿರುವ ಗಡ್ಡಿ ತೇರಿನ ವೈಭವ ನೋಡಲು ಪಟ್ಟಣದ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ನಂತರ ಶ್ರೀಮಠದಲ್ಲಿ ಗವಿಸಿದ್ಧೇಶ್ವರ ಸ್ವಾಮಿಯ ತೊಟ್ಟಿಲು ಪೂಜಾ ಕಾರ್ಯಕ್ರಮ ಜರುಗಿತು. 18ನೇ ವರ್ಷದ ಜಾತ್ರೋತ್ಸವ ಅಂಗವಾಗಿ ಜಂಗಮ ವಟುಗಳಿಗೆ ಶಿವದೀಕ್ಷೆ ಅಯ್ಯಾಚಾರ ನಂತರ ಜರುಗಿದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ 5 ಜೋಡಿಗಳು ದಾಂಪತ್ಯಕ್ಕೆ ಕಾಲಿರಿಸಿದವು. ಭಕ್ತಿ ಹಿತಚಿಂತನಾ ಕಾರ್ಯಕ್ರಮದಲ್ಲಿ ಹೊನ್ನಾಳಿಯ ಶ್ರೀ ಒಡೆಯರ್ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಹೆಬ್ಬಾಳದ ಶ್ರೀ ನಾಗಭೂಷಣ ಶಿವಾಚಾರ್ಯ ಸ್ವಾಮೀಜಿ, ಲಿಂಗನಾಯ್ಕನಹಳ್ಳಿಯ ಶ್ರೀ ಚನ್ನವೀರ ಶಿವಾಚಾರ್ಯ ಸ್ವಾಮೀಜಿ, ನೀಲಗುಂದದ ಶ್ರೀ ಚನ್ನಬಸವ ಶಿವಯೋಗಿಗಳು, ಮಂಗಳೂರಿನ ಶ್ರೀ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ಮುದೇನೂರಿನ ಶ್ರೀ ಅಭಿನವ ಚಂದ್ರಶೇಖರ ಸ್ವಾಮಿಗಳು ಪಾಲ್ಗೊಂಡಿದ್ದರು. ಮಾಜಿ ಶಾಸಕ ಪಿ.ಟಿ. ಪರಮೇಶ್ವರ ನಾಯ್ಕ, ಇತರ ಗಣ್ಯರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

