ಅಧಿಕಾರ ಕೈ ಸೇರಲಿದೆ: ಅಲ್ಲಂ ವಿಶ್ವಾಸ
ಕನ್ನಡಪ್ರಭ ವಾರ್ತೆ, ಕಂಪ್ಲಿ, ಮಾ. 5
ಆಡಳಿತ ಪಕ್ಷದಿಂದ ಜನರು ರೋಸಿ ಹೋಗಿದ್ದು, ಈ ಬಾರಿ ಸ್ಥಳೀಯ ಸಂಸ್ಥೆಗಳಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ, ಮಾಜಿ ಸಚಿವ ಅಲ್ಲಂ ವೀರಭದ್ರಪ್ಪ ಭವಿಷ್ಯ ನುಡಿದಿದ್ದಾರೆ.
ಪಟ್ಟಣದ ಪುರಸಭೆ ಚುನಾವಣೆಗೆ ಸ್ಪರ್ಧಿಸಿರುವ 8ನೇ ವಾರ್ಡ್ನ ರಾಜೇಶ್ ಮತ್ತು 9ನೇ ವಾರ್ಡ್ ಎಸ್. ವೆಂಕಟೇಶ ಪರವಾಗಿ ಸೋಮವಾರ ಸಂಜೆ ಮತದಾರರ ಮನೆಗಳಿಗೆ ತೆರಳಿ, ಮತಯಾಚನೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಮುಂದಿನ ಎಲ್ಲ ಚುನಾವಣೆಗಳಿಗೆ ದಿಕ್ಸೂಚಿಯಾಗಲಿವೆ. ಈ ಬಾರಿ ಮತದಾರರಲ್ಲಿ ಕಾಂಗ್ರೆಸ್ ಅಲೆ ಬೀಸಿದೆ ಎಂದರು.
ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆ ಪ್ರಚಾರಕ್ಕಾಗಿ ಪ್ರತಿ ವಾರ್ಡ್ಗಳಲ್ಲಿ ಮತ ಯಾಚನೆ ಮಾಡಿದ್ದು, ಕಾಂಗ್ರೆಸ್ಗೆ ವ್ಯಾಪಕವಾದ ಬೆಂಬಲ ವ್ಯಕ್ತವಾಗಿದೆ. ಬಳ್ಳಾರಿ ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತು ಬಿಎಸ್ಆರ್ ಕಾಂಗ್ರೆಸ್ ನಡುವೆ ಪೈಪೋಟಿಯಿದೆ. ಕೆಜೆಪಿ, ಬಿಜೆಪಿ ಇಲ್ಲವಾಗಿದ್ದು, ಜೆಡಿಎಸ್ ಸ್ವಲ್ಪ ಮಟ್ಟಿಗೆ ಪೈಪೋಟಿ ನೀಡಲಿದೆ. ಸ್ಥಳೀಯ ಸಂಸ್ಥೆ ಚುನಾವಣೆಗಳ ಪ್ರಣಾಳಿಕೆ ತಯಾರಿಸಿಲ್ಲ. ಪುರಸಭೆ ವ್ಯಾಪ್ತಿಗೆ ಬರುವ ರಸ್ತೆ, ಚರಂಡಿ, ಕುಡಿಯುವ ನೀರು, ವಿದ್ಯುತ್ಗೆ ನಮ್ಮ ಅಭ್ಯರ್ಥಿಗಳು ಆದ್ಯತೆ ನೀಡಿ ಮಾಡುತ್ತಾರೆ ಎಂದು ತಿಳಿಸಿದರು.
ಮಾಜಿ ಸಂಸದ ಕೆ.ಸಿ. ಕೊಂಡಯ್ಯ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿಗಳು ಹಣವಂತರಲ್ಲ. ಬಡವರಾಗಿದ್ದು, ಜನರ ಸಹಕಾರದಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಈ ಬಾರಿ ಹಣ ಕೆಲಸ ಮಾಡಲ್ಲ. ಬಿಜೆಪಿಗೆ ಬ್ಲಾಕ್ಮೇಲ್ ಮಾಡಿ, ಬಿಎಸ್ಆರ್ ಕಟ್ಟಿಕೊಂಡಿದ್ದಾರೆ. ಕಳೆದ 5 ವರ್ಷಗಳಿಂದ ಅಭಿವೃದ್ಧಿಯಾಗಿಲ್ಲ, ಕುರುಗೋಡು-ಕಂಪ್ಲಿ ರಸ್ತೆ, ಬಾದನಹಟ್ಟಿ ರಸ್ತೆ ಹಾಗೂ ಇತರೆ ರಸ್ತೆಗಳು ದುರಸ್ತಿಯಾಗಿಲ್ಲ. ಅವರ ಕಣ್ಣಿಗೆ ರಸ್ತೆಗಳು ಕಂಡಿಲ್ಲ, ಕಂಪ್ಲಿ ಪುರಸಭೆಯಲ್ಲಿ ಬರಿ ಬಿಲ್ ಮಾಡಿಕೊಂಡು ತಿಂದಿದ್ದಾರೆ ಎಂದು ಆರೋಪಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಕೆ.ಎಸ್.ಎಲ್. ಸ್ವಾಮಿ, ಕಾಂಗ್ರೆಸ್ ಹಿರಿಯ ಮುಖಂಡ ಗೋನಾಳು ವಿರೂಪಾಕ್ಷಗೌಡ, ಗಿರಿಮಲ್ಲಪ್ಪ, ಜೆ.ಎನ್. ಗಣೇಶ, ಬಿ.ಪಿ. ಅಡ್ನೂರ್, ಕಂಪ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ. ಶ್ರೀನಿವಾಸರಾವು, ಹೊಸಪೇಟೆ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಪಿ. ಮೂಕಯ್ಯಸ್ವಾಮಿ, ಪುರಸಭೆ ಮಾಜಿ ಸದಸ್ಯ ಎಂ. ರಾಜೇಂದ್ರಕುಮಾರ್, ಪಿ.ಎಲ್.ಡಿ. ಬ್ಯಾಂಕ್ ಮಾಜಿ ಅಧ್ಯಕ್ಷ ಎಚ್. ಗಂಗಾಧರ, ಕಂಪ್ಲಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಜೆ.ಜಿ. ಬಸವರಾಜ ಸೇರಿದಂತೆ ಇತರರು ಉಪಸ್ಥಿತ ರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

