ಆತ್ಮಹತ್ಯೆ ಪರಿಹಾರವಲ್ಲ, ಸಮಸ್ಯೆ ಎದುರಿಸಿ
ಸಮಾಜದಲ್ಲಿ ಜೀವಿಸುತ್ತಿರುವ ಪ್ರತಿಯೊಬ್ಬ ವ್ಯಕ್ತಿಗೂ ತನ್ನದೇ ಗೌರವ, ಹಕ್ಕು ಮತ್ತು ಕರ್ತವ್ಯಗಳಿವೆ. ವಿದ್ಯಾರ್ಥಿನಿಯರು, ಯುವತಿಯರು ಲೈಂಗಿಕ ದೌರ್ಜನ್ಯಕ್ಕೆ ಒಳಗಾದರೆ ಕೂಡಲೇ ದೂರು ನೀಡಬೇಕು. ಇನ್ನು ಸಮಾಜದಲ್ಲಿ ಜೀವಿಸಲು ಸಾಧ್ಯವಿಲ್ಲ ಎಂದು ಆತ್ಮಹತ್ಯೆ ದಾರಿ ಹುಡುಕಬಾರದೆಂದು ಪಿಎಸ್ಐ ಆಂಜನೇಯ ಕರೆ ನೀಡಿದರು.
ಶುಕ್ರವಾರ ಇಲ್ಲಿನ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿದ ಅವರು, ಸಾಕಷ್ಟು ಸಮಸ್ಯೆಗಳು ಬಂದರೂ ಸಮರ್ಥವಾಗಿ ಎದುರಿಸುವ ಸಲುವಾಗಿ ಹಕ್ಕು ಮತ್ತು ಕರ್ತವ್ಯಗಳಿವೆ. ಜತೆಗೆ ಕಠಿಣ ಕಾನೂನುಗಳ ಬಗ್ಗೆ ಮಾಹಿತಿ ಪಡೆದು ಧೈರ್ಯದಿಂದ ಜೀವನ ಸಾಗಿಸಿ. ಮಹಿಳೆಯರ ರಕ್ಷಣೆಗಾಗಿ ಕಠಿಣ ಕಾನೂನುಗಳು ಇದ್ದರೂ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿರುವುದು ವಿಷಾದಕರ ಎಂದು ಕರೆ ನೀಡಿದರು.
ಅನಿಷ್ಟ ಪದ್ಧತಿಗಳಾದ ವರದಕ್ಷಿಣೆ, ಬಾಲ್ಯ ವಿವಾಹಗಳನ್ನು ತೊಡೆದು ಹಾಕಲು ಪ್ರಯತ್ನಿಸಬೇಕೆಂದು ಹೇಳಿದರು. ಮಾನವೀಯ ಸಂಬಂಧಗಳನ್ನು ಬೆಸೆಯುವಲ್ಲಿ ಪೊಲೀಸ್ ಇಲಾಖೆ ಕೊಂಡಿಯಂತೆ ಕೆಲಸ ಮಾಡುತ್ತದೆ. ಸತಿ ಪತಿಗಳ ಸಂಬಂಧ ಮುರಿದು ಹಾಕದೆ ಒಂದುಗೂಡಿಸಿದರೆ, ಸಾಕಷ್ಟು ಸಮಸ್ಯೆಗಳಿಗೆ ಪರಿಹಾರ ಸಿಕ್ಕಂತಾಗುತ್ತದೆ ಎಂದರು.
ನ್ಯಾಯವಾದಿ ಎಸ್. ಸುಜಾತಾ ಮಾತನಾಡಿ, ಮಹಿಳೆಯರು ಮೊದಲು ಅಕ್ಷರವಂತರಾಗಿ ಕಾನೂನು ತಿಳಿವಳಿಕೆ ಪಡೆದಾಗ ಸಮಾಜದ ಎಲ್ಲ ಕ್ಷೇತ್ರಗಳಲ್ಲಿ ಮುಂದುವರಿಯಲು ಸಾಧ್ಯ. ಕ್ಷಣಿಕ ಸುಖಕ್ಕೆ ಮಹಿಳೆಯರು, ಶಾಲಾ ಬಾಲಕಿಯರು, ಸಣ್ಣ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿರುವುದು ದುರಂತ ಎಂದರು.
ಮಹಿಳಾ ಸಾಂತ್ವನ ಕೇಂದ್ರಗಳು, ಮಹಿಳಾ ಸಂಘಗಳು ಮಹಿಳೆಯರಿಗೆ ರಕ್ಷಣೆ ನೀಡುತ್ತಿವೆ. ಸಂತ್ರಸ್ತರನ್ನು ಸಾಂತ್ವನ ಕೇಂದ್ರಗಳಲ್ಲಿ ಇಟ್ಟುಕೊಂಡು ಸಹಾಯ ಮಾಡಿ ಸಮಾಜದಲ್ಲಿ ಉತ್ತಮವಾಗಿ ಬದುಕು ದಾರಿ ತಿಳಿಸಿಕೊಡುವ ಕೆಲಸ ಮಾಡಿದಂತಾಗುತ್ತದೆ ಎಂದರು.
ಎನ್ನೆಸ್ಸೆಸ್ ಅಧಿಕಾರಿ ಸುರೇಶ್, ಕಾಲೇಜು ಉಪ ಪ್ರಾಚಾರ್ಯೆ ಭುವನೇಶ್ವರಿ ಬಿ. ಕುಲಕರ್ಣಿ ಮಾತನಾಡಿದರು. ವಕೀಲರಾದ ಜಲಜಾಕ್ಷಿ ಉಪಸ್ಥಿತರಿದ್ದರು. ಸೌಮ್ಯಾ ಸ್ವಾಗತಿಸಿದರು, ಪೂಜಾ ನಿರೂಪಿಸಿದರು, ಆಸ್ಮಾ ವಂದಿಸಿದರು.
ಸುರತ್ಕಲ್: 12ರಂದು ದತ್ತಿ ಉಪನ್ಯಾಸ
ಹೊಸಪೇಟೆ: ಹಂಪಿ ಕನ್ನಡ ವಿಶ್ವವಿದ್ಯಾಲಯದ ಭಾಷಾಂತರ ಅಧ್ಯಯನ ವಿಭಾಗ ಮತ್ತು ಸುರತ್ಕಲ್ ಗೋವಿಂದದಾಸ ಕಾಲೇಜು ಆಶ್ರಯದಲ್ಲಿ ಅಮ್ಮೆಂಬಳ ಶಂಕರನಾರಾಯಣ ನಾವಡ ದತ್ತಿ ಉಪನ್ಯಾಸ ಕಾರ್ಯಕ್ರಮ ಸುರತ್ಕಲ್ನ ಗೋವಿಂದದಾಸ ಕಾಲೇಜು ಸಭಾಂಗಣದಲ್ಲಿ ಮಾ. 12ರಂದು ಮಂಗಳವಾರ ಮಧ್ಯಾಹ್ನ 2.30ಕ್ಕೆ ನಡೆಯಲಿದೆ. ಸುರತ್ಕಲ್ನ ವಿದ್ಯಾದಾಯಿನಿ ವಿದ್ಯಾ ಸಂಸ್ಥೆಗಳ ಕಾರ್ಯದರ್ಶಿ ಪ್ರೊ ಗಿರಿಧರ ಹತ್ವಾರ್ ಉದ್ಘಾಟಿಸುವರು. ಹಂಪಿ ಕನ್ನಡ ವಿವಿ ಭಾಷಾಂತರ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ ಕರೀಗೌಡ ಬೀಚನಹಳ್ಳಿ ಅಧ್ಯಕ್ಷತೆ ವಹಿಸುವರು. ಹಿರಿಯಡ್ಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ ಪಾದೆಕಲ್ಲು ವಿಷ್ಣುಭಟ್ಟರು ಪ್ರೊ ಎಸ್.ವಿ. ಪರಮೇಶ್ವರ ಭಟ್ಟರ ಶಾಕುಂತಲ ಅನುವಾದ ಕುರಿತು ಉಪನ್ಯಾಸ ನೀಡುವರು ಎಂದು ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

