ಬಳ್ಳಾರಿ

ಬಿಎಸ್ಸಾರ್ ಸೋಲಿಗೆ ಷಡ್ಯಂತ್ರಗಳೇ ಕಾರಣ

Published On :

ಬಳ್ಳಾರಿ: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಎಸ್ಸಾರ್ ಪಕ್ಷದ ವಿರುದ್ಧ ಹಲವು ಷಡ್ಯಂತ್ರಗಳು ನಡೆದಿವೆ, ಇದು ಪಕ್ಷದ ಸೋಲಿಗೆ ಕಾರಣವಾಗಿದೆ ಎಂದು ಪಕ್ಷದ ಸಂಸ್ಥಾಪಕ ಬಿ. ಶ್ರೀರಾಮುಲು ಆರೋಪಿಸಿದರು. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಜನತೆಯ ನಿರ್ಣಯಕ್ಕೆ ತಲೆಬಾಗುತ್ತಿದ್ದು, ಫಲಿತಾಂಶ ಯಾವುದೇ ಕಾರಣಕ್ಕೂ ಮುಂಬರುವ ವಿಧಾನಸಭೆ ಚುನಾವಣೆಯ ದಿಕ್ಸೂಚಿಯಲ್ಲ ಎಂದು ತಿಳಿಸಿದರು.
ಚುನಾವಣಾ ಮುನ್ನ ಪಕ್ಷದಲ್ಲಿಯೂ ಹಲವು ಗೊಂದಲಗಳಾಗಿದ್ದು, ಬಿ ಫಾರ್ಮ್ ಬದಲಿಗೆ ಡಿ ಫಾರ್ಮ್ ಕೊಡುವ, ಅಭ್ಯರ್ಥಿಗಳಿಗೆ ನಿಗದಿತ ವೇಳೆಗೆ ಡಿ ಫಾರ್ಮ್ ತಲುಪಿಸುವ ಹಿನ್ನೆಲೆಯಲ್ಲಿ ಪಕ್ಷ ಗೊಂದಲಕ್ಕೀಡಾಗಿದೆ. ಇಡೀ ಕ್ಷೇತ್ರದ ಅಭಿವೃದ್ಧಿ ಹಿನ್ನೆಲೆಯಲ್ಲಿ ವಿಧಾನಸಭೆ ಚುನಾವಣೆ ನಡೆಯುವುದರಿಂದ ಮುಂಬರುವ ಚುನಾವಣೆಯಲ್ಲಿ ಪಕ್ಷಕ್ಕೆ ಹಾನಿಯಾಗುವುದಿಲ್ಲ ಎಂದರು.
ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿನ ಫಲಿತಾಂಶದಿಂದಾಗಿ ಜನತೆ ತಮ್ಮ ಪಕ್ಷವನ್ನು ಕೈ ಬಿಟ್ಟಿದ್ದಾರೆ ಎಂಬ ನೋವಿದೆ. ನಮ್ಮಿಂದ ಹಲವು ತಪ್ಪುಗಳಾಗಿರಬಹುದು. ಅವೇ ಸೋಲಿಗೆ ಕಾರಣವೂ ಆಗಬಹುದು. ಅವುಗಳನ್ನು ನಾವು ಅಲ್ಲಗಳೆಯುವುದಿಲ್ಲ. ಮುಂದಿನ ದಿನಗಳಲ್ಲಿ ತಪ್ಪುಗಳನ್ನು ಸರಿಪಡಿಸಿಕೊಂಡು ಜನರ ಮುಂದೆ ಹೋಗುತ್ತೇವೆ. ಮುಂದಿನ ಚುನಾವಣೆಯಲ್ಲಿ ಜನರು ನಮ್ಮ ಕೈ ಹಿಡಿಯಲಿದ್ದಾರೆ ಎಂದು ವಿಶ್ವಾಸವ್ಯಕ್ತಪಡಿಸಿದರು. ಪತ್ರಿಕಾಗೋಷ್ಠಿಯಲ್ಲಿ ಬಿಎಸ್ಸಾರ್ ಮುಖಂಡರಾದ ಡಾ. ಮಹಿಪಾಲ್, ಗುರುಲಿಂಗನಗೌಡ, ಕೆ. ಬಸವರಾಜ್ ಸೇರಿದಂತೆ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.