ಕಾಂಗ್ರೆಸ್ ಸೇಡಿನ ರಾಜಕಾರಣ ಮಾಡಲ್ಲ
ಬಳ್ಳಾರಿ: ಕಾಂಗ್ರೆಸ್ ಯಾವತ್ತಿಗೂ ಸೇಡಿನ ರಾಜಕೀಯ, ದುರಾಡಳಿತ ಮಾಡಲ್ಲ, 35 ವಾರ್ಡ್‌ಗಳ ಸದಸ್ಯರನ್ನು ಪರಿಗಣನೆಗೆ ತೆಗೆದುಕೊಂಡು ಎಲ್ಲ ವಾರ್ಡ್‌ಗಳ ಅಭಿವೃದ್ಧಿಗೆ ಶ್ರಮಿಸಲಾಗುತ್ತದೆ ಎಂದು ವಿಧಾನಪರಿಷತ್ ಮಾಜಿ ಸದಸ್ಯ ಕೆ.ಸಿ. ಕೊಂಡಯ್ಯ ಅವರು ತಿಳಿಸಿದರು.
ನಗರದ ಖಾಸಗಿ ಹೋಟೆಲ್‌ನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಮ್ಮ ಪಕ್ಷದವರನ್ನು ಮಾತ್ರ ಪರಿಗಣಿಸದೆ, ಎಲ್ಲ ಪಕ್ಷದ ಸದಸ್ಯರನ್ನು ಪರಿಗಣಿಸಿ ನಗರದ ಸರ್ವತೋಮುಖ ಅಭಿವೃದ್ಧಿ ಶ್ರಮಿಸಲಾಗುತ್ತದೆ. ಹಿಂದಿನ ಆಡಳಿತದವರು ಮಾಡಿರುವಂತೆ ಸೇಡಿನ ರಾಜಕಾರಣ ಮಾಡುವುದಿಲ್ಲ. ಪಾಲಿಕೆಯಲ್ಲಿನ ಯೋಜನೆ, ಕಾಮಗಾರಿಗಳ ಕುರಿತು ಪರಿಶೀಲನೆ ಮಾಡಿ ಅಭಿವೃದ್ಧಿ ಪಡಿಸಲಾಗುತ್ತದೆ ಎಂದರು.
ಕಾಂಗ್ರೆಸ್ ನಗರ ಜಿಲ್ಲಾ ಘಟಕದ ಅಧ್ಯಕ್ಷ ಜೆ.ಎಸ್. ಆಂಜನೇಯಲು ಮಾತನಾಡಿ, ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್‌ನ 26 ಅಭ್ಯರ್ಥಿಗಳ ಗೆಲುವಿಗೆ ಕಾರಣರಾದ ಎಲ್ಲ ಮತದಾರರಿಗೆ ಅಭಿನಂದನೆ ತಿಳಿಸುತ್ತೇನೆ. ಪಾಲಿಕೆಯಲ್ಲಿ ನಡೆದ ಅವ್ಯವಹಾರಗಳ ಕುರಿತಾಗಿ ಮುಂಬರುವ ದಿನಗಳಲ್ಲಿ ತನಿಖೆಗೆ ಒಳಪಡಿಸಲಾಗುತ್ತದೆ. ಪಾಲಿಕೆಯಲ್ಲಿನ ಟೆಂಡರ್, ಕಸ ವಿಲೇವಾರಿ ಸೇರಿದಂತೆ ಇತರೆ ಕಾಮಗಾರಿಗಳಲ್ಲಿ ಸಾಕಷ್ಟು ಅವ್ಯವಹಾರ ನಡೆದಿವೆ. ಈ ಬಗ್ಗೆ ತನಿಖೆಗೊಳಪಡಿಸುತ್ತದೆ ಎಂದರು.
ಕಾಂಗ್ರೆಸ್ ಮುಖಂಡ ಎನ್. ಪ್ರತಾಪ ರೆಡ್ಡಿ ಮಾತನಾಡಿ, ಚುನಾವಣೆಯಲ್ಲಿ ಗೆಲುವು ಸಾಧಿಸಿದ ಪ್ರತಿಯೊಬ್ಬ ಅಭ್ಯರ್ಥಿಗಳು ಜನರ ಮೇಲೆ ಅಧಿಕಾರ ಚಲಾಯಿಸದೇ, ಅವರೊಂದಿಗೆ ಉತ್ತಮ ಬಾಂಧವ್ಯ ಸಾಧಿಸಬೇಕು. ಇಲ್ಲವಾದಲ್ಲಿ ಭವಿಷ್ಯದಲ್ಲಿ ನಮ್ಮನ್ನೂ ಜನರು ಕೈಬಿಡುತ್ತಾರೆ. ಹೀಗಾಗಿ ತಮ್ಮ ತಮ್ಮ ವಾರ್ಡ್‌ಗಳಲ್ಲಿ ಕಚೇರಿಯನ್ನು ತೆರೆದು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ತಿಳಿಸಿದರು. ಕಾಂಗ್ರೆಸ್ ಮುಖಂಡರಾದ ಅಲ್ಲಂ ವೀರಭದ್ರಪ್ಪ, ರಾಜ್ಯಸಭಾ ಸದಸ್ಯ ಅನಿಲ್ ಲಾಡ್, ಅಬ್ದುಲ್ ವಹಾಬ್ ಮಾತನಾಡಿದರು. ಕೋನಂಕಿ ರಾಮಪ್ಪ, ರಾಮ್‌ಪ್ರಸಾದ್, ಪಾಲಿಕೆ ನೂತನ ಸದಸ್ಯೆ ಪರ್ವೀನ್ ಬಾನು, ವಿ.ಎನ್. ಗಿರಿಮಲ್ಲಪ್ಪ, ಅಸುಂಡಿ ಶಿವರಾಮ್, ಸದಾಶಿವಪ್ಪ, ದಳವಾಯಿ ಸಿದ್ದಪ್ಪ, ಪಕ್ಷದ ಮುಖಂಡರು, ಕಾರ್ಯಕರ್ತರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

