ಬಳ್ಳಾರಿ

ಇಪ್ಪತ್ತು ವರ್ಷಗಳ ಬಳಿಕ ಮತ್ತೆ ಗದ್ದುಗೆ ಏರಿದ ಕಾಂಗ್ರೆಸ್

Published On :

ಮಲ್ಲಿಗೆನಾಡು ಹೂವಿನಹಡಗಲಿ ಪುರಸಭೆಯಲ್ಲಿ 20 ವರ್ಷಗಳ ಬಳಿಕ ಮತ್ತೆ ಕಾಂಗ್ರೆಸ್ ವಶವಾಗಿದೆ. ಮಾಜಿ ಉಪ ಮುಖ್ಯಮಂತ್ರಿ ಎಂ.ಪಿ. ಪ್ರಕಾಶ ಅವರ ಆದರ್ಶ ಆಡಳಿತವನ್ನು ಜನತೆ ನೆನೆಯುತ್ತಾರೆ. ಈ ಬಾರಿ ಜಿಲ್ಲಾಧ್ಯಕ್ಷ ಎಂ.ಪಿ. ರವೀಂದ್ರ ಅವರು ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಶ್ರಮಿಸಿದ್ದಾರೆ. ಸ್ಥಳೀಯ ಕಾಂಗ್ರೆಸ್ ನಾಯಕರು ಬಂಡಾಯ, ಭಿನ್ನಮತ ಬದಿಗೊತ್ತಿ ಒಮ್ಮತದಿಂದ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದರು. ಹೀಗಾಗಿ 14 ವಾರ್ಡ್‌ಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯ ಗಳಿಸಲು ಸಾಧ್ಯವಾಯಿತು. 1994ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿತ್ತು. ಬಳಿಕ ಪುರಸಭೆಯಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬರಲು ಸಾಧ್ಯವಾಗಿರಲಿಲ್ಲ. ಎಂ.ಪಿ. ಪ್ರಕಾಶ್ ಕಾಂಗ್ರೆಸ್ ಸೇರಿದ ಬಳಿಕ ತಾಲೂಕಿನಲ್ಲಿ ಕಾಂಗ್ರೆಸ್ ಚೇತರಿಕೆ ಕಂಡಿತ್ತಾದರೂ ಅಧಿಕಾರದ ಕನಸು ನನಸಾಗಿರಲಿಲ್ಲ. ಆದರೆ ಈ ಬಾರಿ ಕಾಂಗ್ರೆಸ್ ನಾಯಕರು ಮುಖದಲ್ಲಿ ಮುಗುಳ್ನಗೆ ಕಾಣಿಸಿದೆ. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಂ.ಪಿ. ರವೀಂದ್ರ ಅವರು ನಿರಂತರವಾಗಿ ಎಲ್ಲ ವಾರ್ಡ್‌ಗಳಲ್ಲಿ ಸಂಚಾರ ಮಾಡಿ, ಮತದಾರರ ಮನವೊಲಿಸಿವ ಕಾರ್ಯ ನಡೆಸಿದ್ದರು. ಅವರ ಶ್ರಮ ಫಲ ನೀಡಿದೆ. ಆಡಳಿತಾರೂಢ ಬಿಜೆಪಿ ಪಕ್ಷದ ಒಳಜಗಳ, ದುರಾಡಳಿತದಿಂದ ಬೇಸತ್ತ ಪಟ್ಟಣದ ಜನತೆ ಕೂಡ ಬಿಜೆಪಿಯನ್ನು ಇಲ್ಲಿ ತಿರಸ್ಕರಿಸಿದ್ದಾರೆ. ಇದು ಕ್ರಮೇಣ ಕಾಂಗ್ರೆಸ್‌ಗೆ ವರವಾಗಿ ಪರಿಣಮಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.