ಇಬ್ಬರು ಬೈಕ್ ಕಳ್ಳರ ಬಂಧನ
ಹೊಸಪೇಟೆ: ಇಬ್ಬರು ಬೈಕ್ ಕಳ್ಳರನ್ನು ಬಂಧಿಸಿ ಅವರಿಂದ ಸುಮಾರು ರು. 1.2 ಲಕ್ಷ ಮೌಲ್ಯದ 3 ಬೈಕ್ಗಳನ್ನು ವಶಪಡಿಸಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ಇಲ್ಲಿನ ಚಿತ್ತವಾಡ್ಗಿ ನಿವಾಸಿಗಳಾದ ಎಸ್. ಕೆ. ಇಮ್ತಿಯಾಜ್ ಹಾಗೂ ಅಕ್ಬರ್ಮೀಯಾ ಎಂಬುವರನ್ನು ಗ್ರಾಮಾಂತರ ಪೊಲೀಸರು ಬಂಧಿಸಿ, ಅವರಿಂದ 3 ಬೈಕ್ಗಳನ್ನು ವಶಪಡಿಸಿಕೊಂಡು ಆರೋಪಿಗಳನ್ನು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ಡಿವೈಎಸ್ಪಿ ರಶ್ಮಿ ಪರಡ್ಡಿ ಹಾಗೂ ಗ್ರಾಮಾಂತರ ಠಾಣಾ ಸಿಪಿಐ ವಿ. ರಘುಕುಮಾರ್ ಮಾರ್ಗದರ್ಶನದಲ್ಲಿ ಗ್ರಾಮೀಣ ಠಾಣಾ ಪಿಎಸ್ಐ ಶಾಂತಪ್ಪ, ಎಎಸ್ಐ ವಿ. ಡಿ. ಜೋಷಿ, ಪಣಿರಾಜ, ಮಹಮದ್ ರಫಿ, ವೀರೇಶ್, ನಾಗರಾಜ್, ಕೋರಿ ಕೃಷ್ಣ, ಕುಮಾರಸ್ವಾಮಿ ಕಾರ್ಯಾಚರಣೆ ನಡೆಸಿ ಬೈಕ್ ಕಳ್ಳರನ್ನು ಬಂಧಿಸಿದ್ದಾರೆ.
ಪತಿ ಕಿರುಕುಳ: ಮಹಿಳೆ ನೇಣಿಗೆ ಶರಣು
ಹೊಸಪೇಟೆ: ಗಂಡನಿಂದ ಮಾನಸಿಕ ಕಿರುಕುಳ ತಾಳಲಾರದೆ ಮಹಿಳೆಯೋರ್ವಳು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ಗುರುವಾರ ನಡೆದಿದೆ. ಸ್ಥಳೀಯ ನಿವಾಸಿ ಕುಟ್ಟಿಯಮ್ಮ ಸುರೇಶ್ (27) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಪತಿ ಸುರೇಶ್ ಕಳೆದ ಎರಡು ವರ್ಷಗಳಿಂದ ತನ್ನ ಹೆಂಡತಿಗೆ ತವರು ಮನೆಯಿಂದ ಹಣ ತೆಗೆದುಕೊಂಡು ಬರುವಂತೆ ಕಿರುಕುಳ ನೀಡುತ್ತಿರುವುದರಿಂದ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಮೃತ ಕುಟ್ಟಿಯಮ್ಮ ಸಹೋದರ ಸೆಲ್ವಂ ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

