ವಿಷಸೇವಿಸಿ ವ್ಯಕ್ತಿ ಆತ್ಮಹತ್ಯೆ
ಬಳ್ಳಾರಿ: ಹೊಟ್ಟೆನೋವಿನ ಬಾಧೆ ತಾಳಲಾರದೆ ವ್ಯಕ್ತಿಯೋರ್ವ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಜಾಲಿಬೆಂಚಿ ಗ್ರಾಮದಲ್ಲಿ ನಡೆದಿದೆ.
ಮೃತನ್ನು ಗ್ರಾಮದ ಶಿವಣ್ಣ (35) ಎಂದು ಗುರುತಿಸಲಾಗಿದೆ. ಈತನಿಗೆ ಹೊಟ್ಟೆನೋವು ಉಲ್ಬಣಿಸಿರುವ ಹಿನ್ನೆಲೆಯಲ್ಲಿ ಬುಧವಾರ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ, ಕೂಡಲೇ ವಿಮ್ಸ್ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ವಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.
ಈ ಕುರಿತಾಗಿ ಮೋಕಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲಾರಿ ಡಿಕ್ಕಿ: ವ್ಯಕ್ತಿ ಸಾವು
ಬಳ್ಳಾರಿ: ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರವಾಹನ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದ ಘಟನೆ ನಗರದ ಬೆಂಗಳೂರು ರಸ್ತೆಯ ಬೈಪಾಸ್ ಸಮೀಪದಲ್ಲಿ ಸಂಭವಿಸಿದೆ. ಮೃತನನ್ನು ಮುಂಡರಗಿ ಗ್ರಾಮದ ವೆಂಕಟೇಶ್ (45) ಎಂದು ಗುರುತಿಸಲಾಗಿದೆ. ಈತನು ಗುರುವಾರ ಬೆಳಗ್ಗೆ 4.30 ಸುಮಾರಿಗೆ ಬಳ್ಳಾರಿ ನಗರದಿಂದ ಮುಂಡ್ರಿಗಿಯತ್ತ ಹೋಗುತ್ತಿರುವಾಗ ಬೆಂಗಳೂರು ರಸ್ತೆಯ ಬೈಪಾಸ್ ಸಮೀಪ ಅಪರಿಚತ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ವೆಂಕಟೇಶ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಈ ಕುರಿತು ಬಳ್ಳಾರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

