ಕನ್ನನಾಯಕನಕಟ್ಟೆ ಶಾಲೆಗೆ ಪರಿಸರ ಮಿತ್ರ ಪ್ರಶಸ್ತಿ
ಕೊಟ್ಟೂರು: ಪರಿಸರ ಮಿತ್ರ ಶಾಲಾ ಪ್ರಶಸ್ತಿ ಇಲ್ಲಿಗೆ ಸಮೀಪದ ಕನ್ನನಾಯಕನಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ದೊರಕಿದೆ.
ಈ ಸಂಬಂಧ ಇತ್ತೀಚೆಗೆ ಬಳ್ಳಾರಿಯಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಸಂಡೂರು ಪರಿಸರ ಶಿಕ್ಷಣ ಮತ್ತು ಅಭಿವೃದ್ಧಿ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಸಮಾರಂಭದಲ್ಲಿ ಕನ್ನನಾಯಕನಕಟ್ಟೆ ಶಾಲಾ ಮುಖ್ಯೋಪಾಧ್ಯಾಯ ಮತ್ತು ಸಿಬ್ಬಂದಿಗೆ ಪರಿಸರ ಮಿತ್ರ ಪ್ರಶಸ್ತಿ ಫಲಕ ಮತ್ತು ರು. 20 ಸಾವಿರ ನಗದು ಹಣವನ್ನು ವಿತರಿಸಲಾಯಿತು. ಕನ್ನನಾಯಕನಕಟ್ಟೆ ಶಾಲಾ ಆವರಣ ಮತ್ತು ಗ್ರಾಮದಲ್ಲಿ ಪರಿಸರ ಸ್ವಚ್ಛತೆ ಮತ್ತು ನೈರ್ಮಲ್ಯದ ಗುಣಮಟ್ಟವನ್ನು ಹೆಚ್ಚಿಸುವಲ್ಲಿ ಈ ಶಾಲೆಯ ಶಿಕ್ಷಕರು ಹೆಚ್ಚು ಮುತುವರ್ಜಿ ವಹಿಸಿದ್ದನ್ನು ಗಮನಿಸಿ ಈ ಪ್ರಶಸ್ತಿ ನೀಡಲಾಗಿದೆ. ಶಾಲಾ ಸಿಬ್ಬಂದಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ, ಕ್ಷೇತ್ರ ಸಮನ್ವಯಾಧಿಕಾರಿ ಮೈಲೇಶ್ ಬೇವೂರು, ಆಹಾರ ನಿರ್ದೇಶಕ ಕುಮಾರ್, ಇಸಿಓ ಹೆಗ್ಗನಗೌಡರ್, ಸಂಪನ್ಮೂಲ ವ್ಯಕ್ತಿ ಪಾಲಾಕ್ಷ, ಎಸ್ಡಿಎಂಸಿ ಅಧ್ಯಕ್ಷ ರೇವಣಸಿದ್ದಪ್ಪ ಮತ್ತಿತರರು ಪ್ರಶಸ್ತಿ ಪಡೆದಿದ್ದಕ್ಕಾಗಿ ಅಭಿನಂದಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

