ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಸನ್ನದ್ಧ: ಸತೀಶ್ ಜಾರಕಿಹೊಳಿ
ಕೊಟ್ಟೂರು: ಗೆಲುವು ಕಾಂಗ್ರೆಸ್ ಬಾಗಿಲಿನ ಹೊಸ್ತಿಲಲ್ಲಿದ್ದು, ಇದರ ಸದವಕಾಶ ಕೊಂಚವೂ ಸಡಿಲವಾಗದಂತೆ ಜಾಗೃಕತೆ ವಹಿಸಿ ಬರಲಿರುವ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಅಣಿಗೊಳಿಸಲಾಗುತ್ತಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸತೀಶ್ ಜಾರಕಿಹೊಳಿ ಹೇಳಿದರು. ಕಾಂಗ್ರೆಸ್ ಮುಖಂಡ ಹರ್ಷವರ್ಧನ್ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಚುನಾವಣೆಯನ್ನು ಎದುರಿಸಲು ಸರ್ವ ಸನ್ನದ್ಧವಾಗಿದೆ. ಈ ನಿಟ್ಟಿನಲ್ಲಿ ಎಲ್ಲ ಸ್ತರಗಳಲ್ಲಿ ಸಿದ್ಧತೆಗಳು ನಡೆದಿವೆ. ಪಕ್ಷಕ್ಕೆ ಗೆಲ್ಲುವುದೇ ಪರಮ ಗುರಿ. ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಗೊಳಿಸಲು ನಿರ್ದಿಷ್ಟ ಮಾರ್ಗಸೂಚಿಗಳನ್ನು ಈಗಾಗಲೇ ಪಕ್ಷದ ಹೈಕಮಾಂಡ್ ಸೂಚಿಸಿ ಈ ನಿಟ್ಟಿನತ್ತ ಸಾಗಿದೆ ಎಂದರು.
ತಗಾದೆ ಇಲ್ಲ: ತಮ್ಮ ಸಹೋದರ ಬಾಲಚಂದ್ರ ಜಾರಕಿಹೊಳಿ ಬಿಜೆಪಿ ಶಾಸಕರೊಂದಿಗೆ ಕಾಂಗ್ರೆಸ್ಗೆ ಸೇರುವ ಪ್ರಯತ್ನದ ಕುರಿತ ಪ್ರಶ್ನೆಗೆ ಉತ್ತರಿಸಿದ ಸತೀಶ್, ಸಹೋದರ ಬಾಲಚಂದ್ರ ಕಾಂಗ್ರೆಸ್ಗೆ ಬರುವುದಕ್ಕೆ ಹೈಕಮಾಂಡ್ ಅವಕಾಶ ಮಾಡಿಕೊಟ್ಟರೆ ನನ್ನದು ಅಭ್ಯಂತರವಾಗಲಿ, ಅಸಮಾಧಾನವಾಗಲಿ ಇಲ್ಲ ಎಂದರು.
ಚಿತ್ರದುರ್ಗದಲ್ಲಿ ಸಮಾವೇಶ: ಕಾಂಗ್ರೆಸ್ ಎಸ್ಟಿ ವಿಭಾಗದ ರಾಜ್ಯಧ್ಯಕ್ಷ ಟಿ. ಈಶ್ವರ್ ಮಾತನಾಡಿ, ನಾಯಕ ಜನಾಂಗ ಕಾಂಗ್ರೆಸ್ಸಿನ ಬೆಂಬಲಕ್ಕಿದ್ದು, ಏಪ್ರಿಲ್ನಲ್ಲಿ ಚಿತ್ರದುರ್ಗದಲ್ಲಿ ಎಸ್ಟಿ ಸಮಾವೇಶ ಆಯೋಜಿಸಲಾಗಿದೆ. ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು. ಅಭ್ಯರ್ಥಿಗಳ ಗೆಲವಿಗೆ ಕಾರಣರಾದ ಎಂ.ಎಂ.ಜೆ. ಹರ್ಷವರ್ಧನ್, ಪಿ.ಎಚ್. ದೊಡ್ಡರಾಮಣ್ಣ ಅವರನ್ನು ಜಾರಕಿಹೊಳಿ ಅಭಿನಂದಿಸಿದರು. ಮಾಜಿ ಶಾಸಕ ಎನ್.ಟಿ. ಬೊಮ್ಮಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಯು. ಪರಮೇಶ್ವರಯ್ಯ, ಉದಯ ಜನ್ನು, ಗುಜ್ಜಲ ರಘು, ಜಿಪಂ ಸದಸ್ಯ ಕೆ.ಎಂ. ಶಶಿಧರ, ದೇವರಮನಿ ಕೊಟ್ರೇಶ್, ಗುಂಡುಮುಣುಗು ತಿಪ್ಪೇಸ್ವಾಮಿ, ವೆಂಕಟೇಶ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

