ಬಳ್ಳಾರಿ

ಇಂದು ಮಾಹಿತಿ ಕಾರ್ಯಕ್ರಮ

Published On :

ಬಳ್ಳಾರಿ: ಜಿಲ್ಲಾ ರೋಗವಾಹನ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿಯಿಂದ ಬಳ್ಳಾರಿಯ ಪತ್ರಿಕಾ ಮಾಧ್ಯಮದವರಿಗಾಗಿ ಮಾ. 16ರಂದು ಬೆಳಗ್ಗೆ 11 ಗಂಟೆಗೆ ಡೆಂಘೀ ಜ್ವರ ಕುರಿತು ಮಾಹಿತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ತರಬೇತಿಯು ಅನಂತಪುರ ರಸ್ತೆಯಲ್ಲಿನ ಜಿಲ್ಲಾ (ಗೋಷಿಯಾ) ಆಸ್ಪತ್ರೆಯ ಸಭಾಂಗಣದಲ್ಲಿ ನಡೆಯಲಿದೆ. ಮಾಧ್ಯಮ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಜಿಲ್ಲಾ ರೋಗವಾಹನ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಕೋರಿದ್ದಾರೆ.
ಮರಕ್ಕೆ ವಾಹನ ಡಿಕ್ಕಿ: ಓರ್ವ ಸಾವು
ಬಳ್ಳಾರಿ: ಟೊಯೋಟಾ ವಾಹನವೊಂದು ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, ಐದು ಜನರಿಗೆ ಗಾಯವಾಗಿರುವ ಘಟನೆ ನಗರದ ಹೊರವಲಯದ ಕಂಟ್ರಿಕ್ಲಬ್ ಸಮೀಪದಲ್ಲಿ ಗುರುವಾರ ರಾತ್ರಿ ನಡೆದಿದೆ. ಮೃತನನ್ನು ಇಂಡಿಯನ್ ಪಿಯು ಕಾಲೇಜು ಆಡಳಿತ ಮಂಡಳಿಯ ಮಹ್ಮದ್ ರೆಹಮತುಲ್ಲಾ (54) ಎಂದು ಗುರುತಿಸಲಾಗಿದೆ. ಮೃತನ ಪತ್ನಿ ಶಾಹೀದಾಬೇಗಂ, ಮಕ್ಕಳಾದ ಅಲೀಮ್ (17), ಅಜೀಂ ನವಾಜ್ (14), ಚಾಲಕ ದಾದಾಪೀರ್, ಸಂಬಂಧಿ ಮುನ್ನಾ ಅಹ್ಮದ್ ಗಾಯಗೊಂಡಿದ್ದಾರೆ. ರೆಹಮತ್ ಅವರು ತಮ್ಮ ಕುಟುಂಬದೊಂದಿಗೆ ಹುಬ್ಬಳ್ಳಿಗೆ ಹೋಗಿ ಬರುತ್ತಿರುವಾಗ ರಾತ್ರಿ 12.30 ಸುಮಾರಿಗೆ ಈ ಘಟನೆ ನಡೆದಿದೆ. ಕೂಡಲೇ ವಿಮ್ಸ್ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ರೆಹಮತುಲ್ಲಾ ರಾತ್ರಿ 2 ಗಂಟೆ ಸುಮಾರಿಗೆ ಸಾವನ್ನಪ್ಪಿದ್ದಾರೆ. ಇನ್ನುಳಿದ ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಕುರಿತು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಿಳೆ ಶವ ಪತ್ತೆ
ಬಳ್ಳಾರಿ: ತಾಲೂಕಿನ ಕೋಳೂರು ಕ್ರಾಸ್ ಸಮೀಪದಲ್ಲಿ 15-20 ದಿನಗಳ ಹಿಂದೆ ಸಾವಿಗೀಡಾದ ಮಹಿಳೆಯ ಅಸ್ತಿ ಪಂಜರವುಳ್ಳ ಶವ ಪತ್ತೆಯಾಗಿದೆ.
ಮಹಿಳೆಯ ಗುರುತು ಸಿಕ್ಕಿಲ್ಲ. ಕೋಳೂರು ಕ್ರಾಸ್‌ನ ದಮ್ಮೂರು ರಸ್ತೆಯ ಎಡಭಾಗದ ಗದ್ದೆಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದ್ದು, ಪೊಲೀಸರು ಅನುಮಾನಾಸ್ಪದ ಸಾವು ಎಂದು ದೂರು ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ. ಈ ಕುರಿತು ಕುರುಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.